Home
ಸುದ್ದಿಜಾಲ

ಟೆಕ್ನೋ ಸಂಸ್ಥೆಯ ಇತ್ತೀಚಿನ ಈ ಸ್ಮಾರ್ಟ್‌ಫೋನಿಗೆ ಸಖತ್ ಡಿಸ್ಕೌಂಟ್‌!

ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಸದ್ಯ ಗ್ರೇಟ್‌ ರಿಪಬ್ಲಿಕ್ ಡೇ ಸೇಲ್ ಆಯೋಜಿಸಿ ಮೊಬೈಲ್‌ ಪ್ರಿಯ ಗ್ರಾಹಕರನ್ನು ಸೆಳೆದಿದೆ. ಈ ಸೇಲ್‌ನಲ್ಲಿ ಕೆಲವು ಆಯ್ದ ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ವಾವ್‌ ಎನಿಸುವ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ. ಆ ಪೈಕಿ ಬಜೆಟ್‌ ದರದ ಟೆಕ್ನೋ ಪೋವಾ 5 ಪ್ರೊ 5G ಮೊಬೈಲ್‌ ಕೂಡಾ ಭಾರೀ ಡಿಸ್ಕೌಂಟ್‌ ಪಡೆದಿದೆ.

ಹೌದು, ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಟೆಕ್ನೋ ಪೋವಾ 5 ಪ್ರೊ 5G ಫೋನ್‌ ಶೇ. 25% ರಷ್ಟು ನೇರ ಡಿಸ್ಕೌಂಟ್‌ ಹೊಂದಿದೆ. ಈ ಫೋನಿನ 8GB RAM + 128GB ಸ್ಟೋರೇಜ್‌ ವೇರಿಯಂಟ್‌ 14,999ರೂ. ಗಳ ದರದಲ್ಲಿ ಖರೀದಿಗೆ ಲಭ್ಯ. ಹಾಗೆಯೇ ವೆಬ್‌ಸೈಟ್‌ನಲ್ಲಿ ಲಭ್ಯ ಇರುವ ಬ್ಯಾಂಕ್‌ ಡಿಸ್ಕೌಂಟ್‌ ಪಡೆದುಕೊಂಡರೆ, ಇನ್ನಷ್ಟು ಆಫರ್‌ ಬೆಲೆಗೆ ಫೋನ್‌ ಖರೀದಿಸಲು ಅವಕಾಶ ಇದೆ.

ಟೆಕ್ನೋ ಸಂಸ್ಥೆಯ ಇತ್ತೀಚಿನ ಈ ಸ್ಮಾರ್ಟ್‌ಫೋನಿಗೆ ಸಖತ್ ಡಿಸ್ಕೌಂಟ್‌!

ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಹಾಗೆಯೇ ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸರ್ ಒಳಗೊಂಡಿದೆ. ಅಲ್ಲದೇ ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಒಳಗೊಂಡಿದೆ. ಇನ್ನುಳಿದಂತೆ ಟೆಕ್ನೋ ಪೋವಾ 5 ಪ್ರೊ 5G ಫೋನಿನ ಇತರ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಪೋವಾ 5 ಪ್ರೊ - ಫೀಚರ್ಸ್‌

ಟೆಕ್ನೋ ಪೋವಾ 5 ಪ್ರೊ ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 84.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 396 ಪಿಪಿಐ ಸಾಂದ್ರತೆಯನ್ನು ಹೊಂದಿದ್ದು, 120Hz ರಿಫ್ರೆಶ್‌ ರೇಟ್‌ ಅನ್ನು ಸಪೋರ್ಟ್ ಮಾಡುತ್ತದೆ.

ಟೆಕ್ನೋ ಸಂಸ್ಥೆಯ ಇತ್ತೀಚಿನ ಈ ಸ್ಮಾರ್ಟ್‌ಫೋನಿಗೆ ಸಖತ್ ಡಿಸ್ಕೌಂಟ್‌!

ಟೆಕ್ನೋದ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ಪವರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ HiOS 13 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಮಾಹಿತಿಯಿಲ್ಲ.

ಪೋವಾ 5 ಪ್ರೊ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ದ್ವಿತೀಯ ಕ್ಯಾಮೆರಾ AI ಸಪೋರ್ಟ್ ನಲ್ಲಿ ಇದೆ.

ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಸ್ಮಾರ್ಟ್‌ಫೋನ್‌ನ ರಿಯರ್‌ ಪ್ಯಾನಲ್‌ನಲ್ಲಿ ಅಧಿಸೂಚನೆಗಳಿಗಾಗಿ RGB LED ಲೈಟ್‌ ಒಳಗೊಂಡಿರುವ ಹೊಸ 'ಆರ್ಕ್ ಇಂಟರ್ಫೇಸ್' ಅನ್ನು ಪಡೆದಿದೆ.

ಟೆಕ್ನೋ ಪೋವಾ 5 ಪ್ರೊ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 68W ಫಾಸ್ಟ್‌ ಚಾರ್ಜಿಂಗ್‌ ಅನ್ನು ಸಪೋರ್ಟ್‌ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi, ಬ್ಲೂಟೂತ್, NFC, GPS ಮತ್ತು A-GPS ಅನ್ನು ಒಳಗೊಂಡಿದೆ. ಇದಲ್ಲದೆ 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಸಹ ಹೊಂದಿದೆ.

Best Mobiles in India

English summary
TECNO Pova 5 Pro 5G price down on amazon great republic day sale 2024. check offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+