ಭಾರತದಲ್ಲಿ ಟೆಕ್ನೋ ಪೋವಾ ನಿಯೋ ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

|

ಟೆಕ್ನೋ ಕಂಪೆನಿ ಭಾರತದಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಗಾಲೇ ಅಗ್ಗದ ಬೆಲೆಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಟೆಕ್ನೋ ಪೋವಾ ನಿಯೋ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.8-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G25 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಟೆಕ್ನೋ

ಹೌದು, ಟೆಕ್ನೋ ಕಂಪೆನಿ ಭಾರತದಲ್ಲಿ ಹೊಸ ಟೆಕ್ನೋ ಪೋವಾ ನಿಯೋ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹಾಗೆಯೇ 6GB + 128GB ಇಂಟರ್‌ ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 12,999ರೂ.ಬೆಲೆಯನ್ನು ಹೊಂದಿದ್ದು, ಗೀಕ್ ಬ್ಲೂ, ಅಬ್ಸಿಡಿಯನ್ ಬ್ಲ್ಯಾಕ್ ಮತ್ತು ಪವರ್ ಬ್ಲಾಕ್ ಕಲರ್‌ ಆಯ್ಕೆಯಲ್ಲಿ ದೊರೆಯಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಪೋವಾ ನಿಯೋ ಸ್ಮಾರ್ಟ್‌ಫೋನ್‌ 720x1,640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಡಾಟ್‌ನಾಚ್ ವಿನ್ಯಾಸವನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 20.5:9 ರಚನೆಯ ಅನುಪಾತವನ್ನು ಹೊಂದಿದ್ದು, 480 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಟೆಕ್ನೋ ಪೊವಾ ನಿಯೋ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಮೀಡಿಯಾಟೆಕ್‌ ಹಿಲಿಯೋ G25 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ HiOS 7.6 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಬಲವನ್ನು ಹೊಂದಿದೆ. ಇದಲ್ಲದೆ ಟೆಕ್ನೋ ಬ್ರ್ಯಾಂಡ್‌ ಸ್ವಾಮ್ಯದ ಮೆಮ್‌ಫ್ಯೂಷನ್ ಫೀಚರ್ಸ್‌ ಬಳಸಿಕೊಂಡು 5GB RAM ಅನ್ನು ವಾಸ್ತವಿಕವಾಗಿ ವಿಸ್ತರಿಸಲು ಸಹ ಬೆಂಬಲವಿದೆ. ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶ ನೀಡಲಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಟೆಕ್ನೋ ಪೊವಾ ನಿಯೋ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, f/1.8 ಲೆನ್ಸ್ ಮತ್ತು ಕ್ವಾಡ್ LED ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಡ್ಯುಯಲ್ LED ಫ್ಲ್ಯಾಷ್ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಟೆಕ್ನೋ ಪೊವಾ ನಿಯೋ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಇದರ ಮೂಲಕ ಸಿಂಗಲ್‌ ಚಾರ್ಜ್‌ನಲ್ಲಿ ಬ್ಯಾಟರಿಯು 43 ಗಂಟೆಗಳ ಟಾಕ್ ಟೈಮ್ ಅಥವಾ 55 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡುತ್ತದೆ ಎಂದು ಹೇಳಲಾಗುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, FM ರೇಡಿಯೋ, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಪೊವಾ ನಿಯೋ ಸ್ಮಾರ್ಟ್‌ಫೋನ್‌ ಭಾರತದಲ್ಲಿ ತನ್ನ ಏಕೈಕ 6GB + 128GB ಸ್ಟೋರೇಜ್ ರೂಪಾಂತರಕ್ಕೆ 12,999ರೂ.ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಗೀಕ್ ಬ್ಲೂ, ಅಬ್ಸಿಡಿಯನ್ ಬ್ಲ್ಯಾಕ್ ಮತ್ತು ಪವರ್ ಬ್ಲಾಕ್ ಬಣ್ಣಗಳಲ್ಲಿ ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಜನವರಿ 22 ರಿಂದ ರಿಟೇಲ್‌ ಸ್ಟೋರ್‌ಗಳ ಮೂಲಕ ಖರೀದಿಸಲು ಲಭ್ಯವಿರುತ್ತದೆ.

Best Mobiles in India

English summary
ecno Pova Neo comes with a waterdrop-style display notch and has dual rear cameras.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X