ಭಾರತದಲ್ಲಿ ಟೆಕ್ನೋ ಪೊವಾ 4 ಫೋನ್‌ ಲಾಂಚ್!.2TB ಸ್ಟೋರೇಜ್‌; ಬೆಲೆ 11,999ರೂ!

|

ಟೆಕ್ನೋ ಮೊಬೈಲ್‌ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸದಾಗಿ ಟೆಕ್ನೋ ಪೊವಾ 4 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಮೀಡಿಯಾ ಟೆಕ್‌ ಹಿಲಿಯೋ G99 ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಗ್ರಾಹಕರನ್ನು ಸೆಳೆಯುವ ಪ್ರೈಸ್‌ ಟ್ಯಾಗ್‌ನಲ್ಲಿ ಈ ಫೋನ್‌ ಬಿಡುಗಡೆ ಆಗಿರುವುದು ಪ್ರಮುಖ ಆಕರ್ಷಣೆಯಲ್ಲಿ ಒಂದಾಗಿದೆ.

ಸ್ಮಾರ್ಟ್‌ಫೋನ್‌

ಹೌದು, ಟೆಕ್ನೋ ಕಂಪೆನಿ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಟೆಕ್ನೋ ಪೊವಾ 4 ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದ್ದು, ಇದಲ್ಲದೇ ಹೆಚ್ಚುವರಿಯಾಗಿ 2TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆಯನ್ನು ಸಹ ಪಡೆದಿದೆ. ಇದರೊಂದಿಗೆ ಈ ಫೋನ್ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇನ್ನುಳಿದಂತೆ ಟೆಕ್ನೋ ಪೊವಾ 4 ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಪೊವಾ 4 ಸ್ಮಾರ್ಟ್‌ಫೋನ್‌ 6.66 ಇಂಚಿನ ಅಮೋಲ್ಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 720 x 1640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್‌ ರೇಟ್‌ ಅನ್ನು ಹೊಂದಿದ್ದು, 180Hz ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಅನ್ನು ಹೊಂದಿದೆ. ಇದರೊಂದಿಗೆ ಈ ಫೋನಿನ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್‌ ಯಾವುದು?

ಪ್ರೊಸೆಸರ್‌ ಪವರ್‌ ಯಾವುದು?

ಟೆಕ್ನೋ ಪೊವಾ 4 ಸ್ಮಾರ್ಟ್‌ಫೋನ್‌ 5nm ಮೀಡಿಯಾ ಟೆಕ್‌ ಹಿಲಿಯೋ G99 ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಆಧಾರಿತ HiOSನಲ್ಲಿ ಕಾರ್ಯ ನಿರ್ವಹಿಸಲಿದೆ. ಜೊತೆಗೆ ವರ್ಧಿತ ಗೇಮಿಂಗ್ ಕಾರ್ಯಕ್ಷಮತೆಗಾಗಿ ಪ್ಯಾಂಥರ್‌ ಗೇಮ್‌ ಇಂಜಿನ್‌ 2.0 ಮತ್ತು ಹೈಪರ್‌ ಇಂಜಿನ್‌ 2.0 ಲೈಟ್‌ ಅನ್ನು ಬೆಂಬಲಿಸಲಿದೆ. ಹಾಗೆಯೇ 8 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಒಳಗೊಂಡಿದ್ದು, 2TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಪಡೆದಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಟೆಕ್ನೋ ಪೊವಾ 4 ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಹೊಂದಿದೆ. 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇನ್ನು ಕ್ಯಾಮೆರಾ ಡಿಜಿಟಲ್‌ ಜೂಮ್‌, ಆಟೋ ಫ್ಲ್ಯಾಶ್‌, ಫೇಸ್‌ ಡಿಟೆಕ್ಷನ್‌, ಟಚ್‌ ಟು ಫೋಕಸ್‌ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಏನಿದೆ?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಏನಿದೆ?

ಟೆಕ್ನೋ ಪೊವಾ 4 ಸ್ಮಾರ್ಟ್‌ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 18W ವೇಗದ ಚಾರ್ಜಿಂಗ್ ಟೆಕ್ನಾಲಜಿಯನ್ನು ಒಳಗೊಂಡಿದೆ. ಇನ್ನು ಈ ಬ್ಯಾಟರಿಯು ಕೇವಲ 10 ನಿಮಿಷಗಳ ಚಾರ್ಜಿಂಗ್‌ನೊಂದಿಗೆ ಸುಮಾರು 10 ಗಂಟೆಗಳ ಟಾಕ್ ಟೈಮ್ ಅನ್ನು ನೀಡಲಿದೆ. ಇದರೊಂದಿಗೆ 4G ಬೆಂಬಲ, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್, NFC, USB ಟೈಪ್-C, 3.5mm ಹೆಡ್‌ಫೋನ್ ಜ್ಯಾಕ್ ಮತ್ತು DTS ಸೌಂಡ್ ಬೆಂಬಲವನ್ನು ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಪೊವಾ 4 ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯ ಬೆಲೆಯು ಭಾರತದಲ್ಲಿ 11,999ರೂ. ಆಗಿದೆ. ಇನ್ನು ಈ ಫೋನ್‌ ಅಮೆಜಾನ್ ಇ ಕಾಮರ್ಸ್‌ ತಾಣದ ಮೂಲಕ ಇದೇ ಡಿಸೆಂಬರ್‌ 13 ರಂದು ಮಾರಾಟ ಆರಂಭಿಸಲಿದೆ.

Best Mobiles in India

English summary
Tecno Pova 4 with 6000mAh Battery Launched in India: Price, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X