ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 8T ಫೋನ್‌ ಎಂಟ್ರಿಗೆ ದಿನಾಂಕ ನಿಗದಿ!

|

ಟೆಕ್ನೋ ಮೊಬೈಲ್ ಕಂಪನಿಯು ಅಗ್ಗದ ಪ್ರೈಸ್‌ಟ್ಯಾಗ್‌ನಲ್ಲಿ ಸ್ಮಾರ್ಟ್‌ಫೋನ್‌ ಪರಿಚಯಿಸಿ ಗ್ರಾಹಕರನ್ನು ಸೆಳೆದಿದೆ. ಕಂಪನಿಯ ಬಹುನಿರೀಕ್ಷಿತ ಟೆಕ್ನೋ ಸ್ಪಾರ್ಕ್ 8T (Tecno Spark 8T) ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಆಗಲಿದೆ. ಅಮೆಜಾನ್ ಇಂಡಿಯಾದಲ್ಲಿ ಈ ಸ್ಮಾರ್ಟ್‌ಫೋನ್ ಈಗಾಗಲೇ ಅಧಿಕೃತವಾಗಿ ಪಟ್ಟಿ ಮಾಡಲಾಗಿದೆ. ಅಮೆಜಾನ್ ಇಂಡಿಯಾದಲ್ಲಿ ಸಾಧನಕ್ಕಾಗಿ ಮೀಸಲಾದ ಪುಟವನ್ನು ನೀಡಿದ್ದು, ಫೋನ್‌ ಬಗ್ಗೆ ಕೆಲವೊಂದು ಫೀಚರ್ಸ್‌ಗಳನ್ನು ತಿಳಿಸಿದೆ.

ಸ್ಪಾರ್ಕ್‌

ಹೌದು, ಟೆಕ್ನೋ ಕಂಪೆನಿ ತನ್ನ ಟೆಕ್ನೋ ಸ್ಪಾರ್ಕ್‌ 8T ಅನ್ನು ಇದೇ ಡಿ. 15 ರಂದು ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ರಾಪ್ ನಾಚ್ ಡಿಸ್ಪ್ಲೇಯನ್ನು ಹೊಂದಿರಲಿದ್ದು, ಕ್ವಾಡ್ ಎಲ್ಇಡಿ ಫ್ಲ್ಯಾಷ್ ಯೂನಿಟ್ ಜೊತೆಗೆ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿರಲಿದೆ. ಹಾಗೆಯೇ ಈ ಫೋನ್ ನಾಲ್ಕು ಆಕರ್ಷಕ ಬಣ್ಣಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅವು ಕ್ರಮವಾಗಿ ಅಟ್ಲಾಂಟಿಕ್ ಬ್ಲೂ, ಟರ್ಕೋಯಿಸ್ ಸಯಾನ್, ಕೊಕೊ ಗೋಲ್ಡ್ ಮತ್ತು ಐರಿಸ್ ಪರ್ಪಲ್ ಆಗಿದೆ. ಹಾಗಾದರೇ ಈ ಫೋನಿನ ನಿರೀಕ್ಷಿತ ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದೆ.

ಪ್ರೊಸೆಸರ್‌ ಸಾಮರ್ಥ್ಯ ಎಷ್ಟು

ಪ್ರೊಸೆಸರ್‌ ಸಾಮರ್ಥ್ಯ ಎಷ್ಟು

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿರಲಿದೆ. ಜೊತೆಗೆ 4GB RAM ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾದ ಆಯ್ಕೆ ಇರಲಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ

ಕ್ಯಾಮೆರಾ ಸೆನ್ಸಾರ್ ವಿಶೇಷ

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, ಎರಡನೇ ಕ್ಯಾಮೆರಾವು ಉತ್ತಮ ಸೆನ್ಸಾರ್ ಸಪೋರ್ಟ್ ಪಡೆದಿರಲಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದ್ದು, ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲಾಗಿರುತ್ತದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ VoLTE, ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್, ಮೈಕ್ರೋ-ಯುಎಸ್‌ಬಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಅಮೆಜಾನ್ ಹೊಸ ಲ್ಯಾಂಡಿಂಗ್ ಪುಟದ ಪ್ರಕಾರ, ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ ಇದೇ ಡಿ.15 ರಂದು ಲಾಂಚ್ ಆಗಲಿದೆ. ಈ ಸ್ಮಾರ್ಟ್‌ಫೋನ್‌ನ ಬೆಲೆಯನ್ನು ಕಂಪನಿಯು ಇನ್ನೂ ಘೋಷಿಸಿಲ್ಲ. ಇನ್ನು ಈ ಫೋನ್ ನಾಲ್ಕು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಅವು ಕ್ರಮವಾಗಿ ಅಟ್ಲಾಂಟಿಕ್ ಬ್ಲೂ, ಕೋಕೋ ಗೋಲ್ಡ್, ಐರಿಸ್ ಪರ್ಪಲ್ ಮತ್ತು ಟರ್ಕೋಯಿಸ್ ಸಯಾನ್ ಆಗಿವೆ.

