ಭಾರತದಲ್ಲಿ ಟೆಕ್ನೋ ಸ್ಮಾರ್ಕ್ 7 ಸ್ಮಾರ್ಟ್‌ಫೋನ್ ಬಿಡುಗಡೆ! ಬೆಲೆ ಎಷ್ಟು?
ಟೆಕ್ನೋ ಸ್ಪಾರ್ಕ್ ಕಂಪೆನಿ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಗಮನ ಸೆಳೆದಿದೆ. ಇದೀಗ ಟೆಕ್ನೋ ಸ್ಪರ್ಕ್ ಕಂಪನಿಯು ತನ್ನ ಹೊಸ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಟೆಕ್ನೋ ಸ್ಪಾರ್ಕ್ 7 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು 64GB ವರೆಗೆ ಆನ್‌ಬೋರ್ಡ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಎರಡು ವಿಭಿನ್ನ ಸಂರಚನೆಗಳಲ್ಲಿ ಬರುತ್ತದೆ.

ಹೌದು, ಟೆಕ್ನೋ ಸ್ಪಾರ್ಕ್ ಸಂಸ್ಥೆ ಹೊಸ ಟೆಕ್ನೋ ಸ್ಮಾರ್ಕ್ 7 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಸೆಲ್ಫಿ ಫ್ಲ್ಯಾಷ್ ಅನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಡಾಟ್ ನಾಚ್ ಡಿಸ್‌ಪ್ಲೇ ಆಗಿದ್ದು, ಇದು 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ ಸ್ಕ್ರೀನ್ ಟು ಬಾಡಿ 90.34% ಅನುಪಾತವನ್ನು ಹೊಂದಿದೆ. ಅಲ್ಲದೆ 480 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಇನ್ನು ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್ 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3GB RAM ರೂಪಾಂತರವು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ A25 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಹಿಯೋಸ್ 7.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ ಕ್ವಾಡ್ ಎಲ್ಇಡಿ ಫ್ಲ್ಯಾಷ್ ಜೊತೆಗೆ ಎಐ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, ಡ್ಯುಯಲ್ ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲಾಗಿದೆ.

ಬ್ಯಾಟರಿ ಮತ್ತು ಇತರೆ
ಟೆಕ್ನೋ ಸ್ಪಾರ್ಕ್ 7 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 40 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್, ಮೈಕ್ರೋ-ಯುಎಸ್‌ಬಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 7 2GB RAM + 32GB ಇಂಟರ್ ಸ್ಟೋರೇಜ್ ರೂಪಾಂತರದ ಆಯ್ಕೆಯ ಬೆಲೆ 7,499 ರೂ. ಮತ್ತು 3GB RAM ಮತ್ತು 64GB ಸ್ಟೋರೇಜ್ ಆಯ್ಕೆಯ ಬೆಲೆ 8,499.ರೂ ಆಗಿದೆ. ಈ ಸ್ಮಾರ್ಟ್‌ಫೋನ್ ಮ್ಯಾಗ್ನೆಟ್ ಬ್ಲ್ಯಾಕ್, ಮಾರ್ಫಿಯಸ್ ಬ್ಲೂ ಮತ್ತು ಸ್ಪ್ರೂಸ್ ಗ್ರೀನ್ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಇದು ಏಪ್ರಿಲ್ 16 ರಂದು ಮಧ್ಯಾಹ್ನ 12 ರಿಂದ (ಮಧ್ಯಾಹ್ನ) ಅಮೆಜಾನ್ ಮೂಲಕ ಖರೀದಿಸಲು ಲಭ್ಯವಿರುತ್ತದೆ. ಇನ್ನು ಟೆಕ್ನೋ ಸ್ಪಾರ್ಕ್ 7 ನಲ್ಲಿ ಲಾಂಚ್ ಆಫರ್‌ನಲ್ಲಿ ರೂ. 500 ರಿಯಾಯಿತಿ ದೊರೆಯಲಿದೆ.


Click it and Unblock the Notifications




