ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಟೆಕ್ನೋ ಸ್ಪಾರ್ಕ್ 6 ಏರ್ ಸ್ಮಾರ್ಟ್‌ಫೋನ್‌ !

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಟೆಕ್ನೋ ಕಂಪೆನಿ ತನ್ನ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಸದ್ಯ ಇದೀಗ ತನ್ನ ಜನಪ್ರಿಯ ಬಜೆಟ್ ಸ್ಪಾರ್ಕ್ ಸರಣಿಯಲ್ಲಿ ಜುಲೈ 30ರಂದು ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗೆ ಟೆಕ್ನೋ ಸ್ಪಾರ್ಕ್ 6 ಏರ್ ಎಂದು ಹೆಸರಿಸಲಾಗಿದ್ದು, ಇದನ್ನು ಕಂಪನಿಯು ತನ್ನ 'ಇಂಡಿಯಾ-ಫಸ್ಟ್' ತಂತ್ರದ ಭಾಗವಾಗಿ ಭಾರತದಲ್ಲಿ ಬಿಡುಗಡೆ ಮಾಡಲಿದೆ.

ಟೆಕ್ನೋ

ಹೌದು, ಟೆಕ್ನೋ ಕಂಪೆನಿ ತನ್ನ ಬಜೆಟ್‌ ಸ್ಪಾರ್ಕ್‌ ಸರಣಿಯಲ್ಲಿ ಟೆಕ್ನೋ ಸ್ಪಾರ್ಕ್‌ 6 ಏರ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇದಕ್ಕೆ ಸಂಬಂದಿಸಿದಂತೆ ಟೆಕ್ನೋ ಸ್ಪಾರ್ಕ್‌ ಕಂಪೆನಿ ತನ್ನ 14 ಸೆಕೆಂಡುಗಳ ಟೀಸರ್ ವೀಡಿಯೋವನ್ನು ಸೊಶೀಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ. ಸದ್ಯ ಈ ಕಿರು ವಿಡಿಯೋದಲ್ಲಿ ಸ್ಮಾರ್ಟ್‌ಫೋನ್‌ನ ವಿಶೇಷತೆ ಏನು ಅನ್ನೊದನ್ನ ತಿಳಿಸಲಾಗಿದೆ. ಸದ್ಯ ಲಭ್ಯ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಸ್ಪಾರ್ಕ್

ಸದ್ಯ ಆನ್‌ಲೈನ್‌ನಲ್ಲಿ ಲಭ್ಯವಾಗಿರುವ ಮಾಹಿತಿ ಪ್ರಕಾರ ಟೆಕ್ನೋ ಸ್ಪಾರ್ಕ್ 6 ಏರ್ ಅನ್ನು ಸಬ್ -8K ವಿಭಾಗದಲ್ಲಿ ಅತಿದೊಡ್ಡ ಬ್ಯಾಟರಿ ಮತ್ತು ಅತಿದೊಡ್ಡ ಡಿಸ್‌ಪ್ಲೇಯನ್ನ ಒಳಗೊಂಡಿದೆ ಎಂದು ಹೇಳಲಾಗ್ತಿದೆ. ಇದು 1640 x 720 ಪಿಕ್ಸೆಲ್‌ಗಳ ಎಚ್‌ಡಿ + ರೆಸಲ್ಯೂಶನ್ 7 ಇಂಚಿನ ದೊಡ್ಡ ಡಿಸ್‌ಪ್ಲೇ ಅನ್ನು ಹೊಂದಿರಲಿದೆ ಎನ್ನಲಾಗ್ತಿದೆ. ಅಲ್ಲದೆ ವಿಡಿಯೋ ಕರೆಗಳು ಹಾಗೂ ವಿಡಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನು ಇದು ಹೊಮದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ P22SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು 6,000mAh ಬ್ಯಾಟರಿ ಹೊಂದಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಆದ್ದರಿಂದ ಇದು ದೇಶದಲ್ಲಿ 6,000mAh ಬ್ಯಾಟರಿಯನ್ನು ಹೊಂದಿರುವ ಅಗ್ಗದ ಸ್ಮಾರ್ಟ್‌ಫೋನ್ ಆಗಿ ಲಭ್ಯವಾಗಲಿದೆ ಎಂದು ಹೇಳಲಾಗ್ತಿದೆ. ಇದಲ್ಲದೆ ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ ಎನ್ನಲಾಗ್ತಿದ್ದು, 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗ್ತಿದೆ.

ಟೆಕ್ನೋ ಸ್ಮಾರ್ಕ್

ಸದ್ಯ ಟೆಕ್ನೋ ಸ್ಮಾರ್ಕ್‌ 6 ಏರ್‌ ಸ್ಮಾರ್ಟ್‌ಫೋನ್‌ ಹೊಸ ಮಾದರಿಯ ಬಜೆಟ್‌ ಸ್ಮಾರ್ಟ್‌ಫೋನ್‌ ಆಗಿರಲಿದ್ದು, ಹೊಸ ವಿನ್ಯಾಸ ದೊಂದಿಗೆ ಬರಲಿದೆ. ಯುವಜನತೆಯ ಆಶಯಕ್ಕೆ ತಕ್ಕಂಎತ ಹೊಸ ಫೀಚರ್ಸ್‌ಗಳನ್ನ ಹೊಂದಿರುವುದಲ್ಲೆ ಉತ್ತಮ ಬ್ಯಾಟರಿ ಸಾಮರ್ಥ್ಯದೊಂದಿಗೆ ಬರಲಿದೆ ಎಂದು ಊಹಿಸಲಾಗಿದೆ. ಇದಲ್ಲದೆ ಇದರ ಕ್ಯಾಮೆರಾ ಫೀಚರ್ಸ್‌ಗಳ ಬಗ್ಗೆಯೂ ಸಾಕಷ್ಟು ನಿರೀಕ್ಷೆಯನ್ನ ಇಟ್ಟುಕೊಳ್ಳಲಾಗಿದೆ.

Best Mobiles in India

English summary
In terms of highlights, the Tecno Spark 6 Air is tipped to see biggest battery and biggest display in the sub-8K segment.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X