ಈ ಬಜೆಟ್ ಬೆಲೆಯ ಫೋನ್ ಮೇಲೆ ಭಾರೀ ರಿಯಾಯಿತಿ! 1 TB ವರೆಗೆ ಸ್ಟೋರೇಜ್ ವಿಸ್ತರಣೆ ಸೌಲಭ್ಯ
ಟೆಕ್ನೋ (Tecno) ಸ್ಮಾರ್ಟ್‌ಫೋನ್‌ಗಳು ಇಂದು ಮಾರುಕಟ್ಟೆಯಲ್ಲಿ ವಿಶೇಷ ರೀತಿಯಲ್ಲಿ ಜನಪ್ರಿಯತೆ ಪಡೆದುಕೊಂಡಿವೆ. ಅದರಲ್ಲೂ ಬಜೆಟ್ ಬೆಲೆಯ ಫೋನ್‌ಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಈ ನಡುವೆ ಪ್ರಮುಖ ಇ-ಕಾಮರ್ಸ್ ಸೈಟ್‌ನಲ್ಲಿ 1 TB ವರೆಗೆ ಸ್ಟೋರೇಜ್ ವಿಸ್ತರಣೆ ಸೌಲಭ್ಯ ಇರುವ ಫೋನ್‌ಗೆ ಭಾರೀ ಆಫರ್ ನೀಡಲಾಗಿದೆ.
ಹೌದು, ಟೆಕ್ನೋ ಸ್ಪಾರ್ಕ್ 10 ಪ್ರೊ ಸ್ಮಾರ್ಟ್‌ಫೋನ್‌ಗೆ (Tecno Spark 10 Pro) ಇದೀಗ ಭರ್ಜರಿ ಆಫರ್ ಇದೆ. ಅಲ್ಲದೆ ಕಡಿಮೆ ಬೆಲೆಗೆ ಲಭ್ಯ ಇರುವ ಫೋನ್ ಉತ್ತಮ ಫೀಚರ್ಸ್ ಆಯ್ಕೆ ಪಡೆದುಕೊಂಡಿದೆ. ಅಂದರೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾದೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದೆ. ಹಾಗಿದ್ರೆ ಈ ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಬೆಲೆ ವಿವರ ನೋಡೋಣ ಬನ್ನಿ.

ಟೆಕ್ನೋ ಸ್ಪಾರ್ಕ್ 10 ಪ್ರೊ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್‌ನ ಆಫರ್ ಬೆಲೆ ತಿಳಿಯುವ ಮುನ್ನ ಇದರ ಪ್ರಮುಖ ಫೀಚರ್ಸ್ ತಿಳಿಯುವುದು ಉತ್ತಮವಾಗಿದೆ. ಈ ಅದರಂತೆ ಈ ಫೋನ್ 6.8 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, ಇದು 90Hz ರಿಫ್ರೆಶ್ ರೆಟ್ ಹಾಗೂ 1080 x 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 85.1% ಸ್ಕ್ರೀನ್-ಟು-ಬಾಡಿ ಅನುಪಾತ, 396 ಪಿಪಿಐ ಸಾಂದ್ರತೆ ಪಡೆದಿದೆ.
ಟೆಕ್ನೋ ಸ್ಪಾರ್ಕ್ 10 ಪ್ರೊ ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಫೋನ್ ಮೀಡಿಯಾಟೆಕ್ MT6769H ಹಿಲಿಯೊ G88 (12nm) ಪ್ರೊಸೆಸರ್ ಬಲ ಪಡೆದಿದ್ದು, ಆಂಡ್ರಾಯ್ಡ್ 13, ಎಚ್ಐಒಎಸ್ 12.6 ಓಎಸ್ ಅನ್ನು ರನ್ ಮಾಡಲಿದೆ. ಇದರೊಂದಿಗೆ ಮಾಲಿ-G52 MC2 ಗ್ರಾಫಿಕ್ಸ್ ಕಾರ್ಡ್ ಬಲ ಪಡೆದಿದ್ದು, 128GB ಇಂಟರ್ ಸ್ಟೋರೇಜ್‌ನೊಂದಿಗೆ 8GB RAM ಆಯ್ಕೆಯೊಂದಿಗೆ ಉತ್ತಮವಾಗಿ ಕೆಲಸ ಮಾಡಲಿದೆ.

