ಟೆಕ್ನೋ ಸ್ಪಾರ್ಕ್‌ 8 ಸ್ಮಾರ್ಟ್‌ಫೋನಿನ ಹೊಸ 4GB RAM ವೇರಿಯೆಂಟ್‌ ಅನಾವರಣ!

|

ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್ನೋ ಕಂಪೆನಿ ಹೆಸರುವಾಸಿಯಾಗಿದೆ. ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 8 ಸ್ಮಾರ್ಟ್‌ಫೋನಿನ ಹೊಸ 4GB RAM ವೇರಿಯೆಂಟ್‌ ಅನ್ನು ಅನಾವರಣಗೊಳಿಸಿದೆ. ಇದು ಮೂಲ ಟೆಕ್ನೋ ಸ್ಪಾರ್ಕ್ 8 ಫೋನ್‌ಗಿಂತ ಕೆಲವು ವ್ಯತ್ಯಾಸಗಳನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್‌ 8

ಹೌದು, ಟೆಕ್ನೋ ಕಂಪೆನಿ ತನ್ನ ಟೆಕ್ನೋ ಸ್ಪಾರ್ಕ್‌ 8 ಫೋನ್‌ನ ಹೊಸ ವೇರಿಯೆಂಟ್‌ ಅನ್ನು ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.56 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G25 ಗೇಮಿಂಗ್ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಹೊಸ ಟೆಕ್ನೋ ಸ್ಪಾರ್ಕ್ 8 ಮಾದರಿಯು ಭಾರತೀಯ ಭಾಷಾ ಬೆಂಬಲದೊಂದಿಗೆ ಬರುತ್ತದೆ. ಇತರ ಟೆಕ್ನೋ ಸ್ಪಾರ್ಕ್ 8 ರೂಪಾಂತರಗಳಂತೆ, ಹೊಸ ರೂಪಾಂತರವನ್ನು ಮೂರು ಬಣ್ಣ ಆಯ್ಕೆಗಳಲ್ಲಿ ಖರೀದಿಸಬಹುದು. ಹಾಗಾದ್ರೆ ಟೆಕ್ನೋ ಸ್ಪಾರ್ಕ್‌ 8 4GB RAM ಆಯ್ಕೆಯ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಸ್ಪಾರ್ಕ್‌ 8 ಸ್ಮಾರ್ಟ್‌ಫೋನ್‌ 720x1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.56 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಡಾಟ್ ನಾಚ್ ವಿನ್ಯಾಸವನ್ನು ಹೊಂದಿದ್ದು, 20.15:9 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು 480 ನಿಟ್ಸ್ ಗರಿಷ್ಠ ಬ್ರೈಟ್‌ನಸ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 269ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಟೆಕ್ನೋ ಸ್ಪಾರ್ಕ್‌ 8 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G25 ಗೇಮಿಂಗ್ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 11 (Go ಆವೃತ್ತಿ) ನಲ್ಲಿ HiOS v7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ರೂಪಾಂತರವು 64GB ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ನೀಡಲಾಗಿದೆ. ಇದರೊಂದಿಗೆ ಹೈಪರ್‌ಎಂಜಿನ್ ತಂತ್ರಜ್ಞಾನವು ಗೇಮಿಂಗ್ ಸಮಯದಲ್ಲಿ ಉತ್ತಮ ಕಾರ್ಯಕ್ಷಮತೆಯನ್ನು ಖಚಿತಪಡಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ನ ಹೊಸ ರೂಪಾಂತರವು ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಅನ್ನು ಹೊಂದಿದೆ. ಇದರೊಂದಿಗೆ AI ಲೆನ್ಸ್ ನೀಡಲಾಗಿದ್ದು, ಕ್ವಾಡ್ ಫ್ಲ್ಯಾಷ್‌ಲೈಟ್‌ನೊಂದಿಗೆ ಜೋಡಿಸಲಾಗಿದೆ. ಇನ್ನು ರಿಯರ್‌ ಕ್ಯಾಮೆರಾ ಸೆಟಪ್‌ನಲ್ಲಿ AI ಬ್ಯೂಟಿ, ಸ್ಮೈಲ್ ಶಾಟ್, AI ಪೋರ್ಟ್ರೇಟ್, HDR, AR ಶಾಟ್, ಫಿಲ್ಟರ್‌ಗಳು, ಟೈಮ್-ಲ್ಯಾಪ್ಸ್, ಪನೋರಮಾ, ವಿಡಿಯೋ ಬೋಕ್‌ಹ್ಯಾಂಡ್, ಸ್ಲೋ ಮೋಷನ್ ಮೋಡ್‌ಗಳನ್ನು ನೀಡಲಾಗಿದೆ. ಇನ್ನು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇದು ವೈಡ್ ಸೆಲ್ಫಿ ಮತ್ತು AR ಶಾಟ್ ಮೋಡ್‌ಗಳನ್ನು ಸಹ ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಟೆಕ್ನೋ ಸ್ಪಾರ್ಕ್‌ 8 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65 ದಿನಗಳವರೆಗೆ ಸ್ಟ್ಯಾಂಡ್‌ಬೈ ಟೈಂ, 30 ಗಂಟೆಗಳ ಟಾಕ್‌ ಟೈಮ್‌ ಮತ್ತು 144 ಗಂಟೆಗಳ ಮ್ಯೂಸಿಕ್‌ ಪ್ಲೇಬ್ಯಾಕ್ ಅನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5, GPS, ಮೈಕ್ರೋ-USB ಮತ್ತು 3.5mm ಹೆಡ್‌ಫೋನ್ ಜ್ಯಾಕ್‌ನೊಂದಿಗೆ ಬರುತ್ತದೆ. ಇದು DTS ಸ್ಟಿರಿಯೊ ಸೌಂಡ್ ಎಫೆಕ್ಟ್‌ಗಳನ್ನು ಸಹ ಹೊಂದಿದೆ. ಹೊಸ ಟೆಕ್ನೋ ಸ್ಪಾರ್ಕ್ 8 ರೂಪಾಂತರವು ಭಾರತೀಯ ಭಾಷಾ ಬೆಂಬಲ ವೈಶಿಷ್ಟ್ಯವನ್ನು ಹೊಂದಿದೆ, ಇದು ಬಳಕೆದಾರರಿಗೆ ಆಯ್ದ ಸ್ಥಳೀಯ ಭಾಷೆಗಳಲ್ಲಿ ಸಂವಹನ ನಡೆಸಲು ಅನುವು ಮಾಡಿಕೊಡುತ್ತದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು ಹಿಂಭಾಗದಲ್ಲಿ ಅಳವಡಿಸಲಾಗಿರುವ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ 4GB + 64GB ಸ್ಟೋರೇಜ್ ರೂಪಾಂತರಕ್ಕಾಗಿ 10,999.ರೂ ಬೆಲೆ ಹೊಂದಿದೆ. ಈ ಫೋನ್ ಅಟ್ಲಾಂಟಿಕ್ ಬ್ಲೂ, ಐರಿಸ್ ಪರ್ಪಲ್ ಮತ್ತು ಟರ್ಕೋಯಿಸ್ ಸಯಾನ್ ಬಣ್ಣ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ ಲಾಂಚ್‌ ಆಫರ್‌ನಲ್ಲಿ 799ರೂ ಮೌಲ್ಯದ ಉಚಿತ ಬ್ಲೂಟೂತ್ ಇಯರ್‌ಪೀಸ್ ಅನ್ನು ಪಡೆಯಬಹುದಾಗಿದೆ. ಜೊತೆಗೆ ಒಂದು-ಬಾರಿ ಸ್ಕ್ರೀನ್ ರಿಪ್ಲೇಸ್ಮೆಂಟ್ ಕೂಡ ದೊರೆಯಲಿದೆ.

