ದೀಪಾವಳಿ ಹಬ್ಬದ ಪ್ರಯುಕ್ತ ಟೆಕ್ನೋ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಆಫರ್!
ಸ್ಮಾರ್ಟ್‌ಫೋನ್ ಕಂಪೆನಿಗಳು ದೇಶದಲ್ಲಿ ಸಾಲು ಸಾಲು ಹಬ್ಬಗಳ ಕಾರಣಕ್ಕಾಗಿ ವಿಶೇಷ ಆಫರ್‌ಗಳನ್ನು ನೀಡುತ್ತಿವೆ. ಇದಕ್ಕೆ ಟೆಕ್ನೋ ಕಂಪೆನಿ ಕೂಡ ಹೊರತಾಗಿಲ್ಲ. ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಟೆಕ್ನೋ ಕಂಪೆನಿ ದೀಪಾವಳಿ ಪ್ರಯುಕ್ತ ಬಿಗ್ ಆಫರ್‌ಗಳನ್ನು ನೀಡಲು ಮುಂದಾಗಿದೆ. ಇದರಲ್ಲಿ ಟೆಕ್ನೋ ಸ್ಪಾರ್ಕ್ 7T, ಟೆಕ್ನೋ ಸ್ಪಾರ್ಕ್7, ಟೆಕ್ನೋ ಸ್ಪಾರ್ಕ್ ಗೋ, ಟೆಕ್ನೋ ಕಾಮನ್ 7, ಟೆಕ್ನೋ ಪೊವಾ 2 ಸ್ಮಾರ್ಟ್‌ಫೋನ್‌ಗಳ ಮೇಲೆ ಹೆಚ್ಚಿನ ರಿಯಾಯಿತಿಯನ್ನು ನೀಡುತ್ತಿದೆ.

ಹೌದು, ದಿಪಾವಳಿ ಹಬ್ಬದ ಪ್ರಯುಕ್ತ ಟೆಕ್ನೋ ಸ್ಮಾರ್ಟ್‌ಫೋನ್ ಕಂಪೆನಿ ವಿಶೇಷ ಆಫರ್ ಅನ್ನು ಘೋಷಿಸಿದೆ. ತನ್ನ ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಮೇಲೆ ಬಿಗ್ ಡಿಸ್ಕೌಂಟ್ ನೀಡಲು ಮುಂದಾಗಿದೆ. ಇದರಲ್ಲಿ ಬ್ಯಾಂಕ್ ಆಫರ್‌ಗಳು, ಕ್ಯಾಶ್‌ಬ್ಯಾಕ್ ಮತ್ತು ಕೂಪನ್ ಆಫರ್ ಕೂಡ ಸೇರಿವೆ. ಜೊತೆಗೆ RuPay, ICICI ಮತ್ತು Kotak ಕಾರ್ಡ್‌ಗಳನ್ನು ಹೊಂದಿರುವ ಖರೀದಿದಾರರು ವಿವಿಧ ಉತ್ಪನ್ನಗಳ ಮೇಲೆ 10% ತ್ವರಿತ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇನ್ನುಳಿದಂತೆ ಟೆಕ್ನೋ ಕಂಪೆನಿಯ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳ ಮೇಲೆ ಡಿಸ್ಕೌಂಟ್ ನೀಡಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಸ್ಪಾರ್ಕ್ 7T
ದೀಪಾವಳಿ ಹಬ್ಬದ ಸಮಯದಲ್ಲಿ ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್ ಬಿಗ್ ಡಿಸ್ಕೌಂಟ್ ಪಡೆದುಕೊಂಡಿದೆ. ಇದರಲ್ಲಿ 4GB+64GB ರೂಪಾಂತರದ ಆಯ್ಕೆಯನ್ನು ಕೇವಲ 8,499ರೂ.ಗಳಿಗೆ ಖರೀದಿಸಬಹುದಾಗಿದೆ. ಹೆಚ್ಚುವರಿಯಾಗಿ, ಖರೀದಿದಾರರು ರುಪೇ, ಐಸಿಐಸಿಐ ಮತ್ತು ಕೋಟಕ್ ಬ್ಯಾಂಕ್ ಕಾರ್ಡ್‌ಗಳು ಮತ್ತು ಇಎಂಐ ಮೇಲೆ ಶೇಕಡಾ 10 ರಷ್ಟು ರಿಯಾಯಿತಿಯನ್ನು ಸಹ ಪಡೆದುಕೊಳ್ಳಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಹಿಯೋಸ್ ವಿ 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಜೊತೆಗೆ ಇನ್ನು ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್ 7
ಟೆಕ್ನೋ ಸ್ಪಾರ್ಕ್ 7 ದೀಪಾವಳಿ ಪ್ರಯುಕ್ತ ಅಮೆಜಾನ್‌ನಲ್ಲಿ ಕೇವಲ 7499ರೂ.ಗಳಿಗೆ ಲಭ್ಯವಾಗಲಿದೆ. ಜೊತೆಗೆ ರುಪೇ ಕಾರ್ಡ್, ಐಸಿಐಸಿಐ ಮತ್ತು ಕೋಟಕ್ ಬ್ಯಾಂಕ್ ಕಾರ್ಡ್‌ಗಳು ಮತ್ತು ಇಎಂಐ ಮೇಲೆ 10% ಡಿಸ್ಕೌಂಟ್ ಕೂಡ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ ಕ್ವಾಡ್ ಎಲ್ಇಡಿ ಫ್ಲ್ಯಾಷ್ ಜೊತೆಗೆ ಎಐ ಲೆನ್ಸ್ ಅನ್ನು ಒಳಗೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್ ಗೋ 2021
ಟೆಕ್ನೋ ಸ್ಪಾರ್ಕ್ ಗೋ 2021(2GB+32GB) ಸ್ಮಾರ್ಟ್‌ಫೋನ್ ದೀಪಾವಳಿ ಪ್ರಯುಕ್ತ ನಿಮಗೆ ಕೇವಲ 6,999ಗಳಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ನ ಮೂಲ ಬೆಲೆ 8,999ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಟೆಕ್ನೋ ಕ್ಯಾಮನ್ 17
ಟೆಕ್ನೋ ಕ್ಯಾಮನ್ 17 ಸ್ಮಾರ್ಟ್‌ಫೋನ್ ದೀಪಾವಳಿ ಪ್ರಯುಕ್ತ ಅಮೆಜಾನ್‌ನಲ್ಲಿ 13,999ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಟೆಕ್ನೋ ಕ್ಯಾಮನ್ 17 ಸ್ಮಾರ್ಟ್‌ಫೋನ್ 6.8-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಹಿಯೋಸ್ ವಿ 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6 GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.


Click it and Unblock the Notifications








