ಟೆಕ್ನೋ ಪೊವಾ 3 ಲಾಂಚ್! ಬೆಲೆ ಮತ್ತು ಫೀಚರ್ಸ್‌ ತಿಳಿದ್ರೇ, ನೀವು ಫಿದಾ ಆಗ್ತೀರಾ!

|

ಹಾಂಗ್ ಕಾಂಗ್ ಮೂಲದ ಟೆಕ್ನೋ ಮೊಬೈಲ್‌ ಬ್ರ್ಯಾಂಡ್‌ ಭಿನ್ನ ಮಾದರಿಯ ಫೋನ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಟೆಕ್ನೋ ಕಂಪನಿಯು ಪೊವಾ ಸರಣಿಯಲ್ಲಿ ಕೆಲವೊಂದು ಫೋನ್‌ಗಳನ್ನು ಲಾಂಚ್ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಟೆಕ್ನೋ ಸಂಸ್ಥೆಯು ಇದೀಗ ನೂತನವಾಗಿ ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ ಬಿಡುಗಡೆ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ.

ಪ್ರೊಸೆಸರ್

ಹೌದು, ಟೆಕ್ನೋ ಮೊಬೈಲ್‌ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ನೂತನವಾಗಿ ಬಿಡುಗಡೆ ಮಾಡಿರುವ ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌, ಬಜೆಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G88 ಪ್ರೊಸೆಸರ್ ಜೊತೆಗೆ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿರುವುದು ಪ್ಲಸ್‌ ಪಾಯಿಂಟ್‌ ಎನಿಸಿವೆ. ಬಜೆಟ್‌ ಬೆಲೆಯಲ್ಲಿ 7,000mAh ಬ್ಯಾಟರಿ ಆಯ್ಕೆ ಹೆಚ್ಚು ಆಕರ್ಷಕ ಎನಿಸಿದೆ.

ಸಾಮರ್ಥ್ಯದಲ್ಲಿದೆ

ಹಾಗೆಯೇ ಟೆಕ್ನೋ ಕಂಪೆನಿಯ ಹೊಸ ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇನ್ನುಳಿದಂತೆ ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ? ಈ ಫೋನ್ ಬೆಲೆ ಎಷ್ಟು? ಮಾರಾಟ ಯಾವಾಗ ಆರಂಭ ಎನ್ನುವ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ 1080 × 2460 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.9 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರೀಫ್ರೇಶ್ ರೇಟ್ ಹೊಂದಿದ್ದು, 480ನಿಟ್ಸ್‌ ಬ್ರೈಟ್‌ನೆಶ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G88 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ ಮಾಲಿ G52 GPU ಸಪೋರ್ಟ್‌ ಸಹ ಒಳಗೊಂಡಿದೆ. ಇದರೊಂದಿಗೆ ಈ ಫೋನ್ ಎರಡು ವೇರಿಯಂಟ್‌ ಆಯ್ಕೆ ಅನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB RAM + 64GB ಮತ್ತು 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಗಿವೆ. ಇದಲ್ಲದೆ ಮೆಮೊರಿ ಫ್ಯೂಷನ್ ತಂತ್ರಜ್ಞಾನವನ್ನು ಬಳಸಿಕೊಂಡು 11 GB ವರೆಗೆ ವಿಸ್ತರಿಸಬಹುದಾದ 6GB RAM ಅನ್ನು ನೀಡುತ್ತದೆ.

ಕ್ಯಾಮೆರಾ ಸೆನ್ಸಾರ್ ರಚನೆ

ಕ್ಯಾಮೆರಾ ಸೆನ್ಸಾರ್ ರಚನೆ

ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗೆಯೇ ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ ಎಐ ಹೆಚ್‌ಡಿ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ 7,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್‌ಟಿಇ, ಜಿಪಿಎಸ್, ಬ್ಲೂಟೂತ್ ಅನ್ನು ಬೆಂಬಲಿಸಲಿದೆ. ಹಾಗೆಯೇ Z-ಆಕ್ಸಿಸ್ ಲೀನಿಯರ್ ಮೋಟಾರ್, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು ಸೇರಿವೆ. ಜೊತೆಗೆ ಟೆಕ್ನೋ ಪೊವಾ 3 ಗ್ರ್ಯಾಫೈಟ್ ಕೂಲಿಂಗ್ ವ್ಯವಸ್ಥೆಯನ್ನು ಸಹ ಹೊಂದಿದೆ.

