Home
ಸುದ್ದಿಜಾಲ

ಟೆಕ್ನೋ ಕಡೆಯಿಂದ ಬಂತು ಮತ್ತೊಂದು ಭರ್ಜರಿ ಫೋನ್‌! ಬಜೆಟ್‌ ಬೆಲೆ ಅತ್ಯಾಕರ್ಷಕ ಫೀಚರ್ಸ್‌!

ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್ನೋ ಕಂಪೆನಿ ಪ್ರಸಿದ್ಧಿ ಪಡೆದುಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 10 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಆಕ್ಟಾ-ಕೋರ್ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ.

ಹೌದು, ಟೆಕ್ನೋ ಸ್ಪಾರ್ಕ್‌ 10 5G ಸ್ಮಾರ್ಟ್‌ಫೋನ್‌ ಭಾರತಕ್ಕೆ ಎಂಟ್ರಿ ನೀಡಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 18W ಫ್ಲಾಶ್‌ ಚಾರ್ಜ್‌ ಬೆಂಬಲಿಸಲಿದೆ. ಇನ್ನು ಈ ಬ್ಯಾಟರಿ 39 ದಿನಗಳ ಸ್ಟ್ಯಾಂಡ್‌ ಬೈ ಟೈಂ ನೀಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಕಡೆಯಿಂದ ಬಂತು ಮತ್ತೊಂದು ಭರ್ಜರಿ ಫೋನ್‌! ಬಜೆಟ್‌ ಬೆಲೆ ಆಕರ್ಷಕ ಫೀಚರ್ಸ್‌

ಟೆಕ್ನೋ ಸ್ಪಾರ್ಕ್‌ 10 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ಟೆಕ್ನೋ ಸ್ಪಾರ್ಕ್‌ 10 5G ಸ್ಮಾರ್ಟ್‌ಫೋನ್‌ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌, 120Hz ಟಚ್ ಸ್ಯಾಪ್ಲಿಂಗ್‌ ರೇಟ್‌, 480 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲಿಸಲಿದೆ. ಇದು 20:15 ರಚನೆಯ ಅನುಪಾತವನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್‌ 10 5G ಪ್ರೊಸೆಸರ್‌ ಯಾವುದು?

ಟೆಕ್ನೋ ಸ್ಪಾರ್ಕ್‌ 10 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ-SD ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್‌ ವಿಸ್ತರಿಸಬಹುದಾಗಿದೆ. ಇದರೊಂದಿಗೆ ಮೆಮೊರಿ ಫ್ಯೂಷನ್ RAM ತಂತ್ರಜ್ಞಾನದಿಂದಾಗಿ RAM ಅನ್ನು 8GB ವರೆಗೆ ವಿಸ್ತರಿಸಬಹುದಾಗಿದೆ.

ಟೆಕ್ನೋ ಕಡೆಯಿಂದ ಬಂತು ಮತ್ತೊಂದು ಭರ್ಜರಿ ಫೋನ್‌! ಬಜೆಟ್‌ ಬೆಲೆ ಆಕರ್ಷಕ ಫೀಚರ್ಸ್‌

ಟೆಕ್ನೋ ಸ್ಪಾರ್ಕ್‌ 10 5G ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಟೆಕ್ನೋ ಸ್ಪಾರ್ಕ್‌ 10 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ ಅನಿರ್ದಿಷ್ಟ AI ಸೆನ್ಸಾರ್‌ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ AI ಬೆಂಬಲಿತ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್‌ 10 5G ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಟೆಕ್ನೋ ಸ್ಪಾರ್ಕ್‌ 10 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫ್ಲಾಶ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇದರಿಂದ ನಿಮ್ಮ ಸ್ಮಾರ್ಟ್‌ಫೋನ್‌ ಅನ್ನು 50 ನಿಮಿಷಗಳಲ್ಲಿ 0 ರಿಂದ 50% ತನಕ ಚಾರ್ಜ್‌ ಮಾಡಬಹುದಾಗಿದೆ. ಇನ್ನು ಬ್ಯಾಟರಿ 39 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ಹೊಂದಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ.

ಟೆಕ್ನೋ ಕಡೆಯಿಂದ ಬಂತು ಮತ್ತೊಂದು ಭರ್ಜರಿ ಫೋನ್‌! ಬಜೆಟ್‌ ಬೆಲೆ ಆಕರ್ಷಕ ಫೀಚರ್ಸ್‌

ಟೆಕ್ನೋ ಸ್ಪಾರ್ಕ್‌ 10 5G ಬೆಲೆ ಮತ್ತು ಲಭ್ಯತೆ

ಟೆಕ್ನೋ ಸ್ಪಾರ್ಕ್‌ 10 5G ಸ್ಮಾರ್ಟ್‌ಫೋನ್‌ 4GB RAM + 64GB ಇಂಟರ್‌ ಸ್ಟೋರೇಜ್‌ ಆಯ್ಕೆಯು 12,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಏಪ್ರಿಲ್ 7 ರಿಂದ ಮಾರಾಟಕ್ಕೆ ಬರಲಿದೆ. ಇದು ಮೆಟಾ ಬ್ಲ್ಯಾಕ್‌, ಮೆಟಾ ಬ್ಲೂ, ಮೆಟಾ ವೈಟ್‌ ಕಲರ್‌ ಆಯ್ಕೆಗಳಲ್ಲಿ ದೊರೆಯಲಿದೆ.

Best Mobiles in India

English summary
Tecno's Spark 10 5G packs a 5,000mAh battery with 18W flash charge support.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+