ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಟೆಕ್ನೋ ಪಾಪ್ 8!..ಡೈನಾಮಿಕ್ ಪೋರ್ಟ್ ಡಿಸ್‌ಪ್ಲೇ ವಿಶೇಷ!
ಇತ್ತೀಚಿನ ದಿನಗಳಲ್ಲಿ ಟೆಕ್ನೋ ಕಂಪೆನಿ ತನ್ನ ವೈವಿಧ್ಯಮಯ ಫೋನ್‌ಗಳಿಂದ ಸಖತ್ ಸೌಂಡ್ ಮಾಡುತ್ತಿದೆ. ಇದೀಗ ಭಾರತದ ಮಾರುಕಟ್ಟೆಯಲ್ಲಿ ತನ್ನ ಟೆಕ್ನೋ ಪಾಪ್ 8 ಸ್ಮಾರ್ಟ್‌ಫೋನ್ ಪರಿಚಯಿಸಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಕಳೆದ ವಾರ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದ್ದು, ಭಾರತದಲ್ಲಿ ಇದೇ ವಾರ ಬಿಡುಗಡೆ ಆಗಲಿದೆ ಎನ್ನಲಾಗಿದೆ.
ಹೌದು, ಟೆಕ್ನೋ ಪಾಪ್ 8 ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್ ಕಂಪನಿಯ ಆಂತರಿಕ ಡೈನಾಮಿಕ್ ಪೋರ್ಟ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆಯೇ ಅನುಷ್ಠಾನವಾಗಿದೆ. ಇದು ಯುನಿಸೋಕ್ T606 ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಫೀಚರ್ಸ್ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಪಾಪ್ 8 ಡಿಸ್‌ಪ್ಲೇ ರಚನೆ ಹೇಗಿದೆ?
ಟೆಕ್ನೋ ಪಾಪ್ 8 ಸ್ಮಾರ್ಟ್‌ಫೋನ್ 6.6 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 720 × 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ. ಇದು ಸೆಂಟರ್ಡ್ ಪಂಚ್ ಹೋಲ್ ನಾಚ್ ವಿನ್ಯಾಸವನ್ನು ಹೊಂದಿದ್ದು, ಡೈನಾಮಿಕ್ ಪೋರ್ಟ್ ಮಾದರಿಯಲ್ಲಿ ಬರಲಿದೆ.
ಟೆಕ್ನೋ ಪಾಪ್ 8 ಪ್ರೊಸೆಸರ್ ನಿರೀಕ್ಷೆ?
ಟೆಕ್ನೋ ಪಾಪ್ 8 ಸ್ಮಾರ್ಟ್‌ಫೋನ್ ಯುನಿಸೋಕ್ T606SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಜೊತೆಗೆ ಮಾಲಿ G57 GPU ಸಪೋರ್ಟ್ ಪಡೆದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 64GB ಹಾಗೂ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿರಲಿದೆ. ಇದಲ್ಲದೆ ಮೈಕ್ರೊ-SD ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟೆಕ್ನೋ ಪಾಪ್ 8 ಕ್ಯಾಮೆರಾ ಸೆಟ್‌ಅಪ್ ಏನಿದೆ?
ಟೆಕ್ನೋ ಪಾಪ್ 8 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ f/1.8 ಅಪರ್ಚರ್, AI ಲೆನ್ಸ್ ಮತ್ತು LED ಫ್ಲಾಷ್ ನೊಂದಿಗೆ ಬರಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಡ್ಯುಯಲ್ ಎಲ್ಇಡಿ ಫ್ಲ್ಯಾಷ್ನೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.
ಟೆಕ್ನೋ ಪಾಪ್ 8 ಬ್ಯಾಟರಿ ಮತ್ತು ಇತರೆ ಸೌಲಭ್ಯ
ಟೆಕ್ನೋ ಪಾಪ್ 8 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎನ್ನಲಾಗಿದೆ. ಇದು USB ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಮೂಲಕ 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 4G, ವೈಫೈ, ಬ್ಲೂಟೂತ್ ಮತ್ತು GPS ಅನ್ನು ಬೆಂಬಲಿಸಲಿದೆ.

ಟೆಕ್ನೋ ಪಾಪ್ 8 ಬೆಲೆ ಮತ್ತು ಲಭ್ಯತೆ
ಟೆಕ್ನೋ ಪಾಪ್ 8 ಸ್ಮಾರ್ಟ್‌ಫೋನ್‌ನ ನಿಖರವಾದ ಬೆಲೆಯನ್ನು ಬಹಿರಂಗಪಡಿಸಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ 7,000ರೂ ಕ್ಕಿಂತ ಕಡಿಮೆ ಬೆಲೆಯಿರುತ್ತದೆ ಎಂದು ಹೇಳಲಾಗಿದೆ. ಹಾಗೇ ನೋಡಿದರೆ ಟೆಕ್ನೋ ಪಾಪ್ 7ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ 6,799ರೂ ಬೆಲೆಯಿಂದ ಪ್ರಾರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮಿಸ್ಟರಿ ವೈಟ್, ಆಲ್ಪೆಂಗ್ಲೋ ಗೋಲ್ಡ್, ಮ್ಯಾಜಿಕ್ ಸ್ಕಿನ್ ಮತ್ತು ಗ್ರಾವಿಟಿ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