ಗೇಮಿಂಗ್‌ಗಾಗಿ ತಂತ್ರಜ್ಞಾನ

ಗೇಮಿಂಗ್‌ಗಾಗಿ ತಂತ್ರಜ್ಞಾನ

ಅತ್ಯುತ್ತಮ ಗೇಮಿಂಗ್ ಅನುಭವಕ್ಕಾಗಿ, ಈ ಸ್ಮಾರ್ಟ್‌ಫೋನ್ 4D ಕಂಪನಗಳನ್ನು ಒದಗಿಸುವ Z- ಆಕ್ಸಿಸ್ ಲೀನಿಯರ್ ಮೋಟಾರ್‌ನೊಂದಿಗೆ ಅಳವಡಿಸಲಾಗಿದೆ. ಇದು DTS ತಂತ್ರಜ್ಞಾನದಿಂದ ವರ್ಧಿಸಲ್ಪಟ್ಟ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಒಳಗೊಂಡಿದೆ. ಲ್ಯಾಗ್-ಫ್ರೀ ಗೇಮಿಂಗ್ ಮತ್ತು ಕಡಿಮೆ ವಿದ್ಯುತ್ ಬಳಕೆಗಾಗಿ ಸ್ಮಾರ್ಟ್‌ಫೋನ್ ಪ್ಯಾಂಥರ್ ಎಂಜಿನ್ 2.0 ಅನ್ನು ಒಳಗೊಂಡಿದೆ. ಈ ಫೋನ್ 14 ಗಂಟೆಗಳ ಗೇಮಿಂಗ್ ಸಮಯವನ್ನು ನೀಡುತ್ತದೆ ಎಂದು ಹೇಳಲಾಗಿದೆ. ಹೆಚ್ಚುವರಿಯಾಗಿ, ಒಳಗೊಂಡಿರುವ 33W ಫ್ಲ್ಯಾಷ್ ಚಾರ್ಜರ್ 40 ನಿಮಿಷಗಳ ಚಾರ್ಜ್‌ನೊಂದಿಗೆ 50 ಪ್ರತಿಶತದಷ್ಟು ಬ್ಯಾಕಅಪ್ ಅನ್ನು ಸೇರಿಸುತ್ತದೆ ಎಂದು ಹೇಳಲಾಗಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ

ಬೆಲೆ ಎಷ್ಟು ಮತ್ತು ಲಭ್ಯತೆ

ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ 4GB RAM + 64GB ಮತ್ತು 6GB RAM + 128GB ವೇರಿಯಂಟ್‌ ಆಯ್ಕೆ ಒಳಗೊಂಡಿದೆ. 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆಯು 11,499 ರೂ. ಆಗಿದೆ. ಇನ್ನು ಈ ಫೋನ್‌ ಇದೇ ಜೂನ್ 27 ರಿಂದ ಮೊದಲ ಮಾರಾಟ ಪ್ರಾರಂಭಿಸಲಿದೆ. ಈ ಸ್ಮಾರ್ಟ್‌ಫೋನ್ ಇಕೋ ಬ್ಲ್ಯಾಕ್‌ ಹಾಗೂ ಟೆಕ್ ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.

ಕೊನೆಯ ಮಾತು

ಕೊನೆಯ ಮಾತು

ಟೆಕ್ನೋ ಕಂಪನಿಯ ಈ ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ ಕಳೆದ ತಿಂಗಳು (ಮೇ 2022 ರಲ್ಲಿ) ಫಿಲಿಫೈನ್ಸ್ ನಲ್ಲಿ ಲಾಂಚ್ ಆಗಿತ್ತು. ಇದೀಗ ಭಾರತದಲ್ಲಿ ಬಿಡುಗಡೆ ಆಗಿದೆ. ಬಜೆಟ್‌ ಬೆಲೆ, ಅಧಿಕ ಬ್ಯಾಟರಿ ಸ್ಟೋರೇಜ್‌, 50 ಮೆಗಾ ಪಿಕ್ಸಲ್‌ ಕ್ಯಾಮೆರಾ ಈ ಫೋನಿನ ಪ್ರಮುಖ ಫೀಚರ್ಸ್‌ಗಳು ಎನಿಸಿವೆ. ಮಾರುಕಟ್ಟೆಯಲ್ಲಿ ಈ ವರ್ಗದಲ್ಲಿ ಇತರೆ ಬ್ರ್ಯಾಂಡ್‌ಗಳ ಫೋನ್‌ಗಳಿಗೆ ಪೈಪೋಟಿ ನೀಡಲು ಈ ಫೀಚರ್ಸ್‌ ಪ್ಲಸ್‌ ಪಾಯಿಂಟ್‌ ಆಗಿ ಕಾಣಿಸುತ್ತವೆ.

Best Mobiles in India

English summary
Tecno Pova 3 With 7,000mAh Battery Launched in India: Price, Specifications, Details.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X