ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 7 ಪ್ರೊ ಫೋನ್‌ ಎಂಟ್ರಿಗೆ ದಿನಾಂಕ ಫಿಕ್ಸ್‌!

|

ಟೆಕ್ನೋ ಮೊಬೈಲ್ ಕಂಪನಿಯು ಅಗ್ಗದ ಪ್ರೈಸ್‌ಟ್ಯಾಗ್‌ನಲ್ಲಿ ಸ್ಮಾರ್ಟ್‌ಫೋನ್‌ ಪರಿಚಯಿಸಿ ಗ್ರಾಹಕರನ್ನು ಸೆಳೆದಿದೆ. ಕಂಪನಿಯ ತನ್ನ ಇತ್ತೀಚಿಗಿನ ಹೊಸ 'ಸ್ಪಾರ್ಕ್‌ 7 ಪ್ರೊ' ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್ ಮಾಡಲು ದಿನಾಂಕ ನಿಗದಿ ಮಾಡಿದೆ. ಈಗಾಗಲೇ ಬೆಲೆ ಮತ್ತು ಫೀಚರ್ಸ್‌ಗಳಿಂದ ಆಕರ್ಷಕ ಎನಿಸಿರುವ ಸ್ಪಾರ್ಕ್‌ 7 ಪ್ರೊ ಫೋನ್‌ ಇದೇ ಮೇ 25 ರಂದು ದೇಶೀಯ ಮಾರುಕಟ್ಟೆಗೆ ಬಿಡುಗಡೆ ಆಗಲಿದೆ.

ಸ್ಪಾರ್ಕ್‌

ಹೌದು, ಟೆಕ್ನೋ ಕಂಪೆನಿ ತನ್ನ ಹೊಸ ಸ್ಪಾರ್ಕ್‌ 7 ಪ್ರೊ ಫೋನ್‌ ಅನ್ನು ಇದೇ ಮೇ 25 ರಂದು ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಏಪ್ರಿಲ್‌ನಲ್ಲಿ ಗ್ಲೋಬಲ್ ಮಾರುಕಟ್ಟೆಯಲ್ಲಿ ಅನಾವರಣ ಆಗಿತ್ತು. ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್‌ ಬಲವನ್ನು ಪಡೆದಿರುವ ಈ ಫೋನ್ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಇರುವುದು ಪ್ಲಸ್‌ ಪಾಯಿಂಟ್ ಎನಿಸಲಿದೆ. ಹಾಗಾದರೇ ಟೆಕ್ನೋ ಸ್ಪಾರ್ಕ್‌ 7 ಪ್ರೊ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಟೆಕ್ನೋ ಸ್ಪಾರ್ಕ್ 7 ಪ್ರೊ ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 -ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರೀಫ್ರೇಶ್‌ ರೇಟ್‌ ಅನ್ನು ಒಳಗೊಂಡಿದೆ. ಹಾಗೆಯೇ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, ವೀಕ್ಷಣೆಗೆ ಉತ್ತಮ ಎನಿಸಲಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಟೆಕ್ನೋ ಸ್ಪಾರ್ಕ್ 7 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್‌ ಬಲವನ್ನು ಪಡೆದಿರುವ ಈ ಫೋನ್ HiOS 7.5 ಬೆಂಬಲಿತ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 4GB+64GB, 4GB+128GB ಮತ್ತು 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಟೆಕ್ನೋ ಸ್ಪಾರ್ಕ್ 7 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, ಎರಡನೇ ಮತ್ತು ಮೂರನೇ ಕ್ಯಾಮೆರಾ ಸಹ ಉತ್ತಮ ಸೆನ್ಸಾರ್ ಸಪೋರ್ಟ್ ಪಡೆದಿವೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಟೆಕ್ನೋ ಸ್ಪಾರ್ಕ್ 7 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್, ಮೈಕ್ರೋ-ಯುಎಸ್‌ಬಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 7 ಪ್ರೊ ಸ್ಮಾರ್ಟ್‌ಫೋನ್‌ ಬೇಸ್‌ ವೇರಿಯಂಟ್‌ ದರವು 10,000 ಅಥವಾ 11,000 ರೂ.ಗಳಿಂದ ಪ್ರಾರಂಭವಾಗಲಿದೆ ಎಂದು ಊಹಿಸಲಾಗಿದೆ. ಹಾಗೆಯೇ ಸ್ಪ್ರೂಸ್ ಗ್ರೀನ್, ಆಲ್ಪ್ಸ್ ಬ್ಲೂ, ಮ್ಯಾಗ್ನೆಟಿಕ್ ಬ್ಲ್ಯಾಕ್ ಮತ್ತು ನಿಯಾನ್ ಡ್ರೀಮ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

Most Read Articles
Best Mobiles in India

English summary
Tecno Spark 7 Pro : The first variant with 4GB+64GB followed by 4GB+128GB and 6GB+128GB.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X