Home
ಸುದ್ದಿಜಾಲ

ಮಾರುಕಟ್ಟೆಗೆ ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟ ಟೆಕ್ನೋ ಪೋವಾ ನಿಯೋ 3! 7,000mAh ಬ್ಯಾಟರಿ ಸಾಮರ್ಥ್ಯ!

ಪವರ್‌ಫುಲ್‌ ಪ್ರೊಸೆಸರ್‌ ಹಾಗೂ ಬಿಗ್‌ ಬ್ಯಾಟರಿ ಬ್ಯಾಕ್‌ಅಪ್ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್ನೋ ಕಂಪೆನಿ ಪ್ರಸಿದ್ಧಿ ಪಡೆದಿದೆ. ತನ್ನ ವಿಭಿನ್ನ ಡಿಸೈನ್‌ ಹಾಗೂ ಆಕರ್ಷಕ ಪ್ಯಾನಲ್‌ ವಿನ್ಯಾಸದಿಂದ ಸ್ಮಾರ್ಟ್‌ಫೋನ್‌ ಪ್ರಿಯರ ಗಮನೆ ಸೆಳೆದಿದೆ. ಇದೀಗ ಟೆಕ್ನೋ ಕಂಪೆನಿ ಹೊಸ ಟೆಕ್ನೋ ಪೋವಾ ನಿಯೋ 3 ಸ್ಮಾರ್ಟ್‌ಫೋನ್‌ ಅನ್ನು ಸೈಲೆಂಟ್‌ ಆಗಿ ಬಿಡುಗಡೆ ಮಾಡಿದೆ.

ಹೌದು, ಟೆಕ್ನೋ ಪೋವಾ ನಿಯೋ 3 ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಸೈಲೆಂಟ್‌ ಆಗಿ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ 7,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮಾರುಕಟ್ಟೆಗೆ ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟ ಟೆಕ್ನೋ ಪೋವಾ ನಿಯೋ 3!

ಟೆಕ್ನೋ ಪೋವಾ ನಿಯೋ 3 ಫೀಚರ್ಸ್‌ ಹೇಗಿದೆ?
ಟೆಕ್ನೋ ಪೋವಾ ನಿಯೋ 3 ಸ್ಮಾರ್ಟ್‌ಫೋನ್‌ 6.82 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1640 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 20.5:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ.

ಟೆಕ್ನೋ ಪೋವಾ ನಿಯೋ 3 ಪ್ರೊಸೆಸರ್‌ ಯಾವುದು?
ಟೆಕ್ನೋ ಪೋವಾ ನಿಯೋ 3 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು HiOS 13-ಆಧಾರಿತ ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಿದೆ.

ಟೆಕ್ನೋ ಪೋವಾ ನಿಯೋ 3 ಕ್ಯಾಮೆರಾ ಸೆಟ್‌ಅಪ್‌
ಟೆಕ್ನೋ ಪೋವಾ ನಿಯೋ 3 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹಾಗೂ ಡ್ಯುಯಲ್-ಎಲ್ಇಡಿ ಫ್ಲ್ಯಾಷ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಮಾರುಕಟ್ಟೆಗೆ ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟ ಟೆಕ್ನೋ ಪೋವಾ ನಿಯೋ 3!

ಟೆಕ್ನೋ ಪೋವಾ ನಿಯೋ 3 ಬ್ಯಾಟರಿ ಮತ್ತು ಇತರೆ
ಟೆಕ್ನೋ ಪೋವಾ ನಿಯೋ 3 ಸ್ಮಾರ್ಟ್‌ಫೋನ್‌ 7,000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದು 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್ ಬೆಂಬಲ, 4G VoLTE, Wi-Fi, ಬ್ಲೂಟೂತ್, GPS, USB-C ಪೋರ್ಟ್ ಮತ್ತು 3.5mm ಆಡಿಯೊ ಜಾಕ್‌ ಅನ್ನು ಹೊಂದಿದೆ.

ಟೆಕ್ನೋ ಪೋವಾ ನಿಯೋ 3 ಬೆಲೆ ಮತ್ತು ಲಭ್ಯತೆ
ಟೆಕ್ನೋ ಪೋವಾ ನಿಯೋ 3 ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ ಎಷ್ಟಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ. ಈ ಸ್ಮಾರ್ಟ್‌ಫೋನ್‌ ಮೆಕಾ ಬ್ಲ್ಯಾಕ್‌, ಅಂಬರ್‌ ಗೋಲ್ಡ್‌ ಮತ್ತು ಹರಿಕೇನ್‌ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಮುಂಬರುವ ದಿನಗಳಲ್ಲಿ Tecno ಈ ವಿವರಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಇನ್ನು ಇತ್ತೀಚಿಗೆ ಟೆಕ್ನೋ ಕಂಪೆನಿ ಟೆಕ್ನೋ ಪೊವಾ 5 ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಕಸ್ಟಮೈಸ್ ಮಾಡಿದ ವಾಲ್‌ಪೇಪರ್‌ಗಳು ಮತ್ತು ಐಕಾನ್‌ಗಳ ಮೂಲಕ ಗಮನಸೆಳೆದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

Best Mobiles in India

English summary
Tecno Pova Neo 3 with 7,000mAh battery launched : Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+