ಭಾರತದಲ್ಲಿ ಟೆಕ್ನೋ ಪೋವಾ ನಿಯೋ 5G ಫೋನ್ ಬಿಡುಗಡೆ! ಬೆಲೆ ಎಷ್ಟು?
ಟೆಕ್ನೋ ಕಂಪೆನಿ ಭಾರತದ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಟೆಕ್ನೋ ಪೋವಾ ನಿಯೋ 5G ಫೋನ್ ಬಿಡುಗಡೆ ಮಾಡಿದೆ. ಇದು 6.8 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LTPS ಡಿಸ್‌ಪ್ಲೇ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 13-ಬ್ಯಾಂಡ್ 5G ಬೆಂಬಲವನ್ನು ನೀಡುತ್ತದೆ ಎಂದು ಟೆಕ್ನೋ ಕಂಪೆನಿ ಹೇಳಿಕೊಂಡಿದೆ.

ಹೌದು, ಟೆಕ್ನೋ ಕಂಪೆನಿ ಭಾರತದಲ್ಲಿ ಹೊಸ ಟೆಕ್ನೋ ಪೋವಾ ನಿಯೋ 5G ಫೋನ್ ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗಾದ್ರೆ ಟೆಕ್ನೋ ಪೋವಾ ನಿಯೋ 5G ಫೋನಿನ ಫೀಚರ್ಸ್ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ಹೇಗಿದೆ?
ಟೆಕ್ನೋ ಪೋವಾ ನಿಯೋ 5G ಸ್ಮಾರ್ಟ್‌ಫೋನ್ 6.8 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LTPS ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ಟೆಕ್ನೋ ಪೋವಾ ನಿಯೋ 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಆಧಾರಿತ Hi OS 8.6 ನಲ್ಲಿ ರನ್ ಆಗಲಿದೆ. ಇದಕ್ಕೆ ಪೂರಕವಾಗಿ ಮಾಲಿ-G57 GPU ಸಪೋರ್ಟ್ ಪಡೆದಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಫ್ಯೂಷನ್ RAM ಫೀಚರ್ಸ್ ಮೂಲಕ 3GB ವರೆಗೆ RAM ವಿಸ್ತರಿಸಬಹುದು. ಜೊತೆಗೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಟೆಕ್ನೋ ಪೋವಾ ನಿಯೋ 5G ಸ್ಮಾರ್ಟ್‌ಫೋನ್ ಕ್ವಾಡ್ ಫ್ಲ್ಯಾಷ್ ಬೆಂಬಲಿಸುವ AI ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಟೆಕ್ನೋ ಪೋವಾ ನಿಯೋ 5G ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 2.4GHz ಮತ್ತು 5GHz ಡ್ಯುಯಲ್-ಬ್ಯಾಂಡ್ ವೈಫೈ ಮತ್ತು ಬ್ಲೂಟೂತ್ v5.0 ಕನೆಕ್ಟಿವಿಟಿಯನ್ನು ಬೆಂಬಲಿಸಲಿದೆ. ಇದು DTS ಆಡಿಯೊ ತಂತ್ರಜ್ಞಾನದಿಂದ ಆಪ್ಟಿಮೈಸ್ ಮಾಡಲಾದ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಟೆಕ್ನೋ ಪೋವಾ ನಿಯೋ 5G ಸ್ಮಾರ್ಟ್‌ಫೋನ್ ಭಾರತದಲ್ಲಿ 15,499ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಅನ್ನು ಸಪೈರ್ ಬ್ಲಾಕ್ ಮತ್ತು ಸ್ಪ್ರಿಂಟ್ ಬ್ಲೂ ಕಲರ್ ಆಯ್ಕೆಗಳಲ್ಲಿ ಬಣ್ಣಗಳಲ್ಲಿ ನೀಡುತ್ತದೆ. ಇದು ಇದೇ ಸೆಪ್ಟೆಂಬರ್ 26 ರಿಂದ ಮಾರಾಟವಾಗಲಿದೆ.

ಇದಲ್ಲದೆ ಟೆಕ್ನೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಟೆಕ್ನೋ ಕ್ಯಾಮನ್ 19 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.8 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿರುವ LTPS ಡಿಸ್‌ಪ್ಲೇ ಆಗಿದೆ. ಜೊತೆಗೆ ಈ ಡಿಸ್‌ಪ್ಲೇ 88.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದ್ದು, 395 ಪಿಪಿಐ ಸಾಂದ್ರತೆಯನ್ನು ಒಳಗೊಂಡಿದೆ.

ಇನ್ನು ಟೆಕ್ನೋ ಕ್ಯಾಮನ್ 19 ಪ್ರೊ 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12-ಆಧಾರಿತ HiOS 8.6 ಬೆಂಬಲವನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ.


Click it and Unblock the Notifications








