ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ! ಪ್ರೊಸೆಸರ್ ಯಾವುದು?
ಟೆಕ್ನೋ ಕಂಪೆನಿ ಟೆಕ್ ವಲಯದಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಟೆಕ್ನೋ ಸ್ಪಾರ್ಕ್ 8ನ ಹೊಸ ಅಪ್ಡೇಟ್ ಆವೃತ್ತಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದಿದೆ.

ಹೌದು, ಟೆಕ್ನೋ ಕಂಪೆನಿ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹೊಸ ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.8 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್ 1,080x2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8 ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಡಾಟ್ ನಾಚ್ ಡಿಸ್‌ಪ್ಲೇ ಆಗಿದೆ. ಈ ಡಿಸ್‌ಪ್ಲೇ 84.73 % ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 395 ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ HiOS v7.6 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಹೇಗಿದೆ?
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ f/1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ f/2.4 ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ AI ಲೆನ್ಸ್ f/2.0 ಲೆನ್ಸ್ ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸೂಪರ್ ನೈಟ್ ಮೋಡ್ 2.0 ಮತ್ತು ಬ್ಯೂಟಿ 4.0 ಬೆಂಬಲಿಸಲಿದೆ. ಇನ್ನು ಈ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಟೆಕ್ನೋ ಸ್ಪಾರ್ಕ್8 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಫೋನ್ ಪೋರ್ಟ್, 4G, ಬ್ಲೂಟೂತ್ v5, FM ರೇಡಿಯೋ, GPS/ A-GPS, ಮೈಕ್ರೋ-ಯುಎಸ್‌ಬಿ ಪೋರ್ಟ್, OTG, Wi-Fi ಮತ್ತು USB ಪೋರ್ಟ್ ಸೇರಿವೆ. ಜೊತೆಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಜಿ-ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್ 6GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ ಬಾಂಗ್ಲಾದೇಶದಲ್ಲಿ Taka 16,990 (ಅಂದಾಜು 14,700ರೂ) ಬೆಲೆ ಹೊಂದಿದೆ. ಇನ್ನು ಈ ಫೋನ್ ಇಂಟರ್‌ಸ್ಟೆಲ್ಲರ್ ಬ್ಲ್ಯಾಕ್ ಮತ್ತು ಕೊಮೊಡೊ ಐಲ್ಯಾಂಡ್ ಬಣ್ಣ ಆಯ್ಕೆಗಳಲ್ಲಿ ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಖರೀದಿಗೆ ಲಭ್ಯವಿದೆ. ಇದು ಭಾರತ ಸೇರಿದಂತೆ ಇತರ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದನ್ನು ಕಂಪನಿಯು ಬಹಿರಂಗಪಡಿಸಿಲ್ಲ.


Click it and Unblock the Notifications








