Tecno: ಭಾರತಕ್ಕೆ ಎಂಟ್ರಿ ಕೊಟ್ಟ ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್: ಫೀಚರ್ಸ್ ಹೇಗಿದೆ? ಬೆಲೆ ಎಷ್ಟಿದೆ?
ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್ ಅಂತಿಮವಾಗಿ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸಿಸ್ಟಮ್ ಅನ್ನು ಒಳಗೊಂಡಿದೆ.
ಹೌದು, ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್ ಭಾರತಕ್ಕೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಪೋನ್‌ನಲ್ಲಿ ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆಯೇ ಕಾರ್ಯನಿರ್ವಹಿಸುವ ಟೆಕ್ನೋದ ಡೈನಾಮಿಕ್ ಪೋರ್ಟ್ ಸಾಫ್ಟ್‌ವೇರ್ ಫೀಚರ್ಸ್ ಲಭ್ಯವಿದೆ. ಇನ್ನು ಈ ಫೋನ್ 4G, ವೈಫೈ, GNSS ಮತ್ತು ಬ್ಲೂಟೂತ್ 5.2 ಸಂಪರ್ಕವನ್ನು ಸಹ ಬೆಂಬಲಿಸುತ್ತದೆ. ಹಾಗಾದ್ರೆ ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಸ್ಪಾರ್ಕ್ 20 ಫೀಚರ್ಸ್ ಹೇಗಿದೆ?
ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇಯು 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದರೊಂದಿಗೆ ಸ್ಮಾರ್ಟ್‌ಪೋನ್ ಫ್ಲಾಟ್ ಅಂಚುಗಳೊಂದಿಗೆ ಪ್ಲಾಸ್ಟಿಕ್ ಯುನಿಬಾಡಿ ವಿನ್ಯಾಸವನ್ನು ಹೊಂದಿದೆ.
ಟೆಕ್ನೋ ಸ್ಪಾರ್ಕ್ 20 ಪ್ರೊಸೆಸರ್ ಯಾವುದು?
ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13-ಆಧಾರಿತ HiOS 13 ನೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ ಹೆಚ್ಚುವರಿ 8GB ಯಿಂದ 16GB ವರೆಗೆ ವಿಸ್ತರಿಸಬಹುದಾಗಿದೆ. ಇನ್ನು ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಸಹ ನೀಡಿದೆ.

ಟೆಕ್ನೋ ಸ್ಪಾರ್ಕ್ 20 ಕ್ಯಾಮೆರಾ ಸೆಟಪ್ ಏನಿದೆ?
ಟೆಕ್ನೋ ಸ್ಪಾರ್ಕ್ 20 ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಎರಡನೇ ಕ್ಯಾಮೆರಾ ಅನಿರ್ದಿಷ್ಟ ಸೆಕೆಂಡರಿ ಸೆನ್ಸಾರ್ ಮತ್ತು ಡ್ಯುಯಲ್ LED ಫ್ಲ್ಯಾಷ್ ಯೂನಿಟ್‌ಗಳೊಂದಿಗೆ ಬರುತ್ತದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಟೆಕ್ನೋ ಸ್ಪಾರ್ಕ್ 20 ಬ್ಯಾಟರಿ ಮತ್ತು ಇತರೆ
ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 18W ವೈರ್ಡ್ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, GNSS ಮತ್ತು ಬ್ಲೂಟೂತ್ 5.2 ಸಂಪರ್ಕವನ್ನು ಸಹ ಬೆಂಬಲಿಸುತ್ತದೆ. ಭದ್ರತೆಗಾಗಿ, ಹ್ಯಾಂಡ್ಸೆಟ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರುತ್ತದೆ. ಜೊತೆಗೆ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP53 ರೇಟಿಂಗ್ ಅನ್ನು ಪಡೆಯುತ್ತದೆ.

ಭಾರತದಲ್ಲಿ Tecno Spark 20 ಬೆಲೆ ಮತ್ತು ಲಭ್ಯತೆ
ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್ ಭಾರತದಲ್ಲಿ 10,499ರೂ ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಸೈಬರ್ ವೈಟ್, ಗ್ರಾವಿಟಿ ಬ್ಲಾಕ್, ಮ್ಯಾಜಿಕ್ ಸ್ಕಿನ್ 2.0 (ಬ್ಲೂ), ಮತ್ತು ನಿಯಾನ್ ಗೋಲ್ಡ್ ಬಣ್ಣಗಳಲ್ಲಿ ಬರಲಿದೆ. ಇನ್ನು ಸ್ಮಾರ್ಟ್‌ಫೋನ್ ಫೆಬ್ರವರಿ 2 ರಿಂದ ಪ್ರಾರಂಭವಾಗುವ Amazon ಮೂಲಕ ಖರೀದಿಗೆ ಲಭ್ಯವಾಗಲಿದೆ. ಟೆಕ್ನೋ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಟೆಕ್ನೋ 4,897ರೂ ಉಚಿತ ವಾರ್ಷಿಕ OTTPlay ಚಂದಾದಾರಿಕೆಯನ್ನು ವಿಸ್ತರಿಸುತ್ತಿದೆ. ಇದು SonyLIV, Zee5, Lionsgate Play, ಮತ್ತು Fancode ನಂತಹ 19 OTT ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶವನ್ನು ಒಳಗೊಂಡಿರುತ್ತದೆ.


Click it and Unblock the Notifications