ಟೆಕ್ನೋ ಸ್ಪಾರ್ಕ್ 10 ಪ್ರೊ ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ 50 ಮೆಗಾಪಿಕ್ಸೆಲ್‌ನ ಡೆಪ್ತ್ ಕ್ಯಾಮೆರಾ, 0.08 ಮೆಗಾಪಿಕ್ಸೆಲ್ ಆಕ್ಸಿಲಿಯರಿ ಲೆನ್ಸ್ ಹೊಂದಿದ್ದು, ಡ್ಯುಯಲ್-ಎಲ್ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಅನ್ನು ಈ ಫೋನ್ ಪಡೆದಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದ್ದು, 1440p@30fps ಸಾಮರ್ಥ್ಯದ ವಿಡಿಯೋಗಳನ್ನು ರೆಕಾರ್ಡ್ ಮಾಡಬಹುದಾಗಿದೆ.
ಟೆಕ್ನೋ ಸ್ಪಾರ್ಕ್ 10 ಪ್ರೊ ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಉಳಿದಂತೆ ಈ ಫೋನ್ 3.5 ಎಂಎಂ ಜ್ಯಾಕ್, ವೈ-ಫೈ 802.11 b/g/n, ಬ್ಲೂಟೂತ್ ಆವೃತ್ತಿ 5.3, A2DP, LE, ಎಫ್‌ಎಮ್ ರೇಡಿಯೋ, ಯುಎಸ್‌ಬಿ ಟೈಪ್-ಸಿ 2.0, OTG ಕನೆಕ್ಟಿವಿಟಿ ಬೆಂಬಲ ಪಡೆದಿದೆ.
ಟೆಕ್ನೋ ಸ್ಪಾರ್ಕ್ 10 ಪ್ರೊ ಸ್ಮಾರ್ಟ್‌ಫೋನ್ ಬೆಲೆ ಹಾಗೂ ಆಫರ್ ಮಾಹಿತಿ: ಇದೀಗ ಈ ಫೋನ್‌ನ ಪ್ರಮುಖ ವಿಚಾರಕ್ಕೆ ಬರೋಣ. ಈ ಫೋನ್ 13,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 10,899 ರೂ.ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಅಂದರೆ ಫ್ಲಿಪ್‌ಕಾರ್ಟ್ ಈ ಫೋನ್‌ಗೆ 22% ರಿಯಾಯಿತಿ ನೀಡಿದೆ. ಇದರೊಂದಿಗೆ ಬ್ಯಾಂಕ್ ಕೊಡುಗೆ ಸಹ ಇದೆ.

ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವ್ಯವಹಾರದ ಮೇಲೆ 10% ರಿಯಾಯಿತಿ, ಸಿಟಿ-ಬ್ರಾಂಡೆಡ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ, ಒನ್‌ಕಾರ್ಡ್ ಕ್ರೆಡಿಟ್ ಕಾರ್ಡ್ ಮತ್ತು ಕ್ರೆಡಿಟ್ ಇಎಮ್‌ಐ ವ್ಯವಹಾರದ ಮೇಲೆ ಆಫರ್ ಸಿಗಲಿದೆ. ಈ ಮೂಲಕ ನೀವು ಬಜೆಟ್ ಬೆಲೆಯ ಈ ಫೋನ್ ಅನ್ನು ಇನ್ನೂ ಕಡಿಮೆ ಬೆಲೆಗೆ ನಿಮ್ಮದಾಗಿಸಿಕೊಳ್ಳಬಹುದಾಗಿದೆ.


Click it and Unblock the Notifications








