Home
ಸುದ್ದಿಜಾಲ

ಅಧಿಕ RAM ಇರುವ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ.. ಅಗ್ಗದ ಬೆಲೆಗೆ ಲಭ್ಯ!

ಅಮೆಜಾನ್‌ ಆಯೋಜಿಸಿರುವ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಈಗ ಲೈವ್‌ ನಡೆಯುತ್ತಿದೆ. ಈ ಹಬ್ಬದ ವಿಶೇ‍ಷ ಮಾರಾಟದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳು ಸೇರಿದಂತೆ ಇತರೆ ವಸ್ತುಗಳಿಗೆ ಆಫರ್‌ ಇದೆ. ಆ ಪೈಕಿ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಇದ್ದು, ಅದರಲ್ಲಿ ಟೆಕ್ನೋ ಪೋವಾ 5 ಪ್ರೊ ಫೋನ್‌ ಸಖತ್‌ ರಿಯಾಯಿತಿ ಪಡೆದಿದೆ.

ಹೌದು, ಅಮೆಜಾನ್‌ ತಾಣದ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ನಲ್ಲಿ ಟೆಕ್ನೋ ಪೋವಾ 5 ಪ್ರೊ 5G ಮೊಬೈಲ್‌ ಸ್ಪೆಷಲ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8GB RAM + 128 GB ವೇರಿಯಂಟ್‌ ಫೋನ್‌ 14,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಆದರೆ ಗ್ರಾಹಕರಿಗೆ ಇತರೆ ಕೆಲವು ಆಫರ್‌ ಒಳಗೊಂಡಂತೆ ಈ ಫೋನ್‌ ಅನ್ನು 12,899ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದು.

ಅಧಿಕ RAM ಇರುವ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ.. ಅಗ್ಗದ ಬೆಲೆಗೆ ಲಭ್ಯ!

ಇನ್ನು ಟೆಕ್ನೋ ಪೋವಾ 5 ಪ್ರೊ 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ಪಡೆದುಕೊಂಡಿದೆ. ಇದು ಡ್ಯುಯಲ್‌ ಕ್ಯಾಮೆರಾ ರಚನೆ ಹೊಂದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಹಾಗಾದರೆ ಟೆಕ್ನೋ ಪೋವಾ 5 ಪ್ರೊ 5G ಫೋನಿನ ಇತರ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಆಕರ್ಷಕ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಪೋವಾ 5 ಪ್ರೊ ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 84.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 396 ಪಿಪಿಐ ಸಾಂದ್ರತೆಯನ್ನು ಹೊಂದಿದ್ದು, 120Hz ರಿಫ್ರೆಶ್‌ ರೇಟ್‌ ಅನ್ನು ಸಪೋರ್ಟ್ ಮಾಡುತ್ತದೆ.

ಹೇಗಿದೆ ಪ್ರೊಸೆಸರ್‌ ಕಾರ್ಯವೈಖರಿ

ಟೆಕ್ನೋದ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ಪವರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ HiOS 13 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಮಾಹಿತಿಯಿಲ್ಲ.

ಡ್ಯುಯಲ್ ಕ್ಯಾಮೆರಾ ರಚನೆ ಸೂಪರ್

ಪೋವಾ 5 ಪ್ರೊ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ದ್ವಿತೀಯ ಕ್ಯಾಮೆರಾ AI ಸಪೋರ್ಟ್ ನಲ್ಲಿ ಇದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಸ್ಮಾರ್ಟ್‌ಫೋನ್‌ನ ರಿಯರ್‌ ಪ್ಯಾನಲ್‌ನಲ್ಲಿ ಅಧಿಸೂಚನೆಗಳಿಗಾಗಿ RGB LED ಲೈಟ್‌ ಒಳಗೊಂಡಿರುವ ಹೊಸ 'ಆರ್ಕ್ ಇಂಟರ್ಫೇಸ್' ಅನ್ನು ಪಡೆದಿದೆ.

ಬಿಗ್ ಬ್ಯಾಟರಿ ಮತ್ತು ಇತರೆ ಸೌಲಭ್ಯ ಆಯ್ಕೆ

ಟೆಕ್ನೋ ಪೋವಾ 5 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 68W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, NFC, GPS ಮತ್ತು A-GPS ಅನ್ನು ಒಳಗೊಂಡಿದೆ. ಇದಲ್ಲದೆ 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಸಹ ಹೊಂದಿದೆ.

Best Mobiles in India

English summary
Tecno Pova 5 Pro 5G Mobile received price drop on Amazon. all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+