ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ 'ಟೆಕ್ನೋ ಪೊವಾ 3' ಫೋನ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಸಂಸ್ಥೆ ಟೆಕ್ನೋ ಕಂಪೆನಿ ತನ್ನ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಟೆಕ್ನೋ ಸಂಸ್ಥೆ ನೂತನವಾಗಿ ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಿಶೇಷತೆ ಕುರಿತು ಅಮೆಜಾನ್ ನಲ್ಲಿ ಟೀಸರ್ ಬಿಡುಗಡೆ ಆಗಿದೆ.

ಹೌದು, ಟೆಕ್ನೋ ಕಂಪೆನಿ ತನ್ನ ಹೊಸ ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಈ ಫೋನ್ ಲೀಕ್ ಫೀಚರ್ಸ್‌ಗಳು ಈಗಾಗಲೇ ಗ್ರಾಹಕರ ಗಮನ ಸೆಳೆದಿವೆ. 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, ಜೊತೆಗೆ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದೆ. ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಹೇಗಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್ 1080 × 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.9 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರೀಫ್ರೇಶ್ ರೇಟ್ ಹೊಂದಿದ್ದು, 480ನಿಟ್ಸ್ ಬ್ರೈಟ್‌ನೆಶ್ ಅನ್ನು ಹೊಂದಿದೆ.

ಪ್ರೊಸೆಸರ್ ಪವರ್
ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G88 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 6GB + 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಿದೆ.
ಕ್ಯಾಮೆರಾ ಸೆನ್ಸಾರ್ ರಚನೆ
ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ ಎಐ ಹೆಚ್‌ಡಿ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗಿದೆ.
ಬ್ಯಾಟರಿ ಮತ್ತು ಇತರೆ
ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್ 7,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿರಲಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್‌ಟಿಇ, ಜಿಪಿಎಸ್, ಬ್ಲೂಟೂತ್ ಅನ್ನು ಬೆಂಬಲಿಸಲಿದೆ. ಹಾಗೆಯೇ Z-ಆಕ್ಸಿಸ್ ಲೀನಿಯರ್ ಮೋಟಾರ್, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು ಸೇರಿವೆ.


Click it and Unblock the Notifications