Home
ಸುದ್ದಿಜಾಲ

ಇಂದು 8GB RAM ಸೌಲಭ್ಯದ ಈ ಫೋನ್‌ ಫಸ್ಟ್‌ ಸೇಲ್‌ ಪ್ರಾರಂಭ!.ಬೆಲೆ 7,999ರೂ!

ಟೆಕ್ನೋ ಕಂಪನಿಯು ನೂತನವಾಗಿ ಭಾರತದಲ್ಲಿ ಬಿಡುಗಡೆ ಮಾಡಿರುವ 'ಟೆಕ್ನೋ ಸ್ಪಾರ್ಕ್ 20C' ಈಗಾಗಲೇ ಬೆಲೆ ಹಾಗೂ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಈ ಫೋನ್ ಇಂದು (ಮಾರ್ಚ್‌ 5 ರಂದು) ಅಮೆಜಾನ್‌ ಪ್ಲಾಟ್‌ಫಾರ್ಮ್ ಮೂಲಕ ಮೊದಲ ಸೇಲ್‌ ಪ್ರಾರಂಭ ಮಾಡಲಿದೆ. ಅಂದಹಾಗೆ ಈ ಫೋನಿನ ಆರಂಭಿಕ ಬೆಲೆ 7,999ರೂ. ಆಗಿದೆ.

ಹೌದು, ಟೆಕ್ನೋ ಸಂಸ್ಥೆಯ ಇತ್ತೀಚಿನ ಟೆಕ್ನೋ ಸ್ಪಾರ್ಕ್ 20C ಫೋನಿನ ಫಸ್ಟ್‌ ಸೇಲ್‌ ಮಾರ್ಚ್‌ 5 ರಂದು ಅಮೆಜಾನ್‌ ತಾಣದ ಮೂಲಕ ಶುರುವಾಗಿಲಿದೆ. ಅಂದಹಾಗೆ ಈ ಫೋನ್ 8GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಹಾಗೆಯೇ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಈ ಫೋನಿನಲ್ಲಿ ಕಾಣಬಹುದಾಗಿದೆ.

ಇಂದು 8GB RAM ಸೌಲಭ್ಯದ ಈ ಫೋನ್‌ ಫಸ್ಟ್‌ ಸೇಲ್‌ ಪ್ರಾರಂಭ!.ಬೆಲೆ 7,999ರೂ!

ಅಲ್ಲದೇ ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಅದೇ ರೀತಿ ಈ ಫೋನ್‌ ಮೀಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಪವರ್‌ ಸೌಲಭ್ಯ ಕೂಡಾ ಪಡೆದುಕೊಂಡಿದೆ. ಇನ್ನುಳಿದಂತೆ ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಇಂದು 8GB RAM ಸೌಲಭ್ಯದ ಈ ಫೋನ್‌ ಫಸ್ಟ್‌ ಸೇಲ್‌ ಪ್ರಾರಂಭ!.ಬೆಲೆ 7,999ರೂ!

ಟೆಕ್ನೋ ಸ್ಪಾರ್ಕ್ 20C - ಫೀಚರ್ಸ್‌ ಮಾಹಿತಿ

ಟೆಕ್ನೋ ಸಂಸ್ಥೆಯ ಈ ಮೊಬೈಲ್‌ 6.6 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇನ್ನು ಡಿಸ್‌ಪ್ಲೇಯು 720×1612 ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ ಆಯ್ಕೆ ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದ್ದು, ಇದಲ್ಲದೆ ಡಿಸ್‌ಪ್ಲೇ ಸೆಂಟರ್ಡ್ ಪಂಚ್ ಹೋಲ್ ನಾಚ್, ಮತ್ತು ಡೈನಾಮಿಕ್ ಪೋರ್ಟ್‌ ಆಯ್ಕೆಗಳನ್ನು ಒಳಗೊಂಡಿದೆ.

ಅಲ್ಲದೇ ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಬೆಂಬಲದೊಂದಿಗೆ ಕಾರ್ಯ ಮಾಡಲಿದೆ. ಅಲ್ಲದೇ ಈ ಫೋನ್‌ PowerVR GE8320 GPU ಸಪೋರ್ಟ್‌ ಕೂಡಾ ಪಡೆದುಕೊಂಡಿದೆ. ಹಾಗೆಯೇ 8GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದ್ದು, ಹೆಚ್ಚುವರಿಯಾಗಿ 8GB ವರ್ಚುವಲ್ RAM ಸೌಲಭ್ಯ ಸಹ ಹೊಂದಿದೆ.

ಟೆಕ್ನೋ ಸಂಸ್ಥೆಯ ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ ಹಿಂಭಾಗದಲ್ಲಿ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಅನ್ನು ಪಡೆದಿದೆ. ಇದು PDAF ಮತ್ತು HDR AI ಲೆನ್ಸ್ ಮತ್ತು ಡ್ಯುಯಲ್ LED ಫ್ಲ್ಯಾಷ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದರೊಂದಿಗೆ ಡ್ಯುಯಲ್ ಫ್ಲ್ಯಾಷ್‌ ಅನ್ನು ಸಹ ನೀಡಲಾಗಿದೆ.

ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 18W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲ ಮಾಡುತ್ತದೆ. ಇನ್ನು ಈ ಫೋನ್‌ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಹಾಗೂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿದೆ.

ದೇಶಿಯ ಮಾರುಕಟ್ಟೆಯಲ್ಲಿ ಟೆಕ್ನೋ ಸ್ಪಾರ್ಕ್ 20C ಫೋನ್‌ 8GB + 128GB ಮಾಡೆಲ್‌ ಬೆಲೆಯು 8,999 ರೂ. ಆಗಿದೆ. ಆದರೆ ಆರಂಭಿಕ ಕೊಡುಗೆಯಾಗಿ, ಸಂಸ್ಥೆಯು 1000ರೂ. ಗಳ ರಿಯಾಯಿತಿ ತಿಳಿಸಿದೆ. ಹೀಗಾಗಿ ಗ್ರಾಹಕರು 7,999ರೂ. ಗಳ ಬೆಲೆಯಲ್ಲಿ ಫೋನ್‌ ಖರೀದಿ ಮಾಡಬಹುದು. ಇನ್ನು ಈ ಫೋನ್‌ (ಇಂದು) ಮಾರ್ಚ್‌ 5 ರಿಂದ ಅಮೆಜಾನ್‌ ತಾಣದ ಮೂಲಕ ಫಸ್ಟ್‌ ಸೇಲ್‌ ಪ್ರಾರಂಭಿಸಲಿದೆ.

Best Mobiles in India

English summary
Tecno Spark 20C first sale in India Today. This Phone Offer Price at Rs 7999. check specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+