Home
ಸುದ್ದಿಜಾಲ

ಟೆಕ್ನೋ ಸ್ಪಾರ್ಕ್ 8 ಪ್ರೊ ಬೆಲೆಯಲ್ಲಿ ಬಿಗ್‌ ಡಿಸ್ಕೌಂಟ್‌!..ಆಫರ್‌ ಬೆಲೆ ಎಷ್ಟು?

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಟೆಕ್ನೊ ಮೊಬೈಲ್‌ ಕಂಪೆನಿ ಅಗ್ಗದ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದಿದೆ. ಅದೇ ಹಾದಿಯಲ್ಲಿ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ ಸಹ ಗ್ರಾಹಕರನ್ನು ಸೆಳೆದಿದೆ. ಈ ಫೋನ್‌ ಇದೀಗ 36% ರಷ್ಟು ರಿಯಾಯಿತಿ ಪಡೆದಿದ್ದು, ಗ್ರಾಹಕರನ್ನು ಸೆಳೆದಿದೆ.

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ತಾಣದಲ್ಲಿ ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ 4GB RAM + 64GB ವೇರಿಯಂಟ್‌ 8,699ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಬ್ಯಾಂಕ್‌ ಆಫರ್‌, ನೋ ಕಾಸ್ಟ್‌ ಇಎಮ್‌ಐ ಆಯ್ಕೆಗಳು ಲಭ್ಯವಾಗಲಿವೆ. ಅಂದಹಾಗೆ ಈ ಫೋನ್‌ ಕ್ಲೇನ್‌ ಹಾಗೂ ಬ್ಲ್ಯಾಕ್‌ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

ಟೆಕ್ನೋ ಸ್ಪಾರ್ಕ್ 8 ಪ್ರೊ ಬೆಲೆಯಲ್ಲಿ ಬಿಗ್‌ ಡಿಸ್ಕೌಂಟ್‌!..ಆಫರ್‌ ಬೆಲೆ ಎಷ್ಟು?

ಹಾಗೆಯೇ ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಹೊಂದಿದೆ. ಹಾಗಾದರೆ ಈ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ : ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ 1,080 x 2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20.5:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್ 8 ಪ್ರೊ ಬೆಲೆಯಲ್ಲಿ ಬಿಗ್‌ ಡಿಸ್ಕೌಂಟ್‌!..ಆಫರ್‌ ಬೆಲೆ ಎಷ್ಟು?

ಪ್ರೊಸೆಸರ್‌ ಬಲ : ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ವಿಟ್ HiOS v7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಮೈಕ್ರೊ SD ಕಾರ್ಡ್ ಮೂಲಕ 512 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ : ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ f/1.79 ಲೆನ್ಸ್ , ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆಕೆಂಡರಿ ಸೆನ್ಸರ್ ಮತ್ತು AI ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಡ್ಯುಯಲ್ LED ಫ್ಲ್ಯಾಷ್‌ನೊಂದಿಗೆ ಬರುತ್ತದೆ.

ಟೆಕ್ನೋ ಸ್ಪಾರ್ಕ್ 8 ಪ್ರೊ ಬೆಲೆಯಲ್ಲಿ ಬಿಗ್‌ ಡಿಸ್ಕೌಂಟ್‌!..ಆಫರ್‌ ಬೆಲೆ ಎಷ್ಟು?

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ಟೆಕ್ನೋ ಸ್ಪಾರ್ಕ್‌ 8 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi 802.11ac, ಬ್ಲೂಟೂತ್ v5.0, GPS/ A-GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಮೆಮೊರಿ ಮತ್ತು ಕಲರ್ ಆಯ್ಕೆ : ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 8 ಪ್ರೊ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ ಇಂಟರ್‌ಸ್ಟೆಲ್ಲರ್ ಬ್ಲ್ಯಾಕ್, ಕ್ಲೈನ್‌ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.

Best Mobiles in India

English summary
Tecno Spark 8 Pro is currently available at discount price on Amazon. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+