ಅಗ್ಗದ ಬೆಲೆಯಲ್ಲಿ ಲಾಂಚ್ ಆಯ್ತು ಟೆಕ್ನೋ ಸ್ಪಾರ್ಕ್ 20C ಫೋನ್!..ಫೀಚರ್ಸ್ ಹೀಗಿವೆ!
ಟೆಕ್ನೋ ಮೊಬೈಲ್ ಸಂಸ್ಥೆಯು ಭಾರತೀಯ ಮಾರುಕಟ್ಟೆಗೆ ನೂತನವಾಗಿ ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಫೋನ್ ಅಗ್ಗದ ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಅದಾಗ್ಯೂ, ಕೆಲವೊಂದು ಫೀಚರ್ಸ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ.
ಹೌದು, ಟೆಕ್ನೋ ಸಂಸ್ಥೆಯು ಹೊಸದಾಗಿ ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ ಮೀಡಿಯಾಟೆಕ್ ಹಿಲಿಯೋ P35 SoC ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಇದರೊಂದಿಗೆ 5000mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಒಳಗೊಂಡಿದೆ.

ಅಲ್ಲದೇ ಈ ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದ್ದು, ಹೆಚ್ಚುವರಿಯಾಗಿ 8GB ವರ್ಚುವಲ್ RAM ಸೌಲಭ್ಯ ಸಹ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್ 50 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್ ಕೂಡಾ ಪಡೆದಿರುವುದು ಆಕರ್ಷಣಿಯ ಆಗಿದೆ. ಹಾಗಾದರೇ ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಟೆಕ್ನೋ ಸ್ಪಾರ್ಕ್ 20C - ಫೀಚರ್ಸ್
ಟೆಕ್ನೋ ಸ್ಪಾರ್ಕ್ 20C ಮೊಬೈಲ್ 6.6 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇನ್ನು ಡಿಸ್‌ಪ್ಲೇಯು 720×1612 ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಆಯ್ಕೆ ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದ್ದು, ಇದಲ್ಲದೆ ಡಿಸ್‌ಪ್ಲೇ ಸೆಂಟರ್ಡ್ ಪಂಚ್ ಹೋಲ್ ನಾಚ್, ಮತ್ತು ಡೈನಾಮಿಕ್ ಪೋರ್ಟ್ ಆಯ್ಕೆಗಳನ್ನು ಪಡೆದುಕೊಂಡಿದೆ.

ಹಾಗೆಯೇ ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಈ ಫೋನ್ PowerVR GE8320 GPU ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಹಾಗೆಯೇ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದ್ದು, ಹೆಚ್ಚುವರಿಯಾಗಿ 8GB ವರ್ಚುವಲ್ RAM ಸೌಲಭ್ಯ ಸಹ ಪಡೆದುಕೊಂಡಿದೆ.
ಟೆಕ್ನೋ ಸಂಸ್ಥೆಯ ಈ ನೂತನ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಅನ್ನು ಹೊಂದಿದೆ. ಇದು PDAF ಮತ್ತು HDR AI ಲೆನ್ಸ್ ಮತ್ತು ಡ್ಯುಯಲ್ LED ಫ್ಲ್ಯಾಷ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದರೊಂದಿಗೆ ಡ್ಯುಯಲ್ ಫ್ಲ್ಯಾಷ್ ಅನ್ನು ಸಹ ನೀಡಲಾಗಿದೆ.
ಟೆಕ್ನೋ ಸ್ಪಾರ್ಕ್ 20C ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್ ಹಾಗೂ ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದುಕೊಂಡಿದೆ.
ಟೆಕ್ನೋ ಸ್ಪಾರ್ಕ್ 20C ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 20C ಫೋನ್ 8GB + 128GB ವೇರಿಯಂಟ್ ಬೆಲೆಯು 8,999 ರೂ. ಆಗಿದೆ. ಆದರೆ ಲಾಂಚ್ ಕೊಡುಗೆಯಾಗಿ, ಟೆಕ್ನೋ ಸಂಸ್ಥೆಯು ಫ್ಲಾಟ್ 1000ರೂ. ಗಳ ರಿಯಾಯಿತಿಯನ್ನು ಲಭ್ಯ ಮಾಡಲಿದೆ. ಹೀಗಾಗಿ ಈ ಫೋನ್ ಅನ್ನು ಗ್ರಾಹಕರು 7,999ರೂ. ಗಳ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿ ಮಾಡಬಹುದು. ಇನ್ನು ಟೆಕ್ನೋ ಸ್ಪಾರ್ಕ್ 20C ಫೋನ್ ಇದೇ ಮಾರ್ಚ್ 5 ರಿಂದ ಅಮೆಜಾನ್ ತಾಣದ ಮೂಲಕ ಫಸ್ಟ್ ಸೇಲ್ ಪ್ರಾರಂಭಿಸಲಿದೆ.


Click it and Unblock the Notifications








