ಅಂತೂ ಇಂತೂ ಲಾಂಚ್ ಆಯ್ತು ಟೆಕ್ನೋ ಸ್ಪಾರ್ಕ್ 20 ಪ್ರೊ 5G ಫೋನ್!..108ಎಂಪಿ ಕ್ಯಾಮೆರಾ!
ಬಹುನಿರೀಕ್ಷಿತ ಟೆಕ್ನೋ ಸಂಸ್ಥೆಯ ನೂತನ ಟೆಕ್ನೋ ಸ್ಪಾರ್ಕ್ 20 ಪ್ರೊ 5G (Tecno Spark 20 Pro 5G) ಮೊಬೈಲ್ ಇಂದು ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಗ್ಗೆ ಇಟ್ಟಿದೆ. ಟೆಕ್ನೋ ಸಂಸ್ಥೆಯ ಈ ಮೊಬೈಲ್ ಬಜೆಟ್ ದರದಲ್ಲಿ ಲಾಂಚ್ ಆಗಿದ್ದು, ಗ್ರಾಹಕರ ಗಮನ ಸೆಳೆಯುವ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್ 5000mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 6080 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದೆ.
ಹೌದು, ಟೆಕ್ನೋ ಸಂಸ್ಥೆಯ ಟೆಕ್ನೋ ಸ್ಪಾರ್ಕ್ 20 ಪ್ರೊ 5G (Tecno Spark 20 Pro 5G) ಫೋನ್ ದೇಶಿಯ ಮಾರುಕಟ್ಟೆಯಲ್ಲಿ ಲಾಂಚ್ ಆಗಿದೆ. ಈ ಫೋನ್ 8GB RAM + 128GB ಹಾಗೂ 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ. ಅಲ್ಲದೇ 50 ಮೆಗಾ ಪಿಕ್ಸಲ್ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ.

ಹಾಗೆಯೇ ಟೆಕ್ನೋ ಸ್ಪಾರ್ಕ್ 20 ಪ್ರೊ 5G ಫೋನ್ 108 ಮೆಗಾ ಪಿಕ್ಸಲ್ ಮುಖ್ಯ ಕ್ಯಾಮೆರಾ ರಚನೆ ಪಡೆದಿದೆ. ಇದರೊಂದಿಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಹೊಂದಿದ್ದು, ಹಾಗೆಯೇ 33W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇನ್ನುಳಿದಂತೆ ಟೆಕ್ನೋ ಸ್ಪಾರ್ಕ್ 20 ಪ್ರೊ 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಟೆಕ್ನೋ ಸ್ಪಾರ್ಕ್ 20 ಪ್ರೊ 5G ಫೋನ್ ಫೀಚರ್ಸ್
ಟೆಕ್ನೋ ಸ್ಪಾರ್ಕ್ 20 ಪ್ರೊ 5G ಮೊಬೈಲ್ 6.78 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದೆ. ಇನ್ನು ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6080 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ.
ಹಾಗೆಯೇ ಟೆಕ್ನೋ ಸ್ಪಾರ್ಕ್ 20 ಪ್ರೊ 5G ಫೋನ್8GB RAM + 128GB ಹಾಗೂ 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ದಲ್ಲಿ ಇದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.
ಟೆಕ್ನೋ ಸ್ಪಾರ್ಕ್ 20 ಪ್ರೊ 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 33W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ-ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಒಳಗೊಂಡಂತೆ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಒಳಗೊಂಡಿದೆ.
ಬೆಲೆ ಹಾಗು ಲಭ್ಯತೆ ಮಾಹಿತಿ
8GB RAM + 128GB ಬೆಲೆ 15,999ರೂ. ಆಗಿದೆ
8GB RAM + 256GB ಬೆಲೆ 16,999ರೂ. ಆಗಿದೆ
ಇನ್ನು ಈ ಫೋನ್ ಇದೇ ಜುಲೈ 11 ರಂದು ಆನ್‌ಲೈನ್ ಹಾಗೂ ಆಫ್‌ಲೈನ್ ತಾಣಗಳ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಹಾಗೆಯೇ ಇದು ಸ್ಟಾರ್ಟ್ರೈಲ್ ಕಪ್ಪು ಮತ್ತು ಗ್ಲಾಸಿ ವೈಟ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.


Click it and Unblock the Notifications








