ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 8 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

|

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಟೆಕ್ನೊ ಕಂಪೆನಿ ಅಗ್ಗದ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದಿದೆ. ತನ್ನ ಬಜೆಟ್‌ ದರದ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಟೆಕ್ನೋ ಸ್ಪಾರ್ಕ್‌ 8 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ.

 ಟೆಕ್ನೋ ಸ್ಪಾರ್ಕ್ 8 ಪ್ರೊ

ಹೌದು, ಟೆಕ್ನೋ ಕಂಪೆನಿ ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.8-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಫೋನ್‌ ಇಂಟರ್‌ಸ್ಟೆಲ್ಲರ್ ಬ್ಲ್ಯಾಕ್, ಕೊಮೊಡೊ ಐಲ್ಯಾಂಡ್, ಟರ್ಕೋಯಿಸ್ ಸಿಯಾನ್ ಮತ್ತು ವಿನ್ಸರ್ ವೈಲೆಟ್ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದಮ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ 1,080x2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20.5:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ವಿಟ್ HiOS v7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ

ಟ್ರಿಪಲ್‌ ರಿಯರ್‌ ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ f/1.79 ಲೆನ್ಸ್ , ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸರ್ ಮತ್ತು AI ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಡ್ಯುಯಲ್-LED ಫ್ಲ್ಯಾಷ್‌ನೊಂದಿಗೆ ಬರುತ್ತದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಟೆಕ್ನೋ ಸ್ಪಾರ್ಕ್‌ 8 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi 802.11ac, ಬ್ಲೂಟೂತ್ v5.0, GPS/ A-GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 8 ಪ್ರೊ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ಆಯ್ಕೆಗೆ ಲಾಂಚ್‌ ಆಫರ್‌ನಲ್ಲಿ 10,599ರೂ.ಗಳಿಗೆ ದೊರೆಯಲಿದೆ. ಈ ಫೋನ್ ಇಂಟರ್‌ಸ್ಟೆಲ್ಲರ್ ಬ್ಲ್ಯಾಕ್, ಕೊಮೊಡೊ ಐಲ್ಯಾಂಡ್, ಟರ್ಕೋಯಿಸ್ ಸಿಯಾನ್ ಮತ್ತು ವಿನ್ಸರ್ ವೈಲೆಟ್ ಬಣ್ಣಗಳಲ್ಲಿ ಬರುತ್ತದೆ. ಇದು ಅಮೆಜಾನ್ ಮೂಲಕ ಜನವರಿ 4 ರಿಂದ ಖರೀದಿಗೆ ಲಭ್ಯವಿರುತ್ತದೆ.

ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌

ಇದಲ್ಲದೆ ಇದೇ ತಿಂಗಳು (ಡಿಸೆಂಬರ್‌ 23) ಟೆಕ್ನೋ ಕಂಪೆನಿ ಭಾರತದಲ್ಲಿ ಹೊಸ ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಹಿಯೋಸ್ ವಿ 7.6 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್‌ ಪವರ್ ಪಡೆದಿದ್ದು, 5,000WAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ.

Best Mobiles in India

English summary
The new phone is an upgrade of the regular Tecno Spark 8 that debuted in the country in September.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X