Home
ಸುದ್ದಿಜಾಲ

ಚಂದ್ರಯಾನ 3 ರ ಸ್ಮರಣಾರ್ಥವಾಗಿ ಹೊಸ ಫೋನ್‌ ಪರಿಚಯಿಸಿದ ಟೆಕ್ನೋ ಕಂಪೆನಿ!

ಭಾರತದ ಚಂದ್ರಯಾನ 3 ರ ಯಶಸ್ಸಿನ ನೆನಪಿಗಾಗಿ ಟೆಕ್ನೋ ಕಂಪೆನಿ ಹೊಸ ಸ್ಮಾರ್ಟ್‌ಫೋನ್‌ ಆವೃತ್ತಿಯನ್ನು ಪರಿಚಯಿಸಿದೆ. ತನ್ನ ಟೆಕ್ನೋ ಸ್ಪಾರ್ಕ್‌10 ಪ್ರೊ ಮೂನ್ ಎಕ್ಸ್‌ಪ್ಲೋರರ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇದನ್ನು ಇಸ್ರೋದ ಯಶಸ್ವಿ ಚಂದ್ರಯಾನ-3 ಮೂನ್ ಮಿಷನ್‌ನ ಸ್ಮರಣಾರ್ಥವಾಗಿ ಅನಾವರಣಗೊಳಿಸಲಾಗಿದೆ.

ಹೌದು, ಟೆಕ್ನೋ ಸ್ಪಾರ್ಕ್‌ 10 ಪ್ರೊ ಮೂನ್ ಎಕ್ಸ್‌ಪ್ಲೋರರ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಚಂದ್ರಯಾನ 3 ರ ಸ್ಮರಣಾರ್ಥವಾಗಿ ಹೊಸ ಫೋನ್‌ ಪರಿಚಯಿಸಿದ ಟೆಕ್ನೋ ಕಂಪೆನಿ!

ಟೆಕ್ನೋ ಸ್ಪಾರ್ಕ್‌ 10 ಪ್ರೊ ಮೂನ್ ಎಕ್ಸ್‌ಪ್ಲೋರರ್ ಆವೃತ್ತಿ ಡಿಸ್‌ಪ್ಲೇ ರಚನೆ
ಟೆಕ್ನೋ ಸ್ಪಾರ್ಕ್‌ 10 ಪ್ರೊ ಮೂನ್ ಎಕ್ಸ್‌ಪ್ಲೋರರ್ ಆವೃತ್ತಿ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್‌ ರೇಟ್‌ ಬೆಂಬಲದೊಂದಿಗೆ ಬರಲಿದೆ. ಇನ್ನು ಡಿಸ್‌ಪ್ಲೇ 270Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ.

ಟೆಕ್ನೋ ಸ್ಪಾರ್ಕ್‌ 10 ಪ್ರೊ ಮೂನ್ ಎಕ್ಸ್‌ಪ್ಲೋರರ್ ಆವೃತ್ತಿ ಪ್ರೊಸೆಸರ್‌
ಟೆಕ್ನೋ ಸ್ಪಾರ್ಕ್‌ 10 ಪ್ರೊ ಮೂನ್ ಎಕ್ಸ್‌ಪ್ಲೋರರ್ ಆವೃತ್ತಿ ಸ್ಮಾರ್ಟ್‌ಫೋನ್‌ ಮಿಡಿಯಾಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ HiOS 12.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 16GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡುವ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಟೆಕ್ನೋ ಸ್ಪಾರ್ಕ್‌ 10 ಪ್ರೊ ಮೂನ್ ಎಕ್ಸ್‌ಪ್ಲೋರರ್ ಆವೃತ್ತಿ ಕ್ಯಾಮೆರಾ
ಟೆಕ್ನೋ ಸ್ಪಾರ್ಕ್‌ 10 ಪ್ರೊ ಮೂನ್ ಎಕ್ಸ್‌ಪ್ಲೋರರ್ ಆವೃತ್ತಿ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ ಎರಡು LED ಫ್ಲಾಷ್‌ಗಳನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ AI ಲೆನ್ಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್‌ 10 ಪ್ರೊ ಮೂನ್ ಎಕ್ಸ್‌ಪ್ಲೋರರ್ ಆವೃತ್ತಿ ಬ್ಯಾಟರಿ ಮತ್ತು ಇತರೆ
ಟೆಕ್ನೋ ಸ್ಪಾರ್ಕ್‌ 10 ಪ್ರೊ ಮೂನ್ ಎಕ್ಸ್‌ಪ್ಲೋರರ್ ಆವೃತ್ತಿ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಕೇವಲ 40 ನಿಮಿಷಗಳಲ್ಲಿ 50% ಚಾರ್ಜಿಂಗ್‌ ಆಗಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಸ್ಟ್ಯಾಂಡ್‌ಬೈ ಮೋಡ್‌ನಲ್ಲಿ 27 ದಿನಗಳ ಬ್ಯಾಟರಿ ಅವಧಿಯನ್ನು ನೀಡಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಹಾಗೂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿದೆ.

ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 10 ಪ್ರೊ ಮೂನ್ ಎಕ್ಸ್‌ಪ್ಲೋರರ್ ಆವೃತ್ತಿ ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 10 ಪ್ರೊ ಮೂನ್ ಎಕ್ಸ್‌ಪ್ಲೋರರ್ ಆವೃತ್ತಿ ಸ್ಮಾರ್ಟ್‌ಫೋನ್‌ 16GB + 128GB RAM ಆವೃತ್ತಿಯು 11,999ರೂ ಬೆಲೆಯನ್ನು ಹೊಂದಿದೆ. ಇದು ಸೆಪ್ಟೆಂಬರ್ 15 ರಿಂದ ಖರೀದಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಆನ್‌ಲೈನ್ ಸ್ಟೋರ್‌ಗಳು ಮತ್ತು ಆಫ್‌ಲೈನ್ ರಿಟೇಲ್‌ ಸ್ಟೋರ್‌ಗಳ ಮೂಲಕ ಖರೀದಿಗೆ ಬರಲಿದೆ.

Best Mobiles in India

English summary
Tecno Spark 10 Pro Moon Explorer Edition Launched in india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+