Home
ಸುದ್ದಿಜಾಲ

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

ಟೆಕ್ನೋ ಕಂಪೆನಿ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಬಜೆಟ್‌ ಬೆಲೆಯಲ್ಲಿ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಅನಾವರಣಗೊಳಿಸಿದೆ. ಇದು ಟೆಕ್ನೋ ಕಂಪನಿಯ ಮೊದಲ 5G ಸ್ಮಾರ್ಟ್‌ಫೋನ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 900 ಪ್ರೊಸೆಸರ್‌ ಬೆಂಬಲಿಸಲಿದೆ ಎಂದು ಹೇಳಲಾಗಿದೆ.

ಟೆಕ್ನೋ ಕಂಪೆನಿ

ಹೌದು, ಟೆಕ್ನೋ ಕಂಪೆನಿ ಹೊಸ ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸದ್ಯ ನೈಜೀರಿಯಾ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.95-ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು, ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ 1,080x2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ 6.95-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು 120Hz ಹೆಚ್ಚಿನ ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 389ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದ್ದು, 82.8 ಸ್ಕ್ರೀನ್ ಟು ಬಾಡಿ ಅನುಪಾತ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v5.2, GPS/ A-GPS, Wi-Fi 802.11 b/g/n, USB ಟೈಪ್-C ಪೋರ್ಟ್, FM ರೇಡಿಯೋ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ನೈಜೀರಿಯಾದಲ್ಲಿ NGN 129,000 (ಅಂದಾಜು 23,500ರೂ.) ಬೆಲೆ ಹೊಂದಿದೆ. ಇನ್ನು ಈ ಫೋನ್ ಡ್ಯಾಝಲ್ ಬ್ಲಾಕ್, ಪೋಲಾರ್ ಸಿಲ್ವರ್, ಮತ್ತು ಪವರ್‌ ಬ್ಲೂ ಸೇರಿದಂತೆ ಮಲ್ಟಿ ಕಲರ್‌ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

ಟೆಕ್ನೋ ಕ್ಯಾಮನ್ 18

ಇನ್ನು ಕೆಲವು ದಿನಗಳ ಹಿಂದೆ ಟೆಕ್ನೋ ಕಂಪೆನಿ ಭಾರತದಲ್ಲಿ ಹೊಸ ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿತ್ತು. ಹೊಸ ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಹಿಯೋಸ್ ವಿ 7.6 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್‌ ಪವರ್ ಪಡೆದಿದ್ದು, 5,000WAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ.

Best Mobiles in India

English summary
The device is powered by MediaTek Dimensity 900 chipset, it features a 50-megapixel camera.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+