Home
ಸುದ್ದಿಜಾಲ

ಈ ಸ್ಟೈಲಿಶ್‌ 5G ಫೋನಿನ ಬೆಲೆಯಲ್ಲಿ ಇಳಿಕೆ!..ಗ್ರಾಹಕರಿಗೆ ಸಖತ್‌ ಉಳಿತಾಯ!

ಟೆಕ್ನೋ ಮೊಬೈಲ್‌ ಸಂಸ್ಥೆಯು ಭಿನ್ನ ಮಾದರಿಯ ಫೋನ್‌ಗಳನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಸಂಸ್ಥೆಯ ಟೆಕ್ನೋ ಪೋವಾ 5 ಪ್ರೊ 5G ಫೋನ್‌ ಸಹ ಆಕರ್ಷಕ ಲುಕ್‌ ಹಾಗೂ ಫೀಚರ್ಸ್‌ ಪಡೆದಿದ್ದು, ಗ್ರಾಹಕರನ್ನು ಸೆಳೆದಿದೆ. ಸದ್ಯ ಈ ಫೋನಿಗೆ ಭರ್ಜರಿ ಡಿಸ್ಕೌಂಟ್‌ ಲಭ್ಯ ಇದ್ದು, ಗ್ರಾಹಕರು ಮತ್ತೆ ಫೋನಿನತ್ತ ತಿರುಗಿ ನೋಡುವಂತೆ ಆಗಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಟೆಕ್ನೋ ಪೋವಾ 5 ಪ್ರೊ 5G ಮೊಬೈಲ್‌ ಶೇ. 25% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8GB RAM + 128 GB ವೇರಿಯಂಟ್‌ ಫೋನ್‌ 14,999 ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಆದರೆ ಗ್ರಾಹಕರಿಗೆ ಇತರೆ ಕೆಲವು ಆಫರ್‌ ಒಳಗೊಂಡಂತೆ ಈ ಫೋನ್‌ ಅನ್ನು ಮತ್ತಷ್ಟು ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದು.

ಈ ಸ್ಟೈಲಿಶ್‌ 5G ಫೋನಿನ ಬೆಲೆಯಲ್ಲಿ ಇಳಿಕೆ!..ಗ್ರಾಹಕರಿಗೆ ಸಖತ್‌ ಉಳಿತಾಯ!

ಅಂದಹಾಗೆ ಟೆಕ್ನೋ ಪೋವಾ 5 ಪ್ರೊ 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗೆಯೇ ಇದು ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಹಾಗಾದರೆ ಟೆಕ್ನೋ ಪೋವಾ 5 ಪ್ರೊ 5G ಫೋನಿನ ಇತರ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಪೋವಾ 5 ಪ್ರೊ - ಫೀಚರ್ಸ್‌

ಟೆಕ್ನೋ ಸಂಸ್ಥೆಯ ಈ ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಡಿಸ್‌ಪ್ಲೇ 84.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 396 ಪಿಪಿಐ ಸಾಂದ್ರತೆಯನ್ನು ಹೊಂದಿದ್ದು, 120Hz ರಿಫ್ರೆಶ್‌ ರೇಟ್‌ ಅನ್ನು ಸಪೋರ್ಟ್ ಮಾಡುತ್ತದೆ.

ಈ ಸ್ಟೈಲಿಶ್‌ 5G ಫೋನಿನ ಬೆಲೆಯಲ್ಲಿ ಇಳಿಕೆ!..ಗ್ರಾಹಕರಿಗೆ ಸಖತ್‌ ಉಳಿತಾಯ!

ಟೆಕ್ನೋ ಪೋವಾ 5 ಪ್ರೊ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದು ಆಂಡ್ರಾಯ್ಡ್‌ 13 ಆಧಾರಿತ HiOS 13 ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ ಈ ಫೋನ್‌ 8 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಪೋವಾ 5 ಪ್ರೊ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ AI ಸಪೋರ್ಟ್ ನಲ್ಲಿ ಇದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ. ಇನ್ನು ಸ್ಮಾರ್ಟ್‌ಫೋನ್‌ನ ರಿಯರ್‌ ಪ್ಯಾನಲ್‌ನಲ್ಲಿ ನೋಟಿಫಿಕೇಶನ್‌ಗಾಗಿ RGB LED ಲೈಟ್‌ ಒಳಗೊಂಡಿರುವ ಹೊಸ 'ಆರ್ಕ್ ಇಂಟರ್ಫೇಸ್' ಅನ್ನು ನೀಡಿಲಾಗಿದೆ.

ಟೆಕ್ನೋ ಪೋವಾ 5 ಪ್ರೊ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಇದು 68W ಫಾಸ್ಟ್‌ ಚಾರ್ಜಿಂಗ್‌ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi, ಬ್ಲೂಟೂತ್, NFC, GPS ಮತ್ತು A-GPS ಅನ್ನು ಒಳಗೊಂಡಿದೆ. ಇದಲ್ಲದೆ 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್ C ಪೋರ್ಟ್ ಅನ್ನು ಸಹ ಹೊಂದಿದೆ.

Best Mobiles in India

English summary
TECNO Pova 5 Pro 5G received huge price cut in India. Offer price and all other details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+