ನಾಳೆ ಭಾರತಕ್ಕೆ ಲಗ್ಗೆ ಇಡಲಿದೆ ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌!

|

ಟೆಕ್ನೋ ಕಂಪೆನಿ ಭಾರತದಲ್ಲಿ ಈಗಾಗಲೇ ಬಜೆಟ್‌ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಟೆಕ್ನೋ ಸ್ಪಾರ್ಕ್ ಸರಣಿಯಲ್ಲಿನ ಫೋನ್‌ಗಳು ಇತ್ತೀಚಿಗೆ ಮಾರುಕಟ್ಟೆಯಲ್ಲಿ ಸದ್ದು ಮಾಡಿವೆ. ಇದರ ಮುಂದುವರಿದ ಭಾಗವಾಗಿ ಟೆಕ್ನೋ ಸಂಸ್ಥೆಯು ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ದಿನಾಂಕ ನಿಗದಿ ಮಾಡಿದೆ. ಅಂದಹಾಗೇ ಈ ಫೋನ್ ನವೆಂಬರ್ ತಿಂಗಳಿನಲ್ಲಿ ಅನಾವರಣ ಆಗಿದೆ.

ಭಾರತದಲ್ಲಿ

ಹೌದು, ಟೆಕ್ನೋ ಕಂಪನಿಯು ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ನಾಳೆ (ಡಿಸೆಂಬರ್ 29) ರಂದು ಲಾಂಚ್ ಮಾಡಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಜೊತೆಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ 1,080 x 2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8 ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಡಾಟ್ ನಾಚ್ ಡಿಸ್‌ಪ್ಲೇ ಆಗಿದೆ. ಈ ಡಿಸ್‌ಪ್ಲೇ 84.73 % ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 395 ppi ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ HiOS v7.6 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ಎಷ್ಟು

ಕ್ಯಾಮೆರಾ ಸೆನ್ಸಾರ್ ಎಷ್ಟು

ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ f/1.79 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ f/2.4 ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ AI ಲೆನ್ಸ್ f/2.0 ಲೆನ್ಸ್ ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸೂಪರ್ ನೈಟ್ ಮೋಡ್ 2.0 ಮತ್ತು ಬ್ಯೂಟಿ 4.0 ಬೆಂಬಲಿಸಲಿದೆ. ಇನ್ನು ಈ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯ

ಬ್ಯಾಟರಿ ಮತ್ತು ಇತರೆ ಸೌಲಭ್ಯ

ಟೆಕ್ನೋ ಸ್ಪಾರ್ಕ್‌8 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಫೋನ್ ಪೋರ್ಟ್, 4G, ಬ್ಲೂಟೂತ್ v5, FM ರೇಡಿಯೋ, GPS/ A-GPS, ಮೈಕ್ರೋ-ಯುಎಸ್‌ಬಿ ಪೋರ್ಟ್, OTG, Wi-Fi ಮತ್ತು USB ಪೋರ್ಟ್ ಸೇರಿವೆ. ಜೊತೆಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಜಿ-ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಸ್ಪಾರ್ಕ್‌ 8 ಪ್ರೊ ಸ್ಮಾರ್ಟ್‌ಫೋನ್‌ 6GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ ಬಾಂಗ್ಲಾದೇಶದಲ್ಲಿ BDT 16,990 (ಭಾರತದಲ್ಲಿ ಅಂದಾಜು 14,700ರೂ. ಎಂದು ಊಹಿಸಲಾಗಿದೆ) ಆಗಿದೆ. ಇನ್ನು ಈ ಫೋನ್‌ ಇಂಟರ್‌ಸ್ಟೆಲ್ಲರ್ ಬ್ಲ್ಯಾಕ್ ಮತ್ತು ಕೊಮೊಡೊ ಐಲ್ಯಾಂಡ್ ಬಣ್ಣದ ಆಯ್ಕೆಗಳಲ್ಲಿ ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಖರೀದಿಗೆ ಲಭ್ಯವಿದೆ. ಇದು ಭಾರತದಲ್ಲಿ ಡಿಸೆಂಬರ್ 29 ರಂದು ಬಿಡುಗಡೆ ಆಗಲಿದೆ.

Best Mobiles in India

English summary
Tecno Spark 8 Pro India Launch Date Confirmed for December 29: Expected Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X