ಮಾರುಕಟ್ಟೆಗೆ ಬಂತು ಟೆಕ್ನೋ ಸ್ಪಾರ್ಕ್ 20 ಪ್ರೊ ಫೋನ್! 108MP ಕ್ಯಾಮೆರಾ.. 256GB ಸ್ಟೋರೇಜ್!
ಟೆಕ್ನೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್ ವಲಯದಲ್ಲಿ ಉತ್ತಮ ಬೇಡಿಕೆಯಿದೆ. ತನ್ನ ಬಜೆಟ್ ಬೆಲೆಯ ಫೋನ್‌ಗಳಿಂದ ಮೊಬೈಲ್ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಮಾರುಕಟ್ಟೆಯಲ್ಲಿ ಹೊಸದಾಗಿ ಟೆಕ್ನೋ ಸ್ಪಾರ್ಕ್ 20 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Helio G99 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದೆ.
ಹೌದು, ಟೆಕ್ನೋ ಸ್ಪಾರ್ಕ್ 20 ಪ್ರೊ ಸ್ಮಾರ್ಟ್‌ಫೋನ್ ಟೆಕ್ ವಲಯದಲ್ಲಿ ಅನಾವರಣಗೊಂಡಿದೆ. ಈ ಸ್ಮಾರ್ಟ್‌ಫೋನ್ 108MP ಸೆನ್ಸಾರ್ ಮುಖ್ಯ ಕ್ಯಾಮೆರಾವನ್ನು ಪಡೆದುಕೊಂಡಿದೆ. ಜೊತೆಗೆ ಸ್ಮಾರ್ಟ್‌ಫೋನ್ 5,0000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಸ್ಪಾರ್ಕ್ 20 ಪ್ರೊ ಡಿಸ್‌ಪ್ಲೇ ರಚನೆ
ಟೆಕ್ನೋ ಸ್ಪಾರ್ಕ್ 20 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1080 x 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮೈರ್ಥ್ಯದಲ್ಲಿದ್ದು, 120Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇದು 84.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 396 ಪಿಪಿಐ ಸಾಂದ್ರತೆಯಲ್ಲಿದೆ.
ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ರೊಸೆಸರ್ ಯಾವುದು?
ಟೆಕ್ನೋ ಸ್ಪಾರ್ಕ್ 20 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G99 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.

ಟೆಕ್ನೋ ಸ್ಪಾರ್ಕ್ 20 ಪ್ರೊ ಕ್ಯಾಮೆರಾ ಸೆಟ್‌ಅಪ್ ಏನಿದೆ?
ಟೆಕ್ನೋ ಸ್ಪಾರ್ಕ್ 20 ಪ್ರೊ 108 ಮೆಗಾಪಿಕ್ಸೆಲ್ ಸೆನ್ಸಾರ್ ಮುಖ್ಯ ಕ್ಯಾಮೆರಾವನ್ನು ಹೊಂದಿದೆ. ಇದು 0.08MP ಸೆಕೆಂಡರಿ ಕ್ಯಾಮೆರಾದೊಂದಿಗೆ ಜೋಡಿಯಾಗಿದೆ. ಹಿಂಬದಿಯ ಕ್ಯಾಮೆರಾ ಮಾಡ್ಯೂಲ್ ಡ್ಯುಯಲ್ LED ಫ್ಲ್ಯಾಷ್‌ನೊಂದಿಗೆ ಬರಲಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆ ಉದ್ದೇಶಗಳಿಗಾಗಿ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
ಟೆಕ್ನೋ ಸ್ಪಾರ್ಕ್ 20 ಪ್ರೊ ಬ್ಯಾಟರಿ ಮತ್ತು ಇತರೆ
ಟೆಕ್ನೋ ಸ್ಪಾರ್ಕ್ 20 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್ ಕಾರ್ಡ್ ಸ್ಲಾಟ್, 4G VoLTE, Wi-Fi 802.11 b/g/n/ac, ಬ್ಲೂಟೂತ್, GPS, USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ IP53 ರೇಟಿಂಗ್ ಹೊಂದಿದ್ದು, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಫೇಸ್ ಅನ್‌ಲಾಕ್ ಬೆಂಬಲವನ್ನು ಪಡೆದಿದೆ.

ಟೆಕ್ನೋ ಸ್ಪಾರ್ಕ್ 20 ಪ್ರೊ ಬೆಲೆ ಮತ್ತು ಲಭ್ಯತೆ
ಟೆಕ್ನೋ ಸ್ಪಾರ್ಕ್ 20 ಪ್ರೊ ಸ್ಮಾರ್ಟ್‌ಫೋನ್ ಸದ್ಯ ಪಿಲಿಫೈನ್ಸ್ ನಲ್ಲಿ ಅನಾವರಣಗೊಂಡಿದೆ. ಆದರಿಂದ ಅಲ್ಲಿಯ ಬೆಲೆ PHP 5,599 (ಸುಮಾರು 8,400ರೂ)ಆಗಿದೆ. ಈ ಸ್ಮಾರ್ಟ್‌ಫೋನ್ ಪ್ರಸ್ತುತ ಶಾಪ್ಪೆ ವೆಬ್‌ಸೈಟ್ ಮೂಲಕ ಫಿಲಿಪೈನ್ಸ್‌ನಲ್ಲಿ ಈಗಾಗಲೇ ಖರೀದಿಗೆ ಕೂಡ ಲಭ್ಯವಿದೆ. ಇದು ಭಾರತವು ಸೇರಿದಂತೆ ಇತರೆ ಮಾರುಕಟ್ಟೆಗಳಲ್ಲಿ ಯಾವಾಗ ಬರಲಿದೆ ಅನ್ನೊದು ಬಹಿರಂಗವಾಗಿಲ್ಲ. ಇನ್ನು ಈ ಫೋನ್ ಮೂನ್‌ಲೈಟ್ ಬ್ಲಾಕ್, Frosty Ivory, Sunset Blush ಮತ್ತು Magic Skin Green ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.


Click it and Unblock the Notifications








