ಭಾರತದಲ್ಲಿ ಟೆಕ್ನೋ ಸ್ಪಾರ್ಕ್ ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಟೆಕ್ನೋ ಸಂಸ್ಥೆ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೆ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಟೆಕ್ನೋ ಸ್ಪಾರ್ಕ್7 ಅನ್ನು ಭಾರತದಲ್ಲಿ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಏಪ್ರಿಲ್ 9 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ.

ಹೌದು, ಟೆಕ್ನೋ ಸಂಸ್ಥೆ ತನ್ನ ಹೊಸ ಟೆಕ್ನೋ ಸ್ಪಾರ್ಕ್7 ಭಾರತದಲ್ಲಿ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಿನ್ಯಾಸವನ್ನು ಅಮೆಜಾನ್ ಇಂಡಿಯಾದಲ್ಲಿ ಬಹಿರಂಗಪಡಿಸಿದೆ. ಇದು ಮೀಡಿಯಾ ಟೆಕ್ ಹಿಲಿಯೊ ಜಿ 85 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಇನ್ನು ಟೆಕ್ನೋ ಸ್ಪಾರ್ಕ್ 7 ಟೆಕ್ನೋ ಸ್ಪಾರ್ಕ್ 6 ಸ್ಮಾರ್ಟ್‌ಫೋನ್‌ನ ಮುಂದುವರೆದ ಆವೃತ್ತಿಯಾಗಿದೆ. ಇದು ವಾಟರ್ ಡ್ರಾಪ್ ಡಿಸ್‌ಪ್ಲೇ ಹೊಂದಿದೆ ಎನ್ನಲಾಗಿದೆ. ಆದರೆ ಇದರ ಗಾತ್ರದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೂ ಡಿಸ್‌ಪ್ಲೇ ದೊಡ್ಡ ಗಾತ್ರದ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ. ಇನ್ನು ಈ ಡಿಸ್‌ಪ್ಲೇ ಎಚ್‌ಡಿ + ಐಪಿಎಸ್ ಎಲ್ಸಿಡಿ ಸ್ಕ್ರೀನ್ ಹೊಂದಿರಲಿದೆಎ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್
ಇದು ಮೀಡಿಯಾ ಟೆಕ್ ಹಿಲಿಯೊ ಜಿ 85 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇಂಟರ್ ಸ್ಟೋರೇಜ್ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೂ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾದ ಸ್ಪಾರ್ಕ್ 6 4GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿದ್ದರಿಂದ ಆದಕ್ಕೂ ಹೆಚ್ಚಿನ ಆಯ್ಕೆಯಲ್ಲಿ ಈ ಸ್ಮಾರ್ಟ್‌ಫೋನ್ ಬರುವ ಸಾಧ್ಯತೆ ಇದೆ.

ಕ್ಯಾಮೆರಾ
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ ಎನ್ನಲಾಗಿದೆ. ಇನ್ನು ಈ ಕ್ಯಾಮೆರಾಗಳಲ್ಲಿ ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯ, ವಿಡಿಯೋ ಬೊಕೆ ಮತ್ತು ಸ್ಲೋ ಮೋಷನ್ ವೀಡಿಯೊ ಮಾಡುವ ಫೀಚರ್ಸ್ ಅನ್ನು ಹೊಂದಿರಲಿದೆ. ಅಲ್ಲದೆ TECNO ಸ್ಪಾರ್ಕ್ 7 ಸಹ 15X ರಿಂದ 5400X ವರೆಗಿನ ವಿವಿಧ ವೇಗ ಸೆಟ್ಟಿಂಗ್‌ಗಳೊಂದಿಗೆ ಬರುತ್ತದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುವ ಸಾದ್ಯತೆ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಬೆಂಬಲಿಸಲಿದೆ. ಇದರ ವಾಲ್ಯೂಮ್ ರಾಕರ್ ಮತ್ತು ಪವರ್ ಬಟನ್ ಅನ್ನು ಫೋನ್‌ನ ಬಲಭಾಗದಲ್ಲಿ ಇರಿಸಲಾಗಿದೆ.

ಬೆಲೆ ಮತ್ತು ಲಭ್ಯತೆ
ಇದು ಭಾರತದಲ್ಲಿ 10,000 ರೂ ಅಡಿಯಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಹಸಿರು, ಕಪ್ಪು ಮತ್ತು ನೀಲಿ ಎಂಬ ಮೂರು ಬಣ್ಣ ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಸದ್ಯ ಈ ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 9 ರಂದು ಅಮೆಜಾನ್ ಮೂಲಕ ಲಭ್ಯವಿರುತ್ತದೆ ಎಂದು ಹೇಳಲಾಗ್ತಿದೆ.


Click it and Unblock the Notifications