ಸೆಪ್ಟೆಂಬರ್‌

ಇನ್ನು ಸೆಪ್ಟೆಂಬರ್‌ ತಿಂಗಳಿನಲ್ಲಿ ಅನಾವರಣಗೊಂದಿಡ್ಡ 2GB RAM ಆಯ್ಕೆಯ ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ 6.52 ಹೆಚ್‌ಡಿ+ ಡಾಟ್-ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120-Hz ಟಚ್ ರೆಸ್ಪಾನ್ಸ್‌ ರೇಟ್‌ ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್ A25 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಗೋ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್‌ ಎಐ ಡ್ಯುಯಲ್ ಹೈ-ರೆಸಲ್ಯೂಶನ್ ಕ್ಯಾಮೆರಾ ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 47 ದಿನಗಳವರೆಗೆ ಸ್ಟ್ಯಾಂಡ್‌ಬೈ ಟೈಂ, 34 ಗಂಟೆಗಳ ಟಾಕ್‌ಟೈಂ, 19 ಗಂಟೆಗಳ ವೆಬ್ ಬ್ರೌಸಿಂಗ್, 132 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ಮತ್ತು 21 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಒದಗಿಸಲಿದೆ. ಇನ್ನು ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ 2GB RAM ಆಯ್ಕೆಯ ಬೆಲೆ 7,999ರೂ, ಆಗಿದೆ.

Best Mobiles in India

English summary
Tecno Spark 8 is now being offered in a new 4GB RAM variant in India.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X