ಇಂದು ನಡೆಯಲಿದೆ ಟೆಕ್ನೋ ಪಾಪ್ 7 ಪ್ರೊ ಫಸ್ಟ್ ಸೇಲ್! ಬೆಲೆ ಎಷ್ಟು?
ಟೆಕ್ ವಲಯದಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದ್ದ ಟೆಕ್ನೋ ಪಾಪ್ 7 ಪ್ರೊ ಕಳೆದ ವಾರ ಭಾರತಕ್ಕೆ ಎಂಟ್ರಿ ನೀಡಿತ್ತು. ತನ್ನ ವಿಭಿನ್ನ ಫೀಚರ್ಸ್ ಹಾಗೂ ಸ್ಟೈಲಿಶ್ ಲುಕ್‌ನಿಂದ ಗಮನಸೆಳೆದಿರುವ ಈ ಸ್ಮಾರ್ಟ್‌ಫೋನ್ ಇಂದು (ಫೆ.21) ಅಮೆಜಾನ್ ಪ್ಲಾಟ್‌ಫಾರ್ಮ್ ಮೂಲಕ ತನ್ನ ಫಸ್ಟ್ ಸೇಲ್ ಅನ್ನು ಅರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್‌ಕೋರ್ ಮೀಡಿಯಾಟೆಕ್ ಹಿಲಿಯೋ A22 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ.

ಹೌದು, ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ಫೋನ್ ಇಂದಿನಿಂದ ಅಮೆಜಾನ್ ಮೂಲಕ ಭಾರತದಲ್ಲಿ ಮಾರಾಟವಾಗಲಿದೆ. ಈ ಸ್ಮಾರ್ಟ್‌ಫೋನ್ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಇದನ್ನು ನೀವು ಎಂಡ್ಲೆಸ್ ಬ್ಲ್ಯಾಕ್ ಮತ್ತು ಯುಯುನಿ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಹೊಂದಿದ್ದು, 29 ದಿನಗಳ ಸ್ಟ್ಯಾಂಡ್ ಬೈ ಟೈಂ ಅನ್ನು ನೀಡಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಬೆಲೆ ಎಷ್ಟು? ಇದೆಲ್ಲದರ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಬೆಲೆ ಮತ್ತು ಲಭ್ಯತೆ
ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ಫೋನ್ ಇಂದಿನಿಂದ ಅಮೆಜಾನ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 2GB RAM ಮತ್ತು 2GB ವಿಸ್ತರಿಸಬಹುದಾದ ವರ್ಚುವಲ್ RAM ಹೊಂದಿರುವ ಬೇಸ್ ಮಾಡೆಲ್ 6,799ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 3GB RAM ಮತ್ತು 3GB ವಿಸ್ತರಿಸಬಹುದಾದ ವರ್ಚುವಲ್ RAM ಆಯ್ಕೆಯು 7,299ರೂ. ಬೆಲೆಯಲ್ಲಿ ದೊರೆಯಲಿದೆ. ಇನ್ನು ಸ್ಮಾರ್ಟ್‌ಫೋನ್ ಎಂಡ್ಲೆಸ್ ಬ್ಲ್ಯಾಕ್ ಮತ್ತು ಯುಯುನಿ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಟೆಕ್ನೋ ಪಾಪ್ 7 ಪ್ರೊ ಫೀಚರ್ಸ್ ಹೇಗಿದೆ?
ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ಫೋನ್ 6.56 ಇಂಚಿನ HD+ ಡಾಟ್ ನಾಚ್ IPS ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ. ಇದು 480 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇನ್ನು ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್, 90% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.
ಟೆಕ್ನೋ ಪಾಪ್ 7 ಪ್ರೊ ಪ್ರೊಸೆಸರ್ ಯಾವುದು?
ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್‌ಕೋರ್ ಮೀಡಿಯಾಟೆಕ್ ಹಿಲಿಯೋ A22 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ HiOS 11.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 2GB ವಿಸ್ತರಿಸಬಹುದಾದ ವರ್ಚುವಲ್ RAM +64GB ಮತ್ತು 3GB RAM ಮತ್ತು 3GB ವಿಸ್ತರಿಸಬಹುದಾದ ವರ್ಚುವಲ್ RAM + 64GB ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟೆಕ್ನೋ ಪಾಪ್ 7 ಪ್ರೊ ಕ್ಯಾಮೆರಾ ಸೆಟ್‌ಅಪ್
ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಡ್ಯುಯಲ್ ಮೈಕ್ರೋ ಸ್ಲಿಟ್ ಫ್ಲ್ಯಾಷ್‌ಲೈಟ್‌ನೊಂದಿಗೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.ಇದನ್ನು ಟಿಯರ್ ಡ್ರಾಪ್ ಕಟೌಟ್ ಸ್ಲಾಟ್‌ನಲ್ಲಿ ಇರಿಸಲಾಗಿದೆ.
ಟೆಕ್ನೋ ಪಾಪ್ 7 ಪ್ರೊ ಬ್ಯಾಟರಿ ಸಾಮರ್ಥ್ಯ
ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 29 ದಿನಗಳ ಸ್ಟ್ಯಾಂಡ್‌ಬೈ ಸಮಯವನ್ನು ಹೊಂದಿದೆ. ಜೊತೆಗೆ ಇನ್-ದಿ-ಬಾಕ್ಸ್ 10W ಟೈಪ್ C ಅಡಾಪ್ಟರ್‌ನೊಂದಿಗೆ ಪ್ಯಾಕ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ ಮತ್ತು ಬ್ಲೂಟೂತ್ 5.0 ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಇ-ದಿಕ್ಸೂಚಿ ಸೆನ್ಸಾರ್‌ಗಳನ್ನು ಒಳಗೊಂಡಿದೆ. ಈ ಫೋನ್ ಐಡಿಎ ಎಂಜಿನ್ 2.1, ಲಿಂಕ್ ಬೂಮಿಂಗ್, ಒನ್-ಟ್ಯಾಪ್ ಕ್ಲೀನ್ ಅಪ್, ಕಿಡ್ಸ್ ಮೋಡ್ ಮತ್ತು ವಿಶಾ ಪ್ಲೇಯರ್ ಅನ್ನು ಸಹ ಒಳಗೊಂಡಿದೆ.


Click it and Unblock the Notifications








