Just In
Don't Miss
- Movies
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
- News
ವಿಶ್ವದಾದ್ಯಂತ ಕೊರೊನಾಗೆ ಬಲಿಯಾದವರ ಸಂಖ್ಯೆ 2 ಕೋಟಿ ದಾಟಿದೆ!
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Automobiles
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸದ್ಯದಲ್ಲೇ ಲಾಂಚ್ ಆಗಲಿದೆ ಟೆಕ್ನೋ ಪೊವಾ ಸ್ಮಾರ್ಟ್ಫೋನ್!
ಜನಪ್ರಿಯ ಸ್ಮಾರ್ಟ್ಫೋನ್ ತಯಾರಕ ಟೆಕ್ನೋ ಕಂಪೆನಿ ತನ್ನ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್ಫೋನ್ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಟೆಕ್ನೋ ಸಂಸ್ಥೆ ಹೊಸ ಟೆಕ್ನೋ ಪೊವಾ ಎಂದು ಕರೆಯಲ್ಪಡುವ ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್ಫೋನ್ ವಿಶೇಷತೆ ಕುರಿತು ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಮಾಹಿತಿ ಪ್ರಕಾರ ಡಿಸೆಂಬರ್ 4 ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಹೌದು, ಟೆಕ್ನೋ ಕಂಪೆನಿ ತನ್ನ ಹೊಸ ಟೆಕ್ನೋ ಪೊವಾ ಸ್ಮಾರ್ಟ್ಫೋನ್ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಟೆಕ್ನೋ ಪೋವಾ ಈಗಾಗಲೇ ನೈಜೀರಿಯಾ ಮತ್ತು ಫಿಲಿಪೈನ್ಸ್ ಸೇರಿದಂತೆ ಆಯ್ದ ಮಾರುಕಟ್ಟೆಗಳಲ್ಲಿ ಲಭ್ಯವಿದೆ. ಇದೇ ಮಾದರಿಯ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯನ್ನು ತಲುಪುವ ನಿರೀಕ್ಷೆಯಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ಹೇಗಿರಲಿದೆ ಅನ್ನೊದರ ಕುರಿತು ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ ವಿಶೇಷತೆ
ಟೆಕ್ನೋ ಪೋವಾ ಸ್ಮಾರ್ಟ್ಫೋನ್ 720 × 1,640 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8-ಇಂಚಿನ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 480ನಿಟ್ಸ್ ಬ್ರೈಟ್ನೆಶ್ ಅನ್ನು ಹೊಂದಿದೆ. ಇದಲ್ಲದೆ 82.7% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಿದೆ.

ಕ್ಯಾಮೆರಾ ವಿನ್ಯಾಸ
ಟೆಕ್ನೋ ಪೋವಾ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ ಎಐ ಹೆಚ್ಡಿ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ
ಇದು 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿರಲಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್ಟಿಇ, ಜಿಪಿಎಸ್, ಬ್ಲೂಟೂತ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಟೆಕ್ನೋ ಪೋವಾ ಭಾರತದಲ್ಲಿ ಅಂದಾಜು 10,800 ರೂ. ಗಳಿಗೆ ಲಭ್ಯವಾಗುವ ಸಾಧ್ಯತೆ ಇದೆ. ಜಾಗತಿಕ ಬೆಲೆಗೆ ಸಮನಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಭಾರತದಲ್ಲಿಯೂ ಟೆಕ್ನೋ ಸ್ಮಾರ್ಟ್ಫೋನ್ ಮ್ಯಾಜಿಕ್ ಬ್ಲೂ, ಸ್ಪೀಡ್ ಪರ್ಪಲ್ ಮತ್ತು ಡ್ಯಾಜ್ಲ್ ಬ್ಲ್ಯಾಕ್ ಅನ್ನು ಒಳಗೊಂಡಿರುವ ಮೂರು ಬಣ್ಣಗಳಲ್ಲಿ ಲಭ್ಯವಾಗಲಿದೆ ಎಂದು ಅಂದಾಜಿಸಲಾಗಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190