Home
ಸುದ್ದಿಜಾಲ

ಟೆಕ್ನೋದ ಈ 50 ಮೆಗಾಪಿಕ್ಸಲ್‌ ಕ್ಯಾಮೆರಾ ಫೋನ್‌ ಬೆಲೆಯಲ್ಲಿ ಬಿಗ್ ಡಿಸ್ಕೌಂಟ್‌!

ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಇದೀಗ ಟೆಕ್ನೋ ಅಪ್‌ಗ್ರೇಡ್‌ ಸೇಲ್‌ ಮಾರಾಟ ಪ್ರಾರಂಭಿಸಿಲಾಗಿದ್ದು, ಈ ಸೇಲ್‌ನಲ್ಲಿ ಆಯ್ದ ಟೆಕ್ನೋ ಫೋನ್‌ಗಳು ಭಾರೀ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.

ಹೌದು, ಅಮೆಜಾನ್‌ ತಾಣದಲ್ಲಿ ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್‌ ಶೇ. 14% ರಷ್ಟು ಡಿಸ್ಕೌಂಟ್‌ ಹೊಂದಿದೆ. ಈ ಫೋನಿನ 16GB*+128GB ವೇರಿಯಂಟ್‌ ಅನ್ನು ಗ್ರಾಹಕರು 8,999ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳಿಂದ ಇತರೆ ರಿಯಾಯಿತಿ ಕೂಡಾ ಲಭ್ಯ.

ಟೆಕ್ನೋದ ಈ 50 ಮೆಗಾಪಿಕ್ಸಲ್‌ ಕ್ಯಾಮೆರಾ ಫೋನ್‌ ಬೆಲೆಯಲ್ಲಿ ಬಿಗ್ ಡಿಸ್ಕೌಂಟ್‌!

ಇನ್ನು ಟೆಕ್ನೋ ಸ್ಪಾರ್ಕ್ 20C ಮೊಬೈಲ್‌ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದ್ದು, ಹಾಗೆಯೇ ಮೀಡಿಯಾ ಟೆಕ್‌ ಹಿಲಿಯೋ P35 SoC ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದಿದೆ. ಇದರೊಂದಿಗೆ ಮೊಬೈಲ್‌ನ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಇನ್ನುಳಿದಂತೆ ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಸ್ಪಾರ್ಕ್ 20C ಫೋನ್‌ ಫೀಚರ್ಸ್‌

ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್‌ 6.6 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇನ್ನು ಡಿಸ್‌ಪ್ಲೇಯು 720 × 1612 ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ ಆಯ್ಕೆ ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದ್ದು, ಇದಲ್ಲದೆ ಡಿಸ್‌ಪ್ಲೇ ಸೆಂಟರ್ಡ್ ಪಂಚ್ ಹೋಲ್ ನಾಚ್, ಮತ್ತು ಡೈನಾಮಿಕ್ ಪೋರ್ಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಈ ಫೋನ್‌ PowerVR GE8320 GPU ಸಪೋರ್ಟ್‌ ಕೂಡಾ ಪಡೆದುಕೊಂಡಿದೆ. ಹಾಗೆಯೇ 8GB + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದ್ದು, ಹೆಚ್ಚುವರಿಯಾಗಿ 8GB ವರ್ಚುವಲ್ RAM ಸೌಲಭ್ಯ ಸಹ ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಅನ್ನು ಹೊಂದಿದೆ. ಇದು PDAF ಮತ್ತು HDR AI ಲೆನ್ಸ್ ಮತ್ತು ಡ್ಯುಯಲ್ LED ಫ್ಲ್ಯಾಷ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದರೊಂದಿಗೆ ಡ್ಯುಯಲ್ ಫ್ಲ್ಯಾಷ್‌ ಅನ್ನು ಸಹ ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಹಾಗೂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್‌ 8 GB + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್‌ ಗ್ರ್ಯಾವಿಟಿ ಬ್ಲ್ಯಾಕ್, ಮ್ಯಾಜಿಕ್ ಸ್ಕೀನ್ ಗ್ರೀನ್ ಹಾಗೂ ಮೈಸ್ಟ್ರಿ ವೈಟ್ ಕಲರ್‌ ಆಯ್ಕೆಗಳಲ್ಲಿ ಲಭ್ಯ. ಇನ್ನು ಖರೀದಿದಾರರು ಅಮೆಜಾನ್ ತಾಣದಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
TECNO Spark 20C received awesome price drop on amazon tecno upgrade sale. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+