ಸದ್ಯದಲ್ಲೇ ಲಾಂಚ್‌ ಆಗಲಿದೆ ಟೆಕ್ನೋ ಪೊವಾ ಸ್ಮಾರ್ಟ್‌ಫೋನ್‌!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಟೆಕ್ನೋ ಕಂಪೆನಿ ತನ್ನ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಟೆಕ್ನೋ ಸಂಸ್ಥೆ ಹೊಸ ಟೆಕ್ನೋ ಪೊವಾ ಎಂದು ಕರೆಯಲ್ಪಡುವ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಿಶೇಷತೆ ಕುರಿತು ಟೀಸರ್‌ ಬಿಡುಗಡೆ ಆಗಿದ್ದು, ಟೀಸರ್‌ ಮಾಹಿತಿ ಪ್ರಕಾರ ಡಿಸೆಂಬರ್ 4 ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಟೆಕ್ನೋ ಕಂಪೆನಿ

ಹೌದು, ಟೆಕ್ನೋ ಕಂಪೆನಿ ತನ್ನ ಹೊಸ ಟೆಕ್ನೋ ಪೊವಾ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಟೆಕ್ನೋ ಪೋವಾ ಈಗಾಗಲೇ ನೈಜೀರಿಯಾ ಮತ್ತು ಫಿಲಿಪೈನ್ಸ್ ಸೇರಿದಂತೆ ಆಯ್ದ ಮಾರುಕಟ್ಟೆಗಳಲ್ಲಿ ಲಭ್ಯವಿದೆ. ಇದೇ ಮಾದರಿಯ ಸ್ಮಾರ್ಟ್‌ಫೋನ್‌ ಭಾರತೀಯ ಮಾರುಕಟ್ಟೆಯನ್ನು ತಲುಪುವ ನಿರೀಕ್ಷೆಯಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಹೇಗಿರಲಿದೆ ಅನ್ನೊದರ ಕುರಿತು ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ

ಡಿಸ್‌ಪ್ಲೇ ವಿಶೇಷತೆ

ಟೆಕ್ನೋ ಪೋವಾ ಸ್ಮಾರ್ಟ್‌ಫೋನ್‌ 720 × 1,640 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 480ನಿಟ್ಸ್‌ ಬ್ರೈಟ್‌ನೆಶ್‌ ಅನ್ನು ಹೊಂದಿದೆ. ಇದಲ್ಲದೆ 82.7% ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಟೆಕ್ನೋ ಪೋವಾ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ ಎಐ ಹೆಚ್‌ಡಿ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದೆ. ಇದು 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್‌ಟಿಇ, ಜಿಪಿಎಸ್, ಬ್ಲೂಟೂತ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಪೋವಾ ಭಾರತದಲ್ಲಿ ಅಂದಾಜು 10,800 ರೂ. ಗಳಿಗೆ ಲಭ್ಯವಾಗುವ ಸಾಧ್ಯತೆ ಇದೆ. ಜಾಗತಿಕ ಬೆಲೆಗೆ ಸಮನಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಭಾರತದಲ್ಲಿಯೂ ಟೆಕ್ನೋ ಸ್ಮಾರ್ಟ್‌ಫೋನ್ ಮ್ಯಾಜಿಕ್ ಬ್ಲೂ, ಸ್ಪೀಡ್ ಪರ್ಪಲ್ ಮತ್ತು ಡ್ಯಾಜ್ಲ್ ಬ್ಲ್ಯಾಕ್ ಅನ್ನು ಒಳಗೊಂಡಿರುವ ಮೂರು ಬಣ್ಣಗಳಲ್ಲಿ ಲಭ್ಯವಾಗಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Another Tecno smartphone is set to launch in India on December 4 dubbed Tecno Pova. The smartphone has already been teased on Flipkart..to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X