Home
ಸುದ್ದಿಜಾಲ

ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

ಟೆಕ್ನೋ ಕಂಪೆನಿ ತನ್ನ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಟೆಕ್ನೋ ಕಂಪೆನಿ ಹೊಸ ಟೆಕ್ನೋ ಸ್ಪಾರ್ಕ್‌ 7T ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇದು ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್‌ ಆಗಿದ್ದು, 8,999 ರೂ.ಬೆಲೆಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್ 7T

ಹೌದು, ಟೆಕ್ನೋ ಕಂಪೆನಿ ಹೊಸ ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಒಂದೇ RAM ಮತ್ತು ಶೇಖರಣಾ ಸಂರಚನೆ ಹೊಂದಿದ್ದು, ಮೂರು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಸುತ್ತಲೂ ದಪ್ಪ ಬೆಜೆಲ್‌ಗಳನ್ನು ಹೊಂದಿದೆ. ಜೊತೆಗೆ ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಸಹ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 480 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಮತ್ತು 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಹಿಯೋಸ್ ವಿ 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ದ್ವಿತೀಯ ಕ್ಯಾಮೆರಾ ಸೆನ್ಸಾರ್‌ ಬಗ್ಗೆ ವಿವರ ಬಹಿರಂಗವಾಗಿಲ್ಲ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, 4ಜಿ, ಜಿಪಿಎಸ್, ಬ್ಲೂಟೂತ್ ವಿ 5, ಒಟಿಜಿ ಬೆಂಬಲವನ್ನು ಹೊಂದಿದೆ. ಜೊತೆಗೆ ರಿಯರ್‌ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್‌ ಬೆಲೆ 4GB RAM + 64GB ಶೇಖರಣಾ ಮಾದರಿಗೆ 8,999 ರೂ.ಬೆಲೆಯನ್ನು ಹೊಂದಿದೆ. ಇದು ಜ್ಯುವೆಲ್ ಬ್ಲೂ, ಮ್ಯಾಗ್ನೆಟ್ ಬ್ಲ್ಯಾಕ್ ಮತ್ತು ನೆಬ್ಯುಲಾ ಆರೆಂಜ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಇದೇ ಜೂನ್ 15 ರಿಂದ ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಅಮೆಜಾನ್ ಮೂಲಕ ಫೋನ್ ಮಾರಾಟವಾಗಲಿದೆ. ಇನ್ನು ಮಾರಾಟದ ಮೊದಲ ದಿನದಂದು 1,000 ರಿಯಾಯಿತಿ ಸಹ ದೊರೆಯಲಿದೆ.

Best Mobiles in India

English summary
Tecno Spark 7T is backed by a massive 6,000mAh battery that can deliver over 30 days of standby power.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+