Home
ಸುದ್ದಿಜಾಲ

ಟೆಕ್ನೋ ಸ್ಮಾರ್ಕ್‌ 6 ಏರ್‌ 3GB RAM + 64GB ವೇರಿಯೆಂಟ್‌ ಸ್ಮಾರ್ಟ್‌ಫೋನ್‌ ಲಾಂಚ್‌!

ಟೆಕ್ನೋ ಕಂಪನಿಯು ಈಗಾಗಲೇ ಹಲವು ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮೊಬೈಲ್ ಮಾರುಕಟ್ಟೆಯಲ್ಲಿ ನೆಲೆಯೂರಿದೆ. ಇನ್ನು ಇತ್ತೀಚಿಗಷ್ಟೇ ಟೆಕ್ನೋ ಸಂಸ್ಥೆಯು ತನ್ನ ಹೊಸ ಟೆಕ್ನೋ ಸ್ಪಾರ್ಕ್‌ 6 ಏರ್‌ ಸ್ಮಾರ್ಟ್‌ಫೋನ್‌ ಅನ್ನು ಮಾಡಿತ್ತು. ಇದೀಗ ಅದರ 3GB RAM + 64GB ಸಂಗ್ರಹ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯ ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಸಹ ಒಳಗೊಂಡಿದೆ.

ಟೆಕ್ನೋ

ಹೌದು, ಟೆಕ್ನೋ ಕಂಪನಿಯು ಇದೇ ವರ್ಷ ಜೂನ್‌ ತಿಂಗಳ ಕೊನೆಯಲ್ಲಿ ಟೆಕ್ನೊ ಸ್ಪಾರ್ಕ್‌ 6 ಏರ್‌ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಇದೀಗ ಅದರ 3GB RAM+64GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯನ್ನ ಸಹ ಪರಿಚಯಿಸಿದೆ. ಇದು ಬಜೆಟ್‌ ಬೆಲೆಯ ಪ್ರೈಸ್‌ಟ್ಯಾಗ್‌ ಅನ್ನು ಹೊಂದಿದ್ದು, ಇದರ ಬೆಲೆ 9,000 ರೂ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಟೆಕ್ನೋ ಸ್ಮಾರ್ಕ್‌ 6 ಏರ್‌ 720x1,640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 7 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡಾಟ್-ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಜೊತೆಗೆ 90.6% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇಯು 20.5: 9 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ 480 ನಿಟ್ಸ್ ಗರಿಷ್ಠ ಬ್ರೈಟ್‌ನೆಶ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ A25SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಜೊತೆಗೆ HIOS 6.2 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಟೆಕ್ನೋ ಸ್ಪಾರ್ಕ್ 6 ಏರ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ V5.0 ಅನ್ನು ಬೆಂಬಲಿಸಲಿವೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಸ್ಪಾರ್ಕ್ 6 ಏರ್ ಸ್ಮಾರ್ಟ್‌ಫೋನ್‌ 3GB RAM + 64GB ಹೊಸ ವೇರಿಯೆಂಟ್‌ ಆಯ್ಕೆಯ ಬೆಲೆ ರೂ. 8,699 ಆಗಿದೆ. ಇದು ಕ್ಲೌಡ್ ವೈಟ್, ಕಾಮೆಟ್ ಬ್ಲ್ಯಾಕ್ ಮತ್ತು ಓಷನ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಹೊಸ ರೂಪಾಂತರವು ಸೆಪ್ಟೆಂಬರ್ 25 ರಂದು ಅಮೆಜಾನ್ ಮೂಲಕ ಮಾರಾಟವಾಗಲಿದೆ.

Best Mobiles in India

English summary
Tecno Spark 6 Air’s new variant is powered by the MediaTek Helio A25 SoC while the other two variants come with the Helio A22 quad-core SoC.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+