256GB ಸ್ಟೋರೇಜ್‌ನ ಈ ಅಗ್ಗದ ಫೋನ್ ಇಂದಿನಿಂದ ಖರೀದಿಗೆ ಲಭ್ಯ!
ಟೆಕ್ನೋ ಮೊಬೈಲ್ ಸಂಸ್ಥೆಯು ಅಗ್ಗದ ದರದಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ಟೆಕ್ನೋ ಸ್ಪಾರ್ಕ್ 20 ಫೋನ್ ಇಂದು (ಫೆಬ್ರವರಿ 2 ರಂದು) ಇ ಕಾಮರ್ಸ್ ತಾಣ ಅಮೆಜಾನ್ ಮೊದಲ ಮಾರಾಟ ಪ್ರಾರಂಭಿಸಿದೆ.
ಹೌದು, ಟೆಕ್ನೋ ಸ್ಪಾರ್ಕ್ 20 ಮೊಬೈಲ್ ಇಂದು ಮೊದಲ ಸೇಲ್ ಅನ್ನು ಅಮೆಜಾನ್ ಮೂಲಕ ಸೇಲ್ ಶುರು ಮಾಡಿದ್ದು, ಆಕರ್ಷಕ ಕೊಡುಗೆ ಸಹ ಪಡೆದಿದೆ. ಈ ಫೋನ್ 8GB + 256GB ಸ್ಟೋರೇಜ್ ವೇರಿಯಂಟ್ 11,499ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಇದು ಸುಮಾರು 8GB ವರೆಗೂ ವರ್ಚುವಲ್ RAM ಸೌಲಭ್ಯ ಸಹ ಪಡೆದಿದೆ.

ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಈ ಫೋನ್ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಜೊತೆಗೆ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಕೂಡಾ ಹೊಂದಿದೆ. ಹಾಗಾದರೇ ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಟೆಕ್ನೋ ಸ್ಪಾರ್ಕ್ 20 - ಫೀಚರ್ಸ್
ಟೆಕ್ನೋ ಸ್ಪಾರ್ಕ್ 20 ಮೊಬೈಲ್ 6.6 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದರೊಂದಿಗೆ ಸ್ಮಾರ್ಟ್‌ಪೋನ್ ಫ್ಲಾಟ್ ಅಂಚುಗಳೊಂದಿಗೆ ಪ್ಲಾಸ್ಟಿಕ್ ಯುನಿಬಾಡಿ ವಿನ್ಯಾಸವನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್ 20 ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಆಂಡ್ರಾಯ್ಡ್ 13 ಆಧಾರಿತ HiOS 13 ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಸ್ಟೋರೇಜ್ ಸಾಮರ್ಥ್ಯದಲ್ಲಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ ಹೆಚ್ಚುವರಿ 8GB ಯಿಂದ 16GB ವರೆಗೆ ವಿಸ್ತರಿಸಬಹುದಾಗಿದೆ. ಇನ್ನು ಮೆಮೊರಿ ಕಾರ್ಡ್ ಸಪೋರ್ಟ್ ಜೊತೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಸಹ ನೀಡಿದೆ.
ಟೆಕ್ನೋ ಸ್ಪಾರ್ಕ್ 20 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಎರಡನೇ ಕ್ಯಾಮೆರಾ ಅನಿರ್ದಿಷ್ಟ ಸೆಕೆಂಡರಿ ಸೆನ್ಸಾರ್ ಮತ್ತು ಡ್ಯುಯಲ್ LED ಫ್ಲ್ಯಾಷ್ ಯೂನಿಟ್‌ಗಳೊಂದಿಗೆ ಪಡೆದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 18W ವೈರ್ಡ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G, Wi-Fi, GNSS ಮತ್ತು ಬ್ಲೂಟೂತ್ 5.2 ಸಂಪರ್ಕವನ್ನು ಸಹ ಬೆಂಬಲಿಸುತ್ತದೆ. ಭದ್ರತೆಗಾಗಿ, ಹ್ಯಾಂಡ್ಸೆಟ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರುತ್ತದೆ. ಹಾಗೆಯೇ ಇದು ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP53 ರೇಟಿಂಗ್ ಅನ್ನು ಸೌಲಭ್ಯ ಪಡೆದಿದೆ.
ದೇಶಿಯ ಮಾರುಕಟ್ಟೆಯಲ್ಲಿ ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್ 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಲಭ್ಯ ಇದೆ. ಇನ್ನು ಈ ಸ್ಮಾರ್ಟ್‌ಫೋನ್ ಸೈಬರ್ ವೈಟ್, ಗ್ರಾವಿಟಿ ಬ್ಲಾಕ್, ಮ್ಯಾಜಿಕ್ ಸ್ಕಿನ್ 2.0 (ಬ್ಲೂ), ಮತ್ತು ನಿಯಾನ್ ಗೋಲ್ಡ್ ಕಲರ್ ಆಯ್ಕೆ ಪಡೆದಿದೆ.


Click it and Unblock the Notifications








