ದಿಢೀರ್‌ ಭಾರೀ ಬೆಲೆ ಇಳಿಕೆ ಕಂಡ ಟೆಕ್ನೋ ಪೊವಾ 3!..ಇದರ ಫೀಚರ್ಸ್‌ಗೆ ನೀವು ಫಿದಾ!

|

ಟೆಕ್ನೋ ಪೊವಾ 4 ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಸಂಸ್ಥೆಯು ಹಿಂದಿನ ಟೆಕ್ನೋ ಪೊವಾ 3 ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದೆ. ಟೆಕ್ನೋ ಪೊವಾ 3 ಫೋನ್ ಮೀಡಿಯಾ ಟೆಕ್ ಹೆಲಿಯೊ G88 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಬರೋಬ್ಬರಿ 7,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಫೋನಿನ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ.

ದಿಢೀರ್‌ ಆಗಿ

ಹೌದು, ಟೆಕ್ನೋ ಸಂಸ್ಥೆಯು ಇದೀಗ ದಿಢೀರ್‌ ಆಗಿ ಟೆಕ್ನೋ ಪೊವಾ 3 ಫೋನ್ ಬೆಲೆ 2,000ರೂ. ಗಳ ಇಳಿಕೆ ತಿಳಿಸಿದೆ. ಇನ್ನು ಈ ಫೋನ್‌ 4GB RAM + 64GB ಮತ್ತು 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದ್ದು, ಬೆಲೆ ಇಳಿಕೆಯಿಂದಾಗಿ 4GB RAM + 64GB ಫೋನ್‌ 9,999ರೂ. ಗಳಿಗೆ ಲಭ್ಯ ಇದೆ. ಹಾಗೆಯೇ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಫೋನ್‌ ಅನ್ನು 10,999ರೂ. ಗಳಿಗೆ ಖರೀದಿಸಬಹುದಾಗಿದೆ. ಇನ್ನು ಗ್ರಾಹಕರು ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಖರೀದಿಸಬಹುದಾಗಿದೆ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ 1080 × 2460 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.9 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರೀಫ್ರೇಶ್ ರೇಟ್ ಹೊಂದಿದ್ದು, 480ನಿಟ್ಸ್‌ ಬ್ರೈಟ್‌ನೆಶ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G88 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ ಮಾಲಿ G52 GPU ಸಪೋರ್ಟ್‌ ಸಹ ಒಳಗೊಂಡಿದೆ. ಇದರೊಂದಿಗೆ ಈ ಫೋನ್ ಎರಡು ವೇರಿಯಂಟ್‌ ಆಯ್ಕೆ ಅನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB RAM + 64GB ಮತ್ತು 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಗಿವೆ. ಇದಲ್ಲದೆ ಮೆಮೊರಿ ಫ್ಯೂಷನ್ ತಂತ್ರಜ್ಞಾನವನ್ನು ಬಳಸಿಕೊಂಡು 11 GB ವರೆಗೆ ವಿಸ್ತರಿಸಬಹುದಾದ 6GB RAM ಅನ್ನು ನೀಡುತ್ತದೆ.

ಕ್ಯಾಮೆರಾ ಸೆನ್ಸಾರ್ ರಚನೆ

ಕ್ಯಾಮೆರಾ ಸೆನ್ಸಾರ್ ರಚನೆ

ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗೆಯೇ ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ ಎಐ ಹೆಚ್‌ಡಿ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ 7,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್‌ಟಿಇ, ಜಿಪಿಎಸ್, ಬ್ಲೂಟೂತ್ ಅನ್ನು ಬೆಂಬಲಿಸಲಿದೆ. ಹಾಗೆಯೇ Z-ಆಕ್ಸಿಸ್ ಲೀನಿಯರ್ ಮೋಟಾರ್, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು ಸೇರಿವೆ. ಜೊತೆಗೆ ಟೆಕ್ನೋ ಪೊವಾ 3 ಗ್ರ್ಯಾಫೈಟ್ ಕೂಲಿಂಗ್ ವ್ಯವಸ್ಥೆಯನ್ನು ಸಹ ಹೊಂದಿದೆ.

Best Mobiles in India

English summary
Tecno Pova 3 6GB + 128GB variant of the device is also Rs 2000 cheaper now and costs Rs 10,999 after the price drop.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X