Home
ಸುದ್ದಿಜಾಲ

ಟೆಕ್ನೋ ಪಾಪ್‌ 8 ಸ್ಮಾರ್ಟ್‌ಫೋನ್‌ ಅನಾವರಣ! ಪ್ರೊಸೆಸರ್‌ ಯಾವುದು?

ಟೆಕ್‌ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಟೆಕ್ನೋ ಪಾಪ್‌ 8 ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿದೆ. ಈ ಮೂಲಕ ಟೆಕ್ನೋ ಪಾಪ್‌ ಸರಣಿಗೆ ಮತ್ತೊಂದು ಸ್ಮಾರ್ಟ್‌ಫೋನ್‌ ಸೇರ್ಪಡೆ ಆಗಿದೆ. ಇನ್ನು ಸ್ಮಾರ್ಟ್‌ಫೋನ್‌ ಯುನಿಸೋಕ್‌ T606 ಪ್ರೊಸೆಸರ್‌ನಲ್ಲಿ ರನ್‌ ಆಗಲಿದೆ. ಇದು 90Hz ರಿಫ್ರೆಶ್‌ ರೇಟ್‌ನೊಂದಿಗೆ ಹೋಲ್‌ ಪಂಚ್‌ ಡಿಸ್‌ಪ್ಲೇಯನ್ನು ಹೊಂದಿದೆ.

ಹೌದು, ಟೆಕ್ನೋ ಪಾಪ್‌ 8 ಸ್ಮಾರ್ಟ್‌ಫೋನ್‌ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 10W ವೇಗದ ಚಾರ್ಜಿಂಗ್‌ ಅನ್ನು ಪಡೆದಿದೆ. ಇದು ಸಿಂಗಲ್‌ ಚಾರ್ಜ್‌ನೊಂದಿಗೆ 900 ಗಂಟೆಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಪಾಪ್‌ 8 ಸ್ಮಾರ್ಟ್‌ಫೋನ್‌ ಅನಾವರಣ! ಪ್ರೊಸೆಸರ್‌ ಯಾವುದು?

ಟೆಕ್ನೋ ಪಾಪ್‌ 8 ಡಿಸ್‌ಪ್ಲೇ ಹೇಗಿದೆ?
ಟೆಕ್ನೋ ಪಾಪ್‌ 8 ಸ್ಮಾರ್ಟ್‌ಫೋನ್‌ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ ಬರಲಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, ಎಲ್‌ಸಿಡಿ ಸ್ಕ್ರೀನ್‌ ಹೊಂದಿದೆ. ಡಿಸ್‌ಪ್ಲೇ 84.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದ್ದು, 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.

ಟೆಕ್ನೋ ಪಾಪ್‌ 8 ಪ್ರೊಸೆಸರ್‌ ಯಾವುದು?
ಟೆಕ್ನೋ ಪಾಪ್‌ 8 ಸ್ಮಾರ್ಟ್‌ಫೋನ್‌ ಯುನಿಸೋಕ್‌ T606 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ವಿಸ್ತೃತ RAM ಫೀಚರ್ಸ್‌ನೊಂದಿಗೆ ವಾಸ್ತವಿಕವಾಗಿ 8GB ವರೆಗೆ ವಿಸ್ತರಿಸಬಹುದಾಗಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಲಿದೆ.

ಟೆಕ್ನೋ ಪಾಪ್‌ 8 ಸ್ಮಾರ್ಟ್‌ಫೋನ್‌ ಅನಾವರಣ! ಪ್ರೊಸೆಸರ್‌ ಯಾವುದು?

ಟೆಕ್ನೋ ಪಾಪ್‌ 8 ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಟೆಕ್ನೋ ಪಾಪ್‌ 8 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಅಲ್ಲದೆ AI-ಬೆಂಬಲಿತ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಇದರೊಂದಿಗೆ ಡ್ಯುಯಲ್ ಫ್ರಂಟ್ ಫ್ಲ್ಯಾಷ್‌ನೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ.

ಟೆಕ್ನೋ ಪಾಪ್‌ 8 ಬ್ಯಾಟರಿ ಮತ್ತು ಇತರೆ
ಟೆಕ್ನೋ ಪಾಪ್‌ 8 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ. ಇದಲ್ಲದೆ ಸಿಂಗಲ್‌ ಚಾರ್ಜ್‌ನಲ್ಲಿ 900 ಗಂಟೆಗಳ ಸ್ಟ್ಯಾಂಡ್‌ಬೈ ಸಮಯವನ್ನು ನೀಡಲಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ GPS, Wi-Fi, FM ರೇಡಿಯೋ, ಬ್ಲೂಟೂತ್ ಮತ್ತು OTG ಸೇರಿವೆ. ಇದು ದೃಢೀಕರಣಕ್ಕಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ DTS ಬೆಂಬಲದೊಂದಿಗೆ ಸ್ಟೀರಿಯೋ ಡ್ಯುಯಲ್ ಸ್ಪೀಕರ್‌ಗಳನ್ನು ಒಳಗೊಂಡಿದೆ.

ಟೆಕ್ನೋ ಪಾಪ್‌ 8 ಸ್ಮಾರ್ಟ್‌ಫೋನ್‌ ಅನಾವರಣ! ಪ್ರೊಸೆಸರ್‌ ಯಾವುದು?

ಟೆಕ್ನೋ ಪಾಪ್‌ 8 ಬೆಲೆ ಮತ್ತು ಲಭ್ಯತೆ
ಟೆಕ್ನೋ ಪಾಪ್‌ 8 ಸ್ಮಾರ್ಟ್‌ಫೋನ್ ಬೆಲೆ ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಬರಲಿದ್ದು, ಆಲ್ಪೆಂಗ್ಲೋ ಗೋಲ್ಡ್, ಗ್ರಾವಿಟಿ ಬ್ಲಾಕ್, ಮಿಸ್ಟರಿ ವೈಟ್ ಮತ್ತು ಮ್ಯಾಜಿಕ್ ಸ್ಕಿನ್ ಬಣ್ಣದ ಆಯ್ಕೆಗಳಲ್ಲಿ ಪಟ್ಟಿಮಾಡಲಾಗಿದೆ. ಇದು ಭಾರತದಲ್ಲಿಯೂ ಕೂಡ ಲಭ್ಯವಾಗಲಿದೆಯಾ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
Tecno Pop 8 With Unisoc T606 SoC Launched: Specifications Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+