Home
ಸುದ್ದಿಜಾಲ

ಭಾರತದಲ್ಲಿ ಟೆಕ್ನೋ ಪಾಪ್‌ 7 ಪ್ರೊ ಬಿಡುಗಡೆ! ಆರಂಭಿಕ ಬೆಲೆ ಕೇವಲ 6,799ರೂ.!

ಟೆಕ್ನೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಭಾರತದ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿವೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಟೆಕ್ನೋ ಪಾಪ್‌ 7 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ಕೋರ್‌ ಮೀಡಿಯಾಟೆಕ್‌ ಹಿಲಿಯೋ A22 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಭಾರತದಲ್ಲಿ ಟೆಕ್ನೋ ಪಾಪ್‌ 7 ಪ್ರೊ ಬಿಡುಗಡೆ! ಆರಂಭಿಕ ಬೆಲೆ ಕೇವಲ 6,799ರೂ.!

ಹೌದು, ಟೆಕ್ನೋ ಪಾಪ್‌ 7 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದು 4GB RAM +64GB ಮತ್ತು 6GB RAM + 64GB ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಪಾಪ್‌ 7 ಪ್ರೊ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಪಾಪ್‌ 7 ಪ್ರೊ ಸ್ಮಾರ್ಟ್‌ಫೋನ್‌ 6.56 ಇಂಚಿನ HD+ ಡಾಟ್ ನಾಚ್ IPS ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1612x720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು 20:9 ರಚನೆಯ ಅನುಪಾತವನ್ನು ಹೊಂದಿದೆ.

ಭಾರತದಲ್ಲಿ ಟೆಕ್ನೋ ಪಾಪ್‌ 7 ಪ್ರೊ ಬಿಡುಗಡೆ! ಆರಂಭಿಕ ಬೆಲೆ ಕೇವಲ 6,799ರೂ.!

ಟೆಕ್ನೋ ಪಾಪ್‌ 7 ಪ್ರೊ ಪ್ರೊಸೆಸರ್‌ ಯಾವುದು?

ಟೆಕ್ನೋ ಪಾಪ್‌ 7 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ಕೋರ್‌ ಮೀಡಿಯಾಟೆಕ್‌ ಹಿಲಿಯೋ A22 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ HiOS 11.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM +64GB ಮತ್ತು 6GB RAM + 64GB ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟೆಕ್ನೋ ಪಾಪ್‌ 7 ಪ್ರೊ ಕ್ಯಾಮೆರಾ ಸೆಟ್‌ಅಪ್‌?

ಟೆಕ್ನೋ ಪಾಪ್‌ 7 ಪ್ರೊ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಡ್ಯುಯಲ್ ಮೈಕ್ರೋ ಸ್ಲಿಟ್ ಫ್ಲ್ಯಾಷ್‌ಲೈಟ್‌ನೊಂದಿಗೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.ಇದನ್ನು ಟಿಯರ್ ಡ್ರಾಪ್ ಕಟೌಟ್ ಸ್ಲಾಟ್‌ನಲ್ಲಿ ಇರಿಸಲಾಗಿದೆ.

ಭಾರತದಲ್ಲಿ ಟೆಕ್ನೋ ಪಾಪ್‌ 7 ಪ್ರೊ ಬಿಡುಗಡೆ! ಆರಂಭಿಕ ಬೆಲೆ ಕೇವಲ 6,799ರೂ.!

ಟೆಕ್ನೋ ಪಾಪ್‌ 7 ಪ್ರೊ ಬ್ಯಾಟರಿ ಸಾಮರ್ಥ್ಯ

ಟೆಕ್ನೋ ಪಾಪ್‌ 7 ಪ್ರೊ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಅಲ್ಲದೆ ಇನ್-ದಿ-ಬಾಕ್ಸ್ 10W ಟೈಪ್ C ಅಡಾಪ್ಟರ್‌ನೊಂದಿಗೆ ಪ್ಯಾಕ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ ಮತ್ತು ಬ್ಲೂಟೂತ್ 5.0 ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಇ-ದಿಕ್ಸೂಚಿ ಸೆನ್ಸಾರ್‌ಗಳನ್ನು ಒಳಗೊಂಡಿದೆ.

ಭಾರತದಲ್ಲಿ ಟೆಕ್ನೋ ಪಾಪ್‌ 7 ಪ್ರೊ ಬೆಲೆ ಎಷ್ಟು?

ಟೆಕ್ನೋ ಪಾಪ್‌ 7 ಪ್ರೊ ಸ್ಮಾರ್ಟ್‌ಫೋನ್‌ 4GB RAM +64GB ಇಂಟರ್‌ ಸ್ಟೋರೇಜ್‌ ಬೆಲೆ 6,799ರೂ ಆಗಿದೆ. ಜೊತೆಗೆ 6GB RAM + 64GB ಇಂಟರ್‌ ಸ್ಟೋರೆಜ್‌ ಸಾಮರ್ಥ್ಯದ ಆಯ್ಕೆಗೆ 7,299ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎಂಡ್‌ಲೆಸ್ ಬಾಲ್ಕ್ ಮತ್ತು ಯುಯುನಿ ಬ್ಲೂ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Tecno Pop 7 Pro has a 6.6-inch HD+ IPS display and is powered by a quad-core chipset with up to 6GB of RAM and a maximum storage capacity of 64GB.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+