Home
ಸುದ್ದಿಜಾಲ

ಟೆಕ್ನೋ ಸ್ಪಾರ್ಕ್‌ 9 ಬೆಲೆ ಇಳಿಕೆ!..ಇದು ಸಸ್ತಾ ಬೆಲೆಗೆ ಜಬರ್ದಸ್ತ್ ಫೋನ್‌!

ಗ್ರಾಹಕಸ್ನೇಹಿ ಬೆಲೆಯ ಫೋನ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಟೆಕ್ನೋ ಜನಪ್ರಿಯತೆ ಪಡೆದಿದೆ. ಟೆಕ್ನೋದ ಸ್ಪಾರ್ಕ್‌ ಸರಣಿಯ ಕೆಲವು ಫೋನ್‌ಗಳು ಗ್ರಾಹಕರನ್ನು ಸೆಳೆದಿದ್ದು, ಆ ಪೈಕಿ ಟೆಕ್ನೋ ಸ್ಪಾರ್ಕ್‌ 9 ಫೋನ್‌ ಸಹ ಒಂದಾಗಿದೆ. ಇದೀಗ ಈ ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್‌ ಲಭ್ಯ ಇದ್ದು, ಎಂಟ್ರಿ ಲೆವೆಲ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಖುಷಿ ನೀಡಿದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ನಲ್ಲಿ ಟೆಕ್ನೋ ಸ್ಪಾರ್ಕ್‌ 9 ಫೋನ್‌ 32% ರಷ್ಟು ಡಿಸ್ಕೌಂಟ್‌ ಪಡೆದಿದೆ. ಈ ಫೋನ್‌ ಬೆಲೆ 11,499ರೂ. ಇದ್ದು, ಈಗ 7,799ರೂ. ಗಳ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯದ ಆಯ್ಕೆಗಳು ಹಾಗೂ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಲಭ್ಯವಾಗಲಿದೆ. ಹಾಗಾದರೇ ಟೆಕ್ನೋ ಸ್ಪಾರ್ಕ್‌ 9 ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಸ್ಪಾರ್ಕ್‌ 9 ಬೆಲೆ ಇಳಿಕೆ!..ಇದು ಸಸ್ತಾ ಬೆಲೆಗೆ ಜಬರ್ದಸ್ತ್ ಫೋನ್‌!

ಟೆಕ್ನೋ ಸ್ಪಾರ್ಕ್‌ 9 ಡಿಸ್‌ಪ್ಲೇ : ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ 6.6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದ್ದು, 266 ppi ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಪಡೆದಿದ್ದು, ವೀಡಿಯೋ ವೀಕ್ಷಣೆಗೆ ಹಾಗೂ ವೀಡಿಯೋ ಕರೆಗಳಿಗೆ ಯೋಗ್ಯವಾದ ಮಾದರಿಯನ್ನು ಒಳಗೊಂಡಿದೆ.

ಟೆಕ್ನೋ ಸ್ಪಾರ್ಕ್‌ 9 ಬೆಲೆ ಇಳಿಕೆ!..ಇದು ಸಸ್ತಾ ಬೆಲೆಗೆ ಜಬರ್ದಸ್ತ್ ಫೋನ್‌!

ಟೆಕ್ನೋ ಸ್ಪಾರ್ಕ್‌ 9 ಪ್ರೊಸೆಸರ್‌ : ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB, 6GB RAM + 128GB ಹಾಗೂ 3GB RAM + 64GB ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದರಲ್ಲಿ ನೀವು ವರ್ಚುವಲ್‌ RAM ಫೀಚರ್ಸ್‌ ಮೂಲಕ 5GB RAM ವರೆಗೆ RAM ವಿಸ್ತರಿಸಬಹುದು. ಇನ್ನು RAM ವಿಸ್ತರಣೆಗೆ OTA ಅಪ್‌ಡೇಟ್ ಅಗತ್ಯವಿರಬಹುದು ಎಂದು ಕಂಪೆನಿ ಹೇಳಿದೆ.

ಟೆಕ್ನೋ ಸ್ಪಾರ್ಕ್‌ 9 ಕ್ಯಾಮೆರಾ ಕಮಾಲ್ : ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು AI ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾ LED ಫ್ಲ್ಯಾಷ್ ಅನ್ನು ಹೊಂದಿದೆ. ಇದರ ಸೆಲ್ಫಿ ಕ್ಯಾಮೆರಾ ಬಗ್ಗೆ ಮಾಹಿತಿ ಇನ್ನು ಲಭ್ಯವಾಗಿಲ್ಲ.

ಟೆಕ್ನೋ ಸ್ಪಾರ್ಕ್‌ 9 ಬೆಲೆ ಇಳಿಕೆ!..ಇದು ಸಸ್ತಾ ಬೆಲೆಗೆ ಜಬರ್ದಸ್ತ್ ಫೋನ್‌!

ಟೆಕ್ನೋ ಸ್ಪಾರ್ಕ್‌ 9 ಬ್ಯಾಟರಿ ಬ್ಯಾಕ್‌ಅಪ್‌ : ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಮತ್ತು ಬ್ಲೂಟೂತ್ 5.0. GPS, GNSS, ಗೆಲಿಲಿಯೋ, ಬೀಡೌ ಮತ್ತು 4G LTE ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ DTS ಬೆಂಬಲಿಸುವ ಸ್ಪೀಕರ್‌ಗಳನ್ನು ಒಳಗೊಂಡಿದೆ. ಜೊತೆಗೆ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಆಕ್ಸಿಲೆರೊಮೀಟರ್‌ ಅನ್ನು ಒಳಗೊಂಡಿದೆ.

ಟೆಕ್ನೋ ಸ್ಪಾರ್ಕ್‌ 9 ಮೆಮೊರಿ ಮತ್ತು ಕಲರ್ ಆಯ್ಕೆ : ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ 4GB + 64GB ಸ್ಟೋರೇಜ್‌ ಹಾಗೂ 6GB RAM + 128GB ಸ್ಟೋರೇಜ್‌ ಆಯ್ಕೆಗಳನ್ನು ಪಡೆದಿದೆ. ಈ ಫೋನ್‌ ಅನ್ನು ನೀವು ಇನ್ಫಿನಿಟಿ ಬ್ಲಾಕ್ ಮತ್ತು ಸ್ಕೈ ಮಿರರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
Tecno Spark 9 Price cut on Amazon: Check offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+