Home
ಸುದ್ದಿಜಾಲ

ಟೆಕ್ನೋ ಪೋವಾ 5 ಸರಣಿ ಎಂಟ್ರಿಗೆ ಮುಹೂರ್ತ ಫಿಕ್ಸ್‌; ಡಿಸೈನ್‌ ಮಾತ್ರ ಬೆಂಕಿ!

ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ ವಿವಿಧ ಬ್ರ್ಯಾಂಡ್‌ಗಳಿವೆ. ಇದರಲ್ಲಿ ಟೆಕ್ನೋ ಕಂಪೆನಿ ಕೂಡ ಒಂದಾಗಿದ್ದು, ಸ್ಮಾರ್ಟ್‌ಫೋನ್‌ ಪ್ರಿಯರನ್ನು ಸೆಳೆಯುವುದಕ್ಕಾಗಿ ಹೊಸ ಟ್ರಿಕ್ಸ್‌ಗಳನ್ನು ಮಾಡುತ್ತಲೇ ಬಂದಿದೆ. ಅದರಂತೆ ಇದೀಗ ತನ್ನ ಹೊಸ ಟೆಕ್ನೋ ಪೋವಾ 5 ಸರಣಿ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಥೇಟ್‌ ನಥಿಂಗ್‌ ಫೋನ್‌ ಡಿಸೈನ್‌ ಅನ್ನೇ ಹೊಂದಿದೆ.

ಹೌದು, ಟೆಕ್ನೋ ಕಂಪೆನಿ ಹೊಸ ಟೆಕ್ನೋ ಪೋವಾ 5 ಸರಣಿ ಲಾಂಚ್‌ ಡೇಟ್‌ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್‌ ಸರಣಿ ಇದೇ ಆಗಸ್ಟ್ 11 ರಂದು ಬಿಡುಗಡೆಯಾಗಲಿದೆ. ಇದರಲ್ಲಿ ಟೆಕ್ನೋ ಪೋವಾ 5 ಪ್ರೊ ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಸದ್ದು ಮಾಡುವ ಸೂಚನೆ ನೀಡಿದೆ. ಹಾಗಾದ್ರೆ ಟೆಕ್ನೋ ಪೋವಾ 5 ಪ್ರೊ ಸ್ಮಾರ್ಟ್‌ಫೋನ್‌ ಏನೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಟೆಕ್ನೋ ಪೋವಾ 5 ಸರಣಿ ಎಂಟ್ರಿಗೆ ಮುಹೂರ್ತ ಫಿಕ್ಸ್‌; ಡಿಸೈನ್‌ ಮಾತ್ರ ಬೆಂಕಿ!

ಟೆಕ್ನೋ ಪೋವಾ 5 ಪ್ರೊ ಡಿಸ್‌ಪ್ಲೇ
ಟೆಕ್ನೋ ಪೋವಾ 5 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿರಲಿದೆ. ಇನ್ನು ಡಿಸ್‌ಪ್ಲೇ 84.81 % ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿರಲಿದೆ. ಇದು ಬೆಜೆಲ್-ಲೆಸ್ ಡಿಸ್‌ಪ್ಲೇಯನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಡಿಸ್‌ಪ್ಲೇ 580 ನಿಟ್ಸ್ ಬ್ರೈಟ್‌ನೆಸ್‌ ಅನ್ನು ಹೊಂದಿರುವ ಸಾದ್ಯತೆಯಿದೆ.

ಟೆಕ್ನೋ ಪೋವಾ 5 ಪ್ರೊ ಪ್ರೊಸೆಸರ್ ಬಲವೇನು?
ಟೆಕ್ನೋ ಪೋವಾ 5 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯ ವಿಸ್ತರಿಸುವುದಕ್ಕೆ ಅವಕಾಶ ನೀಡುವ ಸಾದ್ಯತೆ ಕೂಡ ಇದೆ.

ಟೆಕ್ನೋ ಪೋವಾ 5 ಪ್ರೊ ಕ್ಯಾಮೆರಾ ಸೆಟ್‌ಅಪ್‌
ಟೆಕ್ನೋ ಪೋವಾ 5 ಪ್ರೊ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಜೊತೆಗೆ AI ರಿಯರ್‌ ಕ್ಯಾಮೆರಾದೊಂದಿಗೆ ಬರಲಿದೆ ಎನ್ನಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರಲಿದೆ ಎಂದು ಹೇಳಲಾಗಿದೆ.

ಟೆಕ್ನೋ ಪೋವಾ 5 ಸರಣಿ ಎಂಟ್ರಿಗೆ ಮುಹೂರ್ತ ಫಿಕ್ಸ್‌; ಡಿಸೈನ್‌ ಮಾತ್ರ ಬೆಂಕಿ!

ಟೆಕ್ನೋ ಪೋವಾ 5 ಪ್ರೊ ಬ್ಯಾಟರಿ ಬ್ಯಾಕ್‌ಅಪ್‌
ಟೆಕ್ನೋ ಪೋವಾ 5 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 68W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಕಂಪಾಸ್‌ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಇತರೆ ಸೌಲಭ್ಯ
ಟೆಕ್ನೋ ಪೋವಾ 5 ಪ್ರೊ ಸ್ಮಾರ್ಟ್‌ಫೋನ್‌ ನಥಿಂಗ್‌ ಫೋನ್‌ 2 ಮಾದರಿಯ ಡಿಸೈನ್‌ ಹೊಂದಿದೆ. ಇದರ ಹಿಂಭಾಗದಲ್ಲಿ ಮಲ್ಟಿ ಕಲರ್‌ ಎಲ್‌ಇಡಿ ಲೈಟ್‌ಗಳನ್ನು ಹೊಂದಿದೆ. ಇದು ಅಧಿಸೂಚನೆಗಳು ಮತ್ತು ಲೋ ಬ್ಯಾಟರಿ ಆಲರ್ಟ್‌ ಅನ್ನು ತೋರಿಸಲಿದೆ. ಇದನ್ನು 'ಆರ್ಕ್ ಇಂಟರ್ಫೇಸ್' ಎಂದು ಹೆಸರಿಸಲಾಗಿದೆ.

ಬೆಲೆ ಮತ್ತು ಲಭ್ಯತೆ
ಟೆಕ್ನೋ ಪೋವಾ 5 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೇ ಆಗಸ್ಟ್‌ 11 ರಂದು ಎಂಟ್ರಿ ನೀಡಲಿದೆ ಎನ್ನಲಾಗಿದೆ. ಆದರೆ ಇದರ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಇನ್ನು ಬಿಡುಗಡೆ ದಿನಾಂಕ ಹತ್ತಿರವಾಗ್ತಿದ್ದ ಹಾಗೇ ಈ ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ ವಿವರ ಬಹಿರಂಗವಾಗುವ ಸಾದ್ಯತೆಯಿದೆ.

Best Mobiles in India

English summary
Tecno Pova 5 Series Launch on August 11 in India; Expected Specs details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+