Home
ಸುದ್ದಿಜಾಲ

ನೀವು ಬೇಡಾ ಅಂದ್ರೂ, ಅಗ್ಗದ ದರದ ಈ ಫೋನಿಗೆ ಮತ್ತಷ್ಟು ಡಿಸ್ಕೌಂಟ್‌ ಲಭ್ಯ!

ಇ ಕಾಮರ್ಸ್‌ ದೊಡ್ಡಣ್ಣ ಎನಿಸಿಕೊಂಡಿರುವ ಅಮೆಜಾನ್‌ (Amazon) ವೆಬ್‌ಸೈಟ್‌ ಆನ್‌ಲೈನ್‌ ಖರೀದಿದಾರರಿಗೆ ಅತ್ಯುತ್ತಮ ಪ್ಲಾಟ್‌ಫಾರ್ಮ್ ಎನಿಸಿದೆ. ಮುಖ್ಯವಾಗಿ ಅಮೆಜಾನ್‌ ಮೊಬೈಲ್‌ಗಳಿಗೆ ಏನಾದರೊಂದು ಮಾರಾಟ ಆಯೋಜಿಸುವ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತದೆ. ಇದೀಗ ಟೆಕ್ನೋ ಡೇಸ್‌ ಸೇಲ್‌ ಚಾಲ್ತಿ ಇದ್ದು, ಈ ಮಾರಾಟದಲ್ಲಿ ಟೆಕ್ನೋ ಸಂಸ್ಥೆಯ ಟೆಕ್ನೋ ಸ್ಪಾರ್ಕ್‌ 20C (TECNO SPARK 20C) ಮೊಬೈಲ್‌ ಸಖತ್‌ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಎಂಟ್ರಿ ಲೆವೆಲ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಖುಷಿ ಎನಿಸಿದೆ.

ಹೌದು, ಲೀಡಿಂಗ್ ಇ ಕಾಮರ್ಸ್‌ ವೆಬ್‌ಸೈಟ್‌ ಹೆಗ್ಗಳಿಕೆಯ ಅಮೆಜಾನ್‌ ತಾಣದಲ್ಲಿ ಟೆಕ್ನೋ ಸ್ಪಾರ್ಕ್‌ 20C (TECNO SPARK 20C) ಫೋನ್‌ ಶೇ. 24% ರಷ್ಟು ಜಬರ್ದಸ್ತ್‌ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8 GB + 128 GB ಸ್ಟೋರೇಜ್‌ ವೇರಿಯಂಟ್‌ 7,999ರೂ. ಗಳ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಇತರೆ ಆಯ್ದ ಬ್ಯಾಂಕ್‌ ಕೊಡುಗೆಗಳು ಕೂಡಾ ಗ್ರಾಹಕರಿಗೆ ಸಿಗುತ್ತವೆ.

ನೀವು ಬೇಡಾ ಅಂದ್ರೂ, ಅಗ್ಗದ ದರದ ಈ ಫೋನಿಗೆ ಮತ್ತಷ್ಟು ಡಿಸ್ಕೌಂಟ್‌ ಲಭ್ಯ!

ಅಲ್ಲದೇ ಈ ಫೋನ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಸೌಲಭ್ಯ ಪಡೆದುಕೊಂಡಿದೆ. ಇನ್ನು ಇದು ಗ್ರ್ಯಾವಿಟಿ ಬ್ಲ್ಯಾಕ್, ಮ್ಯಾಜಿಕ್ ಸ್ಕೀನ್ ಗ್ರೀನ್ ಹಾಗೂ ಮೈಸ್ಟ್ರಿ ವೈಟ್ ಕಲರ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೇ ಟೆಕ್ನೋ ಸ್ಪಾರ್ಕ್‌ 20C ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಟೆಕ್ನೋ ಸ್ಪಾರ್ಕ್ 20C ಫೀಚರ್ಸ್‌ ಹೀಗಿವೆ

ಟೆಕ್ನೋ (Tecno) ಸ್ಪಾರ್ಕ್ 20C ಮೊಬೈಲ್‌ 6.6 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇನ್ನು ಡಿಸ್‌ಪ್ಲೇಯು 720 × 1612 ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ ಆಯ್ಕೆ ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದ್ದು, ಇದರ ಜೊತೆಗೆ ಡಿಸ್‌ಪ್ಲೇ ಮೇಲ್ಭಾಗದ ಮಧ್ಯ ಪಂಚ್ ಹೋಲ್ ನಾಚ್, ಮತ್ತು ಡೈನಾಮಿಕ್ ಪೋರ್ಟ್‌ ಆಯ್ಕೆಗಳನ್ನು ಒಳಗೊಂಡಿದೆ.

ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್ ಜೊತೆಗೆ ಕೆಲಸ ನಿರ್ವಹಿಸಲಿದೆ. ಅಲ್ಲದೇ ಈ ಫೋನ್‌ PowerVR GE8320 GPU ಸಪೋರ್ಟ್‌ ಕೂಡಾ ಪಡೆದುಕೊಂಡಿದೆ. ಹಾಗೆಯೇ 8GB + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದ್ದು, ಹೆಚ್ಚುವರಿಯಾಗಿ 8GB ವರ್ಚುವಲ್ RAM ಸೌಲಭ್ಯ ಸಹ ಹೊಂದಿದೆ.

ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ ಹಿಂಭಾಗದಲ್ಲಿ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಅನ್ನು ಪಡೆದಿದ್ದು, ಇದು PDAF ಮತ್ತು HDR AI ಲೆನ್ಸ್ ಮತ್ತು ಡ್ಯುಯಲ್ LED ಫ್ಲ್ಯಾಷ್ ಅನ್ನು ಒಳಗೊಂಡಿದೆ. ಇದರೊಂದಿಗೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದರೊಂದಿಗೆ ಡ್ಯುಯಲ್ ಫ್ಲ್ಯಾಷ್‌ ಅನ್ನು ಸಹ ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಹಾಗೂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ 8 GB + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಮೊಬೈಲ್‌ ಗ್ರ್ಯಾವಿಟಿ ಬ್ಲ್ಯಾಕ್, ಮ್ಯಾಜಿಕ್ ಸ್ಕೀನ್ ಗ್ರೀನ್ ಹಾಗೂ ಮೈಸ್ಟ್ರಿ ವೈಟ್ ಕಲರ್‌ ಆಯ್ಕೆಗಳಲ್ಲಿ ಲಭ್ಯ. ಇನ್ನು ಖರೀದಿದಾರರು ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
TECNO SPARK 20C available at Awesome price Cut on Amazon Tecno Days Sale. check out price, specifications, offer and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+