ಗ್ರ್ಯಾಂಡ್ ಎಂಟ್ರಿಗೆ ರೆಡಿಯಾಗಿದೆ ಟೆಕ್ನೋ ಸ್ಪಾರ್ಕ್ 20C: ಫೀಚರ್ಸ್ ನಿರೀಕ್ಷೆ ಏನು?
ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಗರಿಗೆದರಿವೆ. ಇದೀಗ ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ ಅನ್ನು ಗೀಕ್‌ಬೆಂಚ್ ಮತ್ತು ಬ್ಲೂಟೂತ್ ಎಸ್‌ಐಜಿ ಪ್ರಮಾಣೀಕರಣ ಸೈಟ್‌ಗಳಲ್ಲಿ ಗುರುತಿಸಲಾಗಿದೆ. ಈ ಪಟ್ಟಿಯಲ್ಲಿ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿರಲಿದೆ ಅನ್ನೊದು ಬಹಿರಂಗವಾಗಿದೆ.
ಹೌದು, ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ ಫೀಚರ್ಸ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಸ್ಮಾರ್ಟ್‌ಫೋನ್ ಬ್ಲೂಟೂತ್ 5.0 ಸಂಪರ್ಕ ಬೆಂಬಲವನ್ನು ಪಡೆಯುವ ನಿರೀಕ್ಷೆಯಿದೆ. ಇದು ಮೀಡಿಯಾಟೆಕ್ ಹಿಲಿಯೋ P35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಹಾಗಾದ್ರೆ ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಸ್ಪಾರ್ಕ್ 20C ಡಿಸ್‌ಪ್ಲೇ ರಚನೆ ಹೇಗಿದೆ?
ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ ಎನ್ನಲಾಗಿದೆ. ಇದು ವಾಟರ್ ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸದೊಂದಿಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.
ಟೆಕ್ನೋ ಸ್ಪಾರ್ಕ್ 20C ಪ್ರೊಸೆಸರ್ ಯಾವುದು?
ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹೆಲಿಯೊ P35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ರನ್ ಆಗಲಿದೆ. ಹಾಗೆಯೇ 8 GB RAM + 128 GB ಇಂಟರ್ ಸ್ಟೋರೇಜ್ ಹೊಂದಿರಲಿದೆ. ಇದಲ್ಲದೆ 8GB ವರ್ಚುವಲ್ RAM ನೊಂದಿಗರ ಬರಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಾಗಿರುತ್ತದೆ ಎಂದು ವರದಿಯಾಗಿದೆ.
ಟೆಕ್ನೋ ಸ್ಪಾರ್ಕ್ 20C ಕ್ಯಾಮೆರಾ ಸೆಟ್‌ಅಪ್
ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿರಲಿದೆ. ಎರಡನೇ ಕ್ಯಾಮೆರಾ ವಿವರ ಬಹಿರಂಗವಾಗಿಲ್ಲ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ. ಇನ್ನು ರಿಯರ್ ಕ್ಯಾಮೆರಾ ಮೂಲಕ 1080p @ 30 fps FHD ವೀಡಿಯೊ ರೆಕಾರ್ಡಿಂಗ್ ಅನ್ನು ಮಾಡುವುದಕ್ಕೆ ಅವಕಾಶ ದೊರಯಲಿದೆ ಎನ್ನಲಾಗಿದೆ.
ಟೆಕ್ನೋ ಸ್ಪಾರ್ಕ್ 20C ಬ್ಯಾಟರಿ ಮತ್ತು ಇತರೆ
ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪ್ಯಾಕ್ ಮಾಡಬಹುದು. ಇದು 18W ಚಾರ್ಜಿಂಗ್‌ಗೆ ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, VoLTE, ಬ್ಲೂಟೂತ್, ವೈಫೈ, USB-C v2.0 ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಆಕ್ಸಿಲೆರೋಮೀಟರ್ ಅನ್ನೊ ಹೊಂದಿರಬಹುದು ಎಂಬ ನಿರೀಕ್ಷೆಯಿದೆ.
ಟೆಕ್ನೋ ಸ್ಪಾರ್ಕ್ 20C ಬೆಲೆ ಮತ್ತು ಲಭ್ಯತೆ
ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ ಆಕ್ಟೋಬರ್ ಇಲ್ಲವೇ ನವೆಂಬರ್ ಮೊದಲ ವಾರದಲ್ಲಿ ಭಾರತಕ್ಕೆ ಎಂಟ್ರಿ ನೀಡುವ ನಿರೀಕ್ಷೆಯಿದೆ. ಇನ್ನು ಸ್ಮಾರ್ಟ್‌ಫೋನ್ ಬಜೆಟ್ ಸ್ನೇಹಿ ಬೆಲೆಯಲ್ಲಿ ಬರುವ ನಿರೀಕ್ಷೆಯನ್ನು ಇಡಲಾಗಿದೆ. ಇದರ ಕಲರ್ ಆಯ್ಕೆಗಳ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.
ಇನ್ನು ಟೆಕ್ನೋ ಕಂಪೆನಿ ಇತ್ತೀಚಿಗೆ ಹೊಸ ಟೆಕ್ನೋ ಫ್ಯಾಂಟಮ್ V ಫ್ಲಿಪ್ 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.9 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8050 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಅನ್ನು ಒಳಗೊಂಡಿದೆ.


Click it and Unblock the Notifications








