Tecno smartphone: ಟೆಕ್ನೋದ ಈ ಫೋನ್ ಕೇವಲ 6,799ರೂ. ಗೆ ಲಭ್ಯ! 64GB ಸ್ಟೋರೇಜ್... 12 MP ಕ್ಯಾಮೆರಾ
ಟೆಕ್ನೋ ಸ್ಮಾರ್ಟ್‌ಫೋನ್‌ಗಳು (Tecno smartphone) ಬಜೆಟ್ ಬೆಲೆಯಲ್ಲಿ ಪ್ರೀಮಿಯಂ ಫೀಚರ್ಸ್ ಅನಭವ ನೀಡುತ್ತವೆ. ಈಗಾಗಲೇ ಟೆಕ್ನೋ ಹಲವಾರು ವಿಭಿನ್ನ ಫೀಚರ್ಸ್ ಆಯ್ಕೆಯ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿದ್ದು, ಈ ಮೂಲಕ ಮಾರುಕಟ್ಟೆಯಲ್ಲಿ ತನ್ನದೇ ಆದ ನೆಲೆ ಕಂಡುಕೊಂಡಿದೆ. ಈ ನಡುವೆ ಟೆಕ್ನೋದ ಈ ಫೋನ್ ಆಫರ್ ಬೆಲೆಯಲ್ಲಿ ಲಭ್ಯ ಆಗುತ್ತಿದೆ.
ಹೌದು, ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ಫೋನ್ (Tecno Pop 7 Pro smartphone) ಕಡಿಮೆ ದರದಲ್ಲಿ ಲಭ್ಯ ಇದೆ. ಈ ಸ್ಮಾರ್ಟ್‌ಫೋನ್ 64GB ಸ್ಟೋರೇಜ್ ಸಾಮರ್ಥ್ಯದೊಂದಿಗೆ ಉತ್ತಮ ಫೀಚರ್ಸ್ ಅನ್ನು ಹೊಂದಿದೆ. ಅಂದರೆ, 120Hz ಟಚ್ ಸ್ಯಾಂಪ್ಲಿಂಗ್ ರೇಟ್, ಹೆಚ್‌ಡಿ ಡಿಸ್ಪ್ಲೇ, 5000mh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಅನೇಕ ಆಕರ್ಷಕ ಫೀಚರ್ಸ್ ಅನ್ನು ಈ ಫೋನ್ ಪಡೆದಿದೆ. ಹಾಗಿದ್ರೆ ಈ ಫೋನ್‌ನ ಇನ್ನಿತರೆ ಪ್ರಮುಖ ಫೀಚರ್ಸ್ ಹಾಗೂ ಈ ಫೋನ್‌ಗೆ ಲಭ್ಯ ಇರುವ ಆಫರ್ ಎಷ್ಟು ಎಂಬ ಮಾಹಿತಿ ಇಲ್ಲಿದೆ ನೋಡಿ.

ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ವಾಚ್ ಡಿಸ್ಪ್ಲೇ ವಿವರ: ಈ ಫೋನ್ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಐಪಿಎಸ್ ಡಿಸ್‌ಪ್ಲೇ (Full HD+ IPS display) ಆಯ್ಕೆ ಪಡೆದಿದ್ದು, 1612X720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹಾಗೂ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ನೊಂದಿಗೆ ಬಳಕೆದಾರರಿಗೆ ಅತ್ಯುತ್ತಮವಾದ ಅನುಭವ ನೀಡಲಿದೆ.
ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ವಾಚ್ ಪ್ರೊಸೆಸರ್ ಮಾಹಿತಿ: ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ MT6761 ಹಿಲಿಯೋ A22 ಚಿಪ್‌ಸೆಟ್ (12nm) ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದು ಕ್ವಾಡ್-ಕೋರ್ 2.0 GHz ಕಾರ್ಟೆಕ್ಸ್-A53 CPU ನೊಂದಿಗೆ ಪ್ಯಾಕ್ ಆಗಿದೆ. ಜೊತೆಗೆ ವಪರ್‌ವಿಆರ್ GE8320 GPU ಶಕ್ತಿಯೊಂದಿಗೆ 64GB ಇಂಟರ್ ಸ್ಟೋರೇಜ್ ಹಾಗೂ 4GB RAM ಆಯ್ಕೆ ಪಡೆದಿದೆ. ಉಳಿದಂತೆ ಈ ಫೋನ್ ಆಂಡ್ರಾಯ್ಡ್ 12 ಓಎಸ್ ಅನ್ನು ರನ್ ಮಾಡಲಿದೆ.

ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ವಾಚ್ ಕ್ಯಾಮೆರಾ ರಚನೆ: ಈ ಫೋನ್ ಬಜೆಟ್ ಬೆಲೆಯಲ್ಲಿ ಲಭ್ಯ ಇರುವುದರಿಂದ ಅಷ್ಟೇನು ವಿಶೇಷ ಕ್ಯಾಮೆರಾ ಫೀಚರ್ಸ್ ಆಯ್ಕೆ ಇದರಲ್ಲಿ ಇಲ್ಲ. ಅದಾಗ್ಯೂ ನೀವು ಈ ಫೋನ್‌ನಲ್ಲಿ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹಾಗೂ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕಾಣಬಹುದು. ಇದರೊಂದಿಗೆ ಡ್ಯುಯಲ್-ಎಲ್ಇಡಿ ಫ್ಲ್ಯಾಶ್, ಪನೋರಮಾ, ಹೆಚ್‌ಡಿಆರ್ ಫೀಚರ್ಸ್ ಸಿಗಲಿದೆ.
ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ವಾಚ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 10W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಇದರೊಂದಿಗೆ ವೈ-ಫೈ 802.11 b/g/n, ಬ್ಲೂಟೂತ್ ಆವೃತ್ತಿ 5.0, A2DP, LE, ಎಫ್‌ಎಮ್ ರೇಡಿಯೋ, ಯುಎಸ್‌ಬಿ ಟೈಪ್-ಸಿ 2.0 ಕನೆಕ್ಟಿವಿಟಿ ಬೆಂಬಲ ಪಡೆದುಕೊಂಡಿದೆ.
ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ವಾಚ್ ಬೆಲೆ ವಿವರ: ಇನ್ನು ನಾವು ಮೊದಲೇ ತಿಳಿಸಿದಂತೆ ಈ ಫೋನ್ ಈಗ 6799 ರೂ.ಗಳಿಗೆ ಲಭ್ಯ ಇದೆ. ಇದರ ಸಾಮಾನ್ಯ ದರ 7299 ರೂ.ಗಳಾಗಿದೆ. ಆದರೆ ಅಮೆಜಾನ್ ಹಾಗೂ ಫ್ಲಿಪ್‌ಕಾರ್ಟ್ ಎರಡರಲ್ಲೂ ಈ ಫೋನ್‌ಗೆ ಆಫರ್ ನೀಡಲಾಗಿದ್ದು, ನೀವು ಇನ್ನೂ ಕಡಿಮೆ ದರದಲ್ಲಿ ಈ ಫೋನ್ ಖರೀದಿ ಮಾಡಬೇಕು ಎಂದುಕೊಂಡರೆ ಬ್ಯಾಂಕ್ ಆಫರ್ ಬಳಕೆ ಮಾಡಿಕೊಳ್ಳಬಹುದು.

ಇನ್ನು ಫ್ಲಿಪ್‌ಕಾರ್ಟ್‌ನಲ್ಲಿ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಕೆ ಮಾಡಿ ಖರೀದಿ ಮಾಡಿದ್ರೆ ಹೆಚ್ಚುವರಿ ಡಿಸ್ಕೌಂಟ್ ಲಭ್ಯ ಆಗಲಿದೆ. ಇದರೊಂದಿಗೆ ಪಾಲುದಾರ ಆಫರ್‌ಗೆ ಸೈನ್ ಅಪ್ ಮಾಡಿ ಫ್ಲಿಪ್‌ಕಾರ್ಟ್ ಲೇಟರ್ ಪೇ ಮೂಲಕ ಖರೀದಿ ಮಾಡಿದ್ರೆ 20,000 ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಬೆನಿಫಿಟ್‌ಗಳನ್ನು ಪಡೆದುಕೊಳ್ಳಬಹುದು. ಇಷ್ಟೇ ಅಲ್ಲದೆ. ಪೇಟಿಎಮ್ ವಾಲೆಟ್‌ನಲ್ಲಿ ಕ್ಯಾಶ್‌ಬ್ಯಾಕ್, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ನಲ್ಲಿ 5% ಕ್ಯಾಶ್‌ಬ್ಯಾಕ್ ಸಿಗಲಿದೆ.


Click it and Unblock the Notifications