ಭಾರತದಲ್ಲಿ

ಹಾಗೆಯೇ ಟೆಕ್ನೋ ಕಂಪೆನಿ ಭಾರತದಲ್ಲಿ ಇತ್ತೀಚಿಗೆ ಲಾಂಚ್ ಮಾಡಿರುವ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಈ ಫೋನ್ ಆರಂಭಿಕ ಬೆಲೆ 7,999ರೂ ಆಗಿದೆ. ಇನ್ನುಳಿದಂತೆ ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ 6.52 ಹೆಚ್‌ಡಿ+ ಡಾಟ್ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120 Hz ಟಚ್ ರೆಸ್ಪಾನ್ಸ್‌ ರೇಟ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 88.6% ಬಾಡಿ ಟು ಅನುಪಾತವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 269 PPI ಸ್ಕ್ರೀನ್ ಪಿಕ್ಸೆಲ್ ಸಾಂದ್ರತೆ ಮತ್ತು 480 ನಿಟ್ಸ್ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ಡಿಜಿಟಲ್ ಜೂಮ್, ಆಟೋ ಫ್ಲಾಶ್, ಫೇಸ್‌ ಡಿಟೆಕ್ಷನ್‌ ಅನ್ನು ಹೊಂದಿದೆ.

ಸ್ಮಾರ್ಟ್

ಇನ್ನು ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್ ಫೋನ್ ಮೀಡಿಯಾ ಟೆಕ್ A25 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಗೋ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಮೆಗಾಪಿಕ್ಸೆಲ್‌

ಇನ್ನು ಈ ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್‌ ಎಐ ಡ್ಯುಯಲ್ ಹೈ ರೆಸಲ್ಯೂಶನ್ ಕ್ಯಾಮೆರಾ ಹೊಂದಿದೆ. ಜೊತೆಗೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಕ್ಯಾಮೆರಾ ಡ್ಯುಯೆಲ್‌ ಫ್ಲ್ಯಾಷ್‌ ಉತ್ತಮ ಗುಣಮಟ್ಟದ, ಸ್ಮರಣೀಯ ಛಾಯಾಚಿತ್ರಗಳನ್ನು ಸೆರೆಹಿಡಿಯಲು ಅನುವು ಮಾಡಿ ಕೊಡುತ್ತದೆ. ಈ ಕ್ಯಾಮೆರಾ ಫೀಚರ್ಸ್‌ಗಳಲ್ಲಿ 1080p ಟೈಮ್ ಲ್ಯಾಪ್ಸ್ ಫೋಟೋಗ್ರಫಿ, ಸ್ಮೈಲ್ ಕ್ಯಾಪ್ಚರ್, ಪನೋರಮಾ, ಪೋರ್ಟ್ರೇಟ್ ಮೋಡ್, 120fps ಸ್ಲೋ ಮೋಷನ್ ಪ್ರಯೋಜನ ಸಿಗಲಿದೆ.

ಕನೆಕ್ಟಿವಿಟಿ

ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 47 ದಿನಗಳವರೆಗೆ ಸ್ಟ್ಯಾಂಡ್‌ಬೈ ಟೈಂ, 34 ಗಂಟೆಗಳ ಟಾಕ್‌ಟೈಂ, 19 ಗಂಟೆಗಳ ವೆಬ್ ಬ್ರೌಸಿಂಗ್, 132 ಗಂಟೆಗಳ ಮ್ಯೂಸಿಕ್ ಪ್ಲೇ ಬ್ಯಾಕ್ ಮತ್ತು 21 ಗಂಟೆಗಳ ವೀಡಿಯೊ ಪ್ಲೇ ಬ್ಯಾಕ್ ಒದಗಿಸಲಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಯುಎಸ್‌ಬಿ ಪೋರ್ಟ್‌ ಅನ್ನು ಈ ಫೋನ್ ಬೆಂಬಲಿಸಲಿದೆ.

Best Mobiles in India

English summary
Tecno Spark 8T India Launch Confirmed for December 15: Specification.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X