Just In
Don't Miss
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Sports
ಐಪಿಎಲ್ 2021: ಆರ್ಸಿಬಿ ವಿರುದ್ಧ ಅತೀ ಹೆಚ್ಚು ರನ್ ದಾಖಲೆಗಳು
- News
ದೆಹಲಿಯಲ್ಲಿ ಕೊರೊನಾ ದಾಖಲೆ; ಖಾಸಗಿ ಹೋಟೆಲ್ಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ
- Automobiles
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಅಗ್ಗದ ಬೆಲೆಯ ಟೆಕ್ನೋ ಪೋವಾ ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಎಷ್ಟು?
ಟೆಕ್ನೋ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ಹಲವು ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮೊಬೈಲ್ ಮಾರುಕಟ್ಟೆಯಲ್ಲಿ ತನ್ನ ನೆಲೆ ಭದ್ರ ಪಡಿಸಿಕೊಂಡಿದೆ. ಸದ್ಯ ಇದೀಗ ಟೆಕ್ನೋ ಪೋವಾ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಹೊಂದಿರುವ ಜೊತೆಗೆ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಅನ್ನು ಸಹ ಒಳಗೊಂಡಿದೆ.

ಹೌದು, ಟೆಕ್ನೋ ಕಂಪನಿಯು ಭಾರತೀಯ ಮೊಬೈಲ್ ಮಾರುಕಟ್ಟೆಗೆ ಹೊಸದಾಗಿ 'ಟೆಕ್ನೋ ಪೋವಾ' ಹೆಸರಿನ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಡ್ಯಾಜ್ಲ್ ಬ್ಲ್ಯಾಕ್, ಮ್ಯಾಜಿಕ್ ಬ್ಲೂ ಮತ್ತು ಸ್ಪೀಡ್ ಪರ್ಪಲ್ ಭಿನ್ನ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಹಾಗಾದರೇ ಟೆಕ್ನೋ ಪೋವಾ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿಶೇಷತೆ
ಟೆಕ್ನೋ ಪೋವಾ ಸ್ಮಾರ್ಟ್‌ಫೋನ್ 720 × 1,640 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 480ನಿಟ್ಸ್ ಬ್ರೈಟ್‌ನೆಶ್ ಅನ್ನು ಹೊಂದಿದೆ. ಇದು 20.5: 9 ಡಿಸ್‌ಪ್ಲೇ ರಚನೆ ಅನುಪಾತ ಮತ್ತು 90.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ G 80 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ನಲ್ಲಿ ಹಿಯೋಸ್ 7.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಹಾಗೂ 6GB RAM+128GB ಇಂಟರ್ ಸ್ಟೋರೇಜ್ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್ ರಿಯರ್ ಕ್ಯಾಮೆರಾ
ಟೆಕ್ನೋ ಪೋವಾ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಲೆನ್ಸ್ ಹಾಗೂ ನಾಲ್ಕನೇ ಕ್ಯಾಮೆರಾ ಎಐ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದಲ್ಲದೆ ಎಐ ಸೆಲ್ಫಿ ಕ್ಯಾಮೆರಾ, ಎಐ ಬ್ಯೂಟಿ, ವೈಡ್ ಸೆಲ್ಫಿ, ನೈಟ್ ಪೋರ್ಟ್ರೇಟ್, ಎಐ ಎಚ್‌ಡಿಆರ್, ಮತ್ತು ಎಆರ್ ಶಾಟ್ ಫೀಚರ್ಸ್‌ಗಳನ್ನು ಬೆಂಬಲಿಸಲಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 18W ಡ್ಯುಯಲ್ ಐಸಿ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್, ಮೈಕ್ರೋ-ಯುಎಸ್‌ಬಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಟೆಕ್ನೋ ಪೋವಾ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 9,999 ರೂ. ಹಾಗೂ 6GB RAM + 128GB ಸ್ಟೋರೇಜ್ ಆಯ್ಕೆಯು ರೂ. 11,999 ರೂ. ಬೆಲೆಯನ್ನು ಹೊಂದಿದೆ. ಇದು ಮೂರು ವಿಭಿನ್ನ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ, ಅವುಗಳೆಂದರೆ ಡ್ಯಾಜ್ಲ್ ಬ್ಲ್ಯಾಕ್, ಮ್ಯಾಜಿಕ್ ಬ್ಲೂ ಮತ್ತು ಸ್ಪೀಡ್ ಪರ್ಪಲ್. ಇದಲ್ಲದೆ, ಈ ಫೋನ್ ಫ್ಲಿಪ್ಕಾರ್ಟ್ ಮೂಲಕ ಮಾರಾಟವಾಗಲಿದೆ, ಇದರ ಮೊದಲ ಮಾರಾಟವು ಡಿಸೆಂಬರ್ 11 ರಂದು ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999