ದೇಶಿ ಮಾರುಕಟ್ಟೆಯಲ್ಲಿ ಟೆಕ್ನೋ ಸ್ಪಾರ್ಕ್‌ 5 ಸ್ಮಾರ್ಟ್‌ಫೋನ್‌ ಲಾಂಚ್‌!

|

ಟೆಕ್‌ ವಲಯದಲ್ಲಿ ಹಲವು ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಈಗಾಗಲೇ ಹಲವು ಕಂಪೆನಿಗಳು ತಮ್ಮ ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿವೆ. ಇವುಗಳಲ್ಲಿ ಟೆಕ್ನೋ ಕಂಪೆನಿ ಕೂಡ ಒಂದಾಗಿದೆ. ಸದ್ಯ ಟೆಕ್ನೋ ಕಂಪನಿಯು ಈಗಾಗಲೇ ಹಲವು ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ಭಾರತದ ಮಾರುಕಟ್ಟೆಯಲ್ಲಿ ತನ್ನದೇ ಆದ ಜನಪ್ರಿಯತೆಯನ್ನ ಪಡೆದುಕೊಂಡಿದೆ. ಸದ್ಯ ಈ ಸಂಸ್ಥೆಯು ಇದೀಗ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಟೆಕ್ನೋ

ಹೌದು, ಟೆಕ್ನೋ ಕಂಪೆನಿಯು ತನ್ನ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಸದ್ಯ ಇದೀಗ ಟೆಕ್ನೋ ಸ್ಪಾರ್ಕ್‌ 5 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್‌ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾ ಒಳಗೊಂಡಿರುವ ಎಐ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 6.6-ಇಂಚಿನ "ಡಾಟ್-ಇನ್" ಡಿಸ್ಪ್ಲೇ ಹೊಂದಿರುವ ಮೊದಲ ಫೋನ್ ಎಂದು ಟೆಕ್ನೋ ಕಂಪೆನಿ ಹೇಳಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಟೆಕ್ನೋ ಸ್ಪಾರ್ಕ್ 5 ಸ್ಮಾರ್ಟ್‌ಫೋನ್‌ 1,600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.6-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಚ್‌ಡಿ + ಡಾಟ್-ಇನ್ ಡಿಸ್‌ಪ್ಲೇ ಹೊಂದಿರುವ ಮೊದಲ ಸ್ಮಾರ್ಟ್‌ಫೋನ್‌ ಆಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 20: 9 ರಚನೆಯ ಅನುಪಾತವನ್ನ ಒಳಗೊಂಡಿದೆ. ವೀಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A22 ಸೋಕ್ 2GHz ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಸ್ಮಾರ್ಟ್ಫೋನ್ ಹಿಯೋಸ್ 6.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 2GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಟೆಕ್ನೋ ಸ್ಪಾರ್ಕ್‌ 5 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ,ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ ಎಐ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಮ್ಯಾಕ್ರೋ, ಬೊಕೆ ಎಫೆಕ್ಟ್, ಆಟೋ ದೃಶ್ಯ ಪತ್ತೆ, ಎಐ ಎಚ್‌ಡಿಆರ್, ಎಆರ್ ಮೋಡ್‌ನಂತಹ ಫೀಚರ್ಸ್‌ಗಳನ್ನ ನೀಡಲಾಗಿದೆ. ಇದಲ್ಲದೆ ಎಲ್ಇಡಿ ಫ್ಲ್ಯಾಷ್‌ ಹೊಂದಿರುವ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G LTE, ವೈ-ಫೈ 802 ಎಸಿ, ಮತ್ತು ಬ್ಲೂಟೂತ್ 5.0 ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಫೇಸ್ ಅನ್‌ಲಾಕ್ ಅನ್ನು ಒಳಗೊಂಡಿದೆ.

Best Mobiles in India

English summary
Tecno Spark 5 smartphone was launched by the company on Thursday. Tecno says this is the first phone in the segment with a 13-megapixel AI quad rear camera setup and a 6.6-inch “Dot-in” display.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X