ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಟೆಕ್ನೋ ಪೊವಾ 5! ಫೀಚರ್ಸ್ ಹೇಗಿದೆ?
ಟೆಕ್ ವಲಯದಲ್ಲಿ ಟೆಕ್ನೋ ಕಂಪೆನಿ ತನ್ನ ವಿಭಿನ್ನ ಸ್ಮಾರ್ಟ್‌ಫೋನ್‌ಗಳೊಂದಿಗೆ ಗುರುತಿಸಿಕೊಂಡಿದೆ. ಇದೀಗ ಪೊವಾ ಸರಣಿಯಲ್ಲಿ ಹೊಸ ಟೆಕ್ನೋ ಪೊವಾ 5 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು 6,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 45W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಫೋನ್ ಡಿಸ್‌ಪ್ಲೇ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಬೆಂಬಲಿಸಲಿದೆ.
ಹೌದು, ಟೆಕ್ನೋ ಪೊವಾ 5 ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಕಸ್ಟಮೈಸ್ ಮಾಡಿದ ವಾಲ್‌ಪೇಪರ್‌ಗಳು ಮತ್ತು ಐಕಾನ್‌ಗಳ ಮೂಲಕ ಗಮನಸೆಳೆದಿದೆ. ಇದು ಮೀಡಿಯಾಟೆಕ್ ಹಿಲಿಯೋ G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಪೊವಾ 5 ಡಿಸ್‌ಪ್ಲೇ ವಿವರ: ಟೆಕ್ನೋ ಪೊವಾ 5 ಸ್ಮಾರ್ಟ್‌ಫೋನ್ 6.78 ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080x24460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ನೊಂದಿಗೆ ಬರಲಿದೆ.
ಟೆಕ್ನೋ ಪೊವಾ 5 ಪ್ರೊಸೆಸರ್ ಯಾವುದು: ಟೆಕ್ನೋ ಪೊವಾ 5 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G99 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ.
ಟೆಕ್ನೋ ಪೊವಾ 5 ಕ್ಯಾಮೆರಾ ಸೆಟ್‌ಅಪ್: ಟೆಕ್ನೋ ಪೊವಾ 5 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದಲ್ಲದೆ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.

ಟೆಕ್ನೋ ಪೊವಾ 5 ಬ್ಯಾಟರಿ ಬ್ಯಾಕ್‌ಅಪ್ ವಿವರ: ಟೆಕ್ನೋ ಪೊವಾ 5 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರಿಂದ ಸ್ಮಾರ್ಟ್‌ಫೋನ್ ಬ್ಯಾಟರಿಯನ್ನು 21 ನಿಮಿಷಗಳಲ್ಲಿ 50% ವರೆಗೆ ಮತ್ತು 60 ನಿಮಿಷಗಳಲ್ಲಿ ಫುಲ್ ಚಾರ್ಜಿಂಗ್ ಮಾಡಲಿದೆ. ಇದಲ್ಲದೆ 10W ರಿವರ್ಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ.
ಟೆಕ್ನೋ ಪೊವಾ 5 ಬೆಲೆ ಮತ್ತು ವಿವರ: ಟೆಕ್ನೋ ಪೊವಾ 5 ಸ್ಮಾರ್ಟ್‌ಫೋನ್ ಅನ್ನು ಆಗ್ನೇಯ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಲ್ಯಾಟಿನ್ ಅಮೆರಿಕಾದಲ್ಲಿ ಲಾಂಚ್ ಮಾಡಲಾಗಿದೆ. ಪ್ರಸ್ತುತ ಈ ಫೋನ್‌ನ ಬೆಲೆ ವಿವರಗಳು ಬಹಿರಂಗವಾಗಿಲ್ಲ, ಆದರೆ ಹರಿಕೇನ್ ಬ್ಲೂ, ಅಂಬರ್ ಗೋಲ್ಡ್ ಮತ್ತು ಮೆಕಾ ಬ್ಲ್ಯಾಕ್‌ನಲ್ಲಿ ಲಭ್ಯವಾಗಲಿದೆ.
ಇನ್ನು ಇತ್ತೀಚಿಗೆ ಟೆಕ್ನೋ ಕಂಪೆನಿ ಭಾರತದಲ್ಲಿ ಟೆಕ್ನೋ ಕ್ಯಾಮನ್ 20 ಸರಣಿ ಭಾರತದಲ್ಲಿ ಪರಿಚಯಿಸಿದೆ. ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ಹಿಂಭಾಗದಲ್ಲಿ ಪೆಂಟಗೋನಲ್ ಆಕಾರದ ಕ್ಯಾಮೆರಾ ದ್ವೀಪವನ್ನು ಹೊಂದಿವೆ. ಅದರಂತೆ ಟೆಕ್ನೋ ಕ್ಯಾಮನ್ 20 ಸರಣಿಯ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇ 500 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಪಡೆದುಕೊಂಡಿವೆ. ಇದಲ್ಲದೆ ಸ್ಮಾರ್ಟ್‌ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿವೆ.
ಇನ್ನು ಟೆಕ್ನೋ ಕ್ಯಾಮನ್ 20 ಸರಣಿಯಲ್ಲಿ ಟೆಕ್ನೋ ಕ್ಯಾಮನ್ 20 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೊ G85 ಪ್ರೊಸೆಸರ್ ವೇಗವನ್ನು ಹೊಂದಿದೆ. ಆದರೆ ಟೆಕ್ನೋ ಕ್ಯಾಮನ್ 20 ಪ್ರೊ 5G ಮತ್ತು ಕ್ಯಾಮನ್ 20 ಪ್ರೀಮಿಯರ್ 5G ಸ್ಮಾರ್ಟ್‌ಫೋನ್‌ಗಳು ಡೈಮೆನ್ಸಿಟಿ 8050SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್‌ಗಳು 8GB RAM ಅನ್ನು ಹೊಂದಿದ್ದು, 8GB ವರ್ಚುವಲ್ ಮೆಮೊರಿಗೆ ಬೆಂಬಲಿಸಲಿವೆ.


Click it and Unblock the Notifications








