ಇಂದು ಟೆಕ್ನೋ ಸ್ಪಾರ್ಕ್ 20 ಪ್ರೊ 5G ಫೋನ್ ಬಿಡುಗಡೆ!..ಆಕರ್ಷಕ ಕ್ಯಾಮೆರಾ!
ಅಗ್ಗದ ಬೆಲೆಯ ಫೋನ್‌ಗಳಿಂದ ಗುರುತಿಸಿಕೊಂಡಿರುವ ಟೆಕ್ನೋ ಸಂಸ್ಥೆಯ ಹೊಸ ಟೆಕ್ನೋ ಸ್ಪಾರ್ಕ್ 20 ಪ್ರೊ 5G (Tecno Spark 20 Pro 5G) ಮೊಬೈಲ್ ಇಂದು (ಜುಲೈ 9 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಗ್ಗೆ ಇಡಲಿದೆ. ಟೆಕ್ನೋ ಸಂಸ್ಥೆಯ ಈ ಮೊಬೈಲ್ ಬಜೆಟ್ ದರದಲ್ಲಿ ಎಂಟ್ರಿ ಕೊಡುವ ಸಾಧ್ಯತೆಗಳಿದ್ದು, ಮಾರುಕಟ್ಟೆಯ ಗಮನ ಸೆಳೆಯುವ ಸೂಚನೆ ನೀಡಿದೆ. ಇನ್ನು ಈ ಫೋನ್ 5000mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿರಲಿದ್ದು, ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6080 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುವುದು ಬಹುತೇಕ ಖಚಿತ ಎನ್ನಲಾಗಿದೆ.
ಹೌದು, ಟೆಕ್ನೋ ಸಂಸ್ಥೆಯ ಟೆಕ್ನೋ ಸ್ಪಾರ್ಕ್ 20 ಪ್ರೊ 5G (Tecno Spark 20 Pro 5G) ಫೋನ್ ದೇಶಿಯ ಮಾರುಕಟ್ಟೆಯಲ್ಲಿ ಇಂದು ಬಿಡುಗಡೆ ಆಗಲಿದೆ. ಈ ಫೋನ್ ಬಿಡುಗಡೆಯ ಕುರಿತು ದೈತ್ಯ ಇ ಕಾಮರ್ಸ್ ಅಮೆಜಾನ್ ಪ್ಲಾಟ್‌ಫಾರ್ಮ್ ಮೈಕ್ರೋ ಸೈಟ್ ಕೂಡಾ ತೆರೆದಿದೆ. ಸ್ಟೈಲಿಶ್ ಲುಕ್ ಜೊತೆಗೆ ಈ ಫೋನ್ 50 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೋನಿ AI ಕ್ಯಾಮೆರಾ ರಚನೆ ಪಡೆದಿರುವ ನಿರೀಕ್ಷೆಗಳು ಇವೆ.

ಇನ್ನು ಟೆಕ್ನೋ ಸ್ಪಾರ್ಕ್ 20 ಪ್ರೊ 5G ಫೋನ್ 108 ಮೆಗಾ ಪಿಕ್ಸಲ್ ಮುಖ್ಯ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ. ಇದರೊಂದಿಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಖಚಿತ ಎನ್ನಲಾಗಿದ್ದು, ಹಾಗೆಯೇ 33W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿರುವ ಸಾಧ್ಯತೆ ಹೆಚ್ಚಿದೆ. ಇನ್ನುಳಿದಂತೆ ಟೆಕ್ನೋ ಸ್ಪಾರ್ಕ್ 20 ಪ್ರೊ 5G ಫೋನಿನ ಇತರೆ ನಿರೀಕ್ಷಿತ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಟೆಕ್ನೋ ಸ್ಪಾರ್ಕ್ 20 ಪ್ರೊ 5G - ನಿರೀಕ್ಷಿತ ಫೀಚರ್ಸ್ ಹೀಗಿವೆ
ಟೆಕ್ನೋ ಸ್ಪಾರ್ಕ್ 20 ಪ್ರೊ 5G ಮೊಬೈಲ್ 6.78 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿರಲಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ ಸಾಧ್ಯತೆ ಇದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿರುವ ಸಾಧ್ಯತೆಗಳು ಇವೆ. ಇನ್ನು ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6080 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿರಲಿದೆ.
ಹಾಗೆಯೇ ಟೆಕ್ನೋ ಸ್ಪಾರ್ಕ್ 20 ಪ್ರೊ 5G ಫೋನ್ 14GB RAM + 256 GB ಸ್ಟೋರೇಜ್ ವರೆಗೂ ಆಯ್ಕೆ ಒಳಗೊಂಡಿರುವ ನಿರೀಕ್ಷೆಗಳು ಇವೆ. ಅಲ್ಲದೇ ಇದು ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿರಲಿದ್ದು, ಇದರ ಮೊದಲ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ದಲ್ಲಿ ಇರಲಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ನಿರೀಕ್ಷೆ ಇದೆ.
ಟೆಕ್ನೋ ಸ್ಪಾರ್ಕ್ 20 ಪ್ರೊ 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿರುವ ನಿರೀಕ್ಷೆಗಳು ಹೆಚ್ಚಿದ್ದು, ಇದಕ್ಕೆ ಅನುಗುಣವಾಗಿ 33W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ-ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಒಳಗೊಂಡಂತೆ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಒಳಗೊಂಡಿರಲಿದೆ.


Click it and Unblock the Notifications








