ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ ಅನಾವರಣ! ಬೆಲೆ ಎಷ್ಟು?

|

ಟೆಕ್ನೋ ಕಂಪೆನಿ ಟೆಕ್‌ ವಲಯದಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಅಗ್ಗದ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ ಅನ್ನು ಅನಾವರಣಗೊಳಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.52 ಹೆಚ್‌ಡಿ+ಡಾಟ್-ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗೆಯೇ 2GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್ 8

ಹೌದು, ಟೆಕ್ನೋ ಕಂಪೆನಿ ಹೊಸ ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇದು ಮೀಡಿಯಾ ಟೆಕ್ A25 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 132 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ಮತ್ತು 21 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಒದಗಿಸುತ್ತದೆ ಎಂದು ಕಂಪೆನಿ ಹೇಳಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಆರಂಬಿಕ ಬೆಲೆ 7,999ರೂ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ 6.52 ಹೆಚ್‌ಡಿ+ ಡಾಟ್-ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120-Hz ಟಚ್ ರೆಸ್ಪಾನ್ಸ್‌ ರೇಟ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 88.6% ಬಾಡಿ ಟು ಅನುಪಾತವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 269 PPI ಸ್ಕ್ರೀನ್ ಪಿಕ್ಸೆಲ್ ಸಾಂದ್ರತೆ ಮತ್ತು 480 ನಿಟ್ಸ್ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ಡಿಜಿಟಲ್ ಜೂಮ್, ಆಟೋ ಫ್ಲಾಶ್, ಫೇಸ್‌ ಡಿಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್ ಫೋನ್ ಮೀಡಿಯಾ ಟೆಕ್ A25 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಗೋ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್‌ ಎಐ ಡ್ಯುಯಲ್ ಹೈ-ರೆಸಲ್ಯೂಶನ್ ಕ್ಯಾಮೆರಾ ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಕ್ಯಾಮೆರಾ ಡ್ಯುಯೆಲ್‌ ಫ್ಲ್ಯಾಷ್‌ ಉತ್ತಮ ಗುಣಮಟ್ಟದ, ಸ್ಮರಣೀಯ ಛಾಯಾಚಿತ್ರಗಳನ್ನು ಸೆರೆಹಿಡಿಯಲು ಅನುವು ಮಾಡಿಕೊಡುತ್ತದೆ. ಈ ಕ್ಯಾಮೆರಾ ಫೀಚರ್ಸ್‌ಗಳಲ್ಲಿ 1080p ಟೈಮ್-ಲ್ಯಾಪ್ಸ್ ಫೋಟೋಗ್ರಫಿ, ಸ್ಮೈಲ್ ಕ್ಯಾಪ್ಚರ್, ಪನೋರಮಾ, ಪೋರ್ಟ್ರೇಟ್ ಮೋಡ್, 120fps ಸ್ಲೋ ಮೋಷನ್ ಪ್ರಯೋಜನ ಸಿಗಲಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 47 ದಿನಗಳವರೆಗೆ ಸ್ಟ್ಯಾಂಡ್‌ಬೈ ಟೈಂ, 34 ಗಂಟೆಗಳ ಟಾಕ್‌ಟೈಂ, 19 ಗಂಟೆಗಳ ವೆಬ್ ಬ್ರೌಸಿಂಗ್, 132 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ಮತ್ತು 21 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಒದಗಿಸಲಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಯುಎಸ್‌ಬಿ ಪೋರ್ಟ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ 7,999ರೂ, ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ಫಸ್ಟ್‌ ಸೇಲ್‌ ಇದೇ ಸೆಪ್ಟೆಂಬರ್ 15ರಿಂದ ನಡೆಯಲಿದೆ.

Best Mobiles in India

English summary
Tecno Spark 8 smartphone is equipped with features such as 64GB memory, which will allow consumers to keep their photos and videos.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